Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:49 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 “‘ಆಕಾಶವು ನನಗೆ ಸಿಂಹಾಸನ, ಭೂಮಿಯು ನನ್ನ ಪಾದಗಳಿಗೆ ಪೀಠ; ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವುದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಸ್ವರ್ಗವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದಪೀಠ. ಇಂತಿರಲು, ನನ್ನಂಥವನಿಗೆ ಎಂಥ ಆಲಯವನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವಾದರೂ ಯಾವುದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಆಕಾಶವು ನನಗೆ ಸಿಂಹಾಸನ, ಭೂವಿುಯು ನನ್ನ ಪಾದಗಳಿಗೆ ಪೀಠ. ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ‘ಪ್ರಭುವು ಹೀಗೆನ್ನುತ್ತಾನೆ, ಪರಲೋಕವು ನನ್ನ ಸಿಂಹಾಸನ. ಭೂಮಿಯು ನನ್ನ ಪಾದಪೀಠ. ನೀವು ನನಗೋಸ್ಕರ ಯಾವ ಬಗೆಯ ಮನೆಯನ್ನು ಕಟ್ಟಬಲ್ಲಿರಿ? ನಾನು ವಿಶ್ರಮಿಸಿಕೊಳ್ಳತಕ್ಕ ಸ್ಥಳವೇ ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 “ ‘ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದ ಪೀಠ. ನೀವು ನನಗಾಗಿ ಎಂಥಾ ಆಲಯವನ್ನು ಕಟ್ಟುವಿರಿ? ಎಲ್ಲಿ ನನ್ನ ವಿಶ್ರಾಂತಿಯ ಸ್ಥಳ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

49 ಸರ್ಗ್‍ ಮಾಜೊ ಸಿವಾಸನ್, ಅನಿ ಜಿಮಿನ್ ಮಾಜೆ ಪಾಯ್ ಥವ್ತಲಿ ಮ್ಹನಿ ತುಮಿ ಮಾಜ್ಯಾ ಸಾಟ್ನಿ ಕಸ್ಲೆ ಘರ್ ಬಾಂದುಕ್ ಹೊತಾ? ಮಿಯಾ ಆರಾಮ್ ಕರ್‍ತಲೊ ಜಾಗೊ ಖೈ ಹಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:49
13 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆನ್ನುತ್ತಾನೆ: “ಆಕಾಶವು ನನಗೆ ಸಿಂಹಾಸನ, ಭೂಮಿಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ, ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು?


ಯೆಹೋವನು ತನ್ನ ಪರಿಶುದ್ಧಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ.


ಯೇಸು ಆಕೆಗೆ “ಅಮ್ಮಾ, ನನ್ನ ಮಾತನ್ನು ನಂಬು, ಒಂದು ಕಾಲ ಬರುತ್ತದೆ. ಆ ಕಾಲದಲ್ಲಿ ನೀವು ತಂದೆಯನ್ನು ಆರಾಧಿಸಬೇಕಾದರೆ, ಯೆರೂಸಲೇಮಿಗಾಗಲಿ ಅಥವಾ ಈ ಬೆಟ್ಟಕ್ಕಾಗಲಿ ಹೋಗುವುದಿಲ್ಲ.


ದೂರದಲ್ಲಿಯೂ ಇರುವವನಲ್ಲವೋ? ನನ್ನ ಕಣ್ಣಿಗೆ ಬೀಳದಂತೆ ಯಾರಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ತಾನೇ ಮರೆಮಾಡಿಕೊಂಡಾನೇ? ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ.”


ಅದಕ್ಕೆ ಮೀಕಾಯೆಹುವು “ಅದಿರಲಿ, ಈಗ ಯೆಹೋವನ ವಾಕ್ಯವನ್ನು ಕೇಳು, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಳಲ್ಲಿ ನಿಂತಿದ್ದನ್ನೂ ಕಂಡೆನು.


ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇ ಜಯಶಾಲಿಯಾದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


ಆದರೆ ಅದಕ್ಕೆ ಉತ್ತರವಾಗಿ ಆತನು ಅವರಿಗೆ, “ಇವುಗಳನ್ನೆಲ್ಲಾ ನೋಡುತ್ತೀರಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ, ಎಲ್ಲಾ ಕೆಡವಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಅಂದನು.


ಮತ್ತು ಪರಲೋಕದ ಮೇಲೆ ಆಣೆಯಿಟ್ಟುಕೊಂಡರೆ ದೇವರ ಸಿಂಹಾಸನದ ಮೇಲೆಯೂ ಅದರಲ್ಲಿ ಕುಳಿತಿರುವಾತನ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.


“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


“ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವನೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿನ್ನ ವಾಸಕ್ಕೆ ಸಾಲದು. ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ಸಾಕಾದೀತು?


ಆದರೆ ದೇವರು ನಿಜವಾಗಿ ಮನಷ್ಯರೊಡನೆ ಭೂಲೋಕದಲ್ಲಿ ವಾಸವಾಗಿರುವನೋ? ಸ್ವರ್ಗವೂ, ಸ್ವರ್ಗಾಧಿ ಸ್ವರ್ಗವೂ ನಿನ್ನ ವಾಸಕ್ಕೆ ಸಾಲವು, ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಆಲಯವು ನಿನಗೆ ಹೇಗೆ ಸಾಕಾದೀತು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು