Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:51 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 “ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ಸ್ತೇಫನನು ಮುಂದುವರೆದು, “ಎಷ್ಟು ಹಟಮಾರಿಗಳು ನೀವು; ಎಂಥಾ ಕಠಿಣ ಹೃದಯಿಗಳು ನೀವು’ ದೇವರ ಸಂದೇಶಕ್ಕೆ ಎಷ್ಟು ಕಿವುಡರು ನೀವು! ನಿಮ್ಮ ಪೂರ್ವಜರಂತೆ ನೀವು ಸಹ ಪವಿತ್ರಾತ್ಮ ಅವರನ್ನು ಯಾವಾಗಲೂ ಪ್ರತಿಭಟಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಚಂಡಿಗಳೇ, ಮನಶ್ಶುದ್ಧಿಯೂ ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಸ್ತೆಫನನು ಮಾತನ್ನು ಮುಂದುವರಿಸಿದನು: “ಮೊಂಡರಾದ ಯೆಹೂದ್ಯನಾಯಕರೇ! ನೀವು ನಿಮ್ಮ ಹೃದಯಗಳನ್ನು ದೇವರಿಗೆ ಕೊಟ್ಟಿಲ್ಲ. ನೀವು ಆತನಿಗೆ ಕಿವಿಗೊಡುವುದಿಲ್ಲ. ಪವಿತ್ರಾತ್ಮನು ನಿಮಗೆ ತಿಳಿಸಲು ಪ್ರಯತ್ನಿಸುತ್ತಿರುವ ವಿಷಯಕ್ಕೆ ನೀವು ಯಾವಾಗಲೂ ವಿರೋಧಿಗಳಾಗಿದ್ದೀರಿ. ನಿಮ್ಮ ಪಿತೃಗಳು ಹೀಗೆಯೇ ಮಾಡಿದರು ಮತ್ತು ನೀವೂ ಅವರಂತೆಯೇ ಇದ್ದೀರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 “ಹಟಮಾರಿಗಳೇ! ಹೃದಯದಲ್ಲಿಯೂ ಕಿವಿಯಲ್ಲಿಯೂ ಸುನ್ನತಿ ಹೊಂದದವರೇ, ನೀವು ಸಹ ನಿಮ್ಮ ಪಿತೃಗಳಂತೆಯೇ ಯಾವಾಗಲೂ ಪವಿತ್ರಾತ್ಮ ದೇವರನ್ನು ಎದುರಿಸುತ್ತೀರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

51 ಸ್ತೆಪನಾನ್ ಅನಿಬಿ ಬೊಲುನ್, “ಮಂಡ್ ಮನಾಚ್ಯಾ ಲೊಕಾನು ತುಮಿ ತುಮ್ಚಿ ಮಾನಾ ದೆವಾಕ್ ದಿವ್ಕ್ ನ್ಯಾಸಿ, ಅನಿ ತೆಚ್ಯಾ ಗೊಸ್ಟಿಯಾಕ್ನಿ ಕಾನ್ ದಿವ್ಕ್ ನ್ಯಾಸಿ, ಪವಿತ್ರ್ ಆತ್ಮ್ಯಾಕ್ ಕನ್ನಾಬಿ ವಿರೊಧ್ ಹೊವ್ನ್ ಹಾಸಿ ತುಮ್ಚ್ಯಾ ಪುರ್ವಜ್ ಲೊಕಾನಿ ಬಿ ಅಸೆಚ್ ಕರ್‍ಲ್ಯಾನಿ, ಅನಿ ತುಮಿ ಬಿ ತೆಂಚ್ಯಾ ಸಾರ್ಕೆಚ್ ಹಾಸಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:51
38 ತಿಳಿವುಗಳ ಹೋಲಿಕೆ  

ಆದುದರಿಂದ ನೀವು ಆಜ್ಞೆಗೆ ಮಣಿಯದ ನಿಮ್ಮ ದುಷ್ಟಸ್ವಭಾವವನ್ನು ಬಿಟ್ಟು ನಿಮ್ಮ ಹೃದಯದಲ್ಲೇ ಸುನ್ನತಿಮಾಡಿಕೊಳ್ಳಿರಿ.


ನಾನು ಅವರಿಗೆ ವಿರೋಧವಾಗಿ ನಡೆದುಕೊಂಡು ಶತ್ರುದೇಶದಲ್ಲಿ ಸೆರೆಯವರನ್ನಾಗಿ ಮಾಡಬೇಕಾಯಿತೆಂದೂ ಒಪ್ಪಿ, ತಮ್ಮ ಮೊಂಡತನವನ್ನು ಬಿಟ್ಟು ನನ್ನ ಆಜ್ಞೆಗೆ ತಲೆ ಬಾಗಿ ತಮ್ಮ ಪಾಪದಿಂದುಂಟಾದ ಶಿಕ್ಷೆಯನ್ನು ಸ್ವೀಕರಿಸುವುದಾದರೆ,


ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ. ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿ, ಯೆಹೋವನಿಗಾಗಿ ಸುನ್ನತಿ ಮಾಡಿಕೊಳ್ಳಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ಧಗಧಗಿಸುವುದು” ಎಂದು ಹೇಳುತ್ತಾನೆ.


ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮವನ್ನು ದುಃಖಪಡಿಸಿದರು; ಆದುದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.


ಯೆಹೋವನು ಮೋಶೆಗೆ ಹೀಗೆಂದನು. “ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಮೊಂಡುತನವುಳ್ಳ ಜನರು, ನಾನು ಒಂದು ಕ್ಷಣ ಮಾತ್ರ ನಿಮ್ಮ ಮಧ್ಯದಲ್ಲಿ ಬರುವುದಾದರೆ, ನಾನು ನಿಮ್ಮನ್ನು ನಿರ್ಮೂಲ ಮಾಡಿಬಿಡುವೆನು. ಆದಕಾರಣ ನಿಮ್ಮ ಆಭರಣಗಳನ್ನು ಈಗ ತೆಗೆದುಬಿಡಿರಿ. ನಿಮಗೆ ನಾನು ಏನು ಮಾಡಬೇಕೆಂಬುದನ್ನು ಆಲೋಚಿಸಿಕೊಳ್ಳುವೆನು’” ಅಂದನು.


ಅದಲ್ಲದೆ ಯೆಹೋವನು ಮೋಶೆಗೆ, “ಈ ಜನರ ಸ್ವಭಾವವನ್ನು ನಾನು ನೋಡಿದ್ದೇನೆ. ಇವರು ಮೊಂಡುತನವುಳ್ಳ ಜನರಾಗಿದ್ದಾರೆ


ನಿಜವಾದ ಸುನ್ನತಿಯವರು ಯಾರೆಂದರೆ, ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ, ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ, ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವುಗಳೇ.


ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ನೀನು ಹೋಗು. ಆದರೆ ನಾನು ನಿಮ್ಮ ಸಂಗಡ ಬರುವುದಿಲ್ಲ, ಏಕೆಂದರೆ ನೀವು ಮೊಂಡುತನದ ಜನರು. ನಾನು ದಾರಿಯಲ್ಲಿ ನಿಮ್ಮನ್ನು ಸಂಹರಿಸಿಬಿಟ್ಟೇನು” ಅಂದನು.


ಅವನ ಮಾತಿನಲ್ಲಿ ಕಂಡುಬರುತ್ತಿದ್ದ ಜ್ಞಾನವನ್ನೂ, ಪವಿತ್ರಾತ್ಮ ಶಕ್ತಿಯನ್ನೂ ಎದುರಿಸಲಾರದೆ ಹೋದರು.


ನಾನು, ಯಾರ ಸಂಗಡ ಮಾತನಾಡಿ ಅವರು ಗಮನಿಸುವಂತೆ ಸಾಕ್ಷಿಕೊಡಲಿ? ಇಗೋ, ಅವರ ಕಿವಿ ಮುಚ್ಚಲ್ಪಟ್ಟಿವೆ. ಅಯ್ಯೋ, ಯೆಹೋವನ ಮಾತು ಅವರಿಗೆ ತಿರಸ್ಕಾರ, ಅದರಲ್ಲಿ ಅವರಿಗೆ ಆನಂದವೇ ಇಲ್ಲ.


ನನ್ನ ಮಹತ್ಕಾರ್ಯಗಳನ್ನು ಮರೆಯದೆ, ನನ್ನಲ್ಲಿಯೇ ಭರವಸೆಯಿಟ್ಟು, ನನ್ನ ಆಜ್ಞೆಗಳನ್ನು ಕೈಗೊಳ್ಳುವರು” ಎಂಬುದೇ.


ದೇವರು ಆತನಲ್ಲಿ ನಿಮಗೆ ಮನುಷ್ಯರ ಕೈಯಿಂದ ಮಾಡಲಾಗದಂತಹ ಸುನ್ನತಿಯನ್ನು ಮಾಡಿದ್ದಾನೆ. ಕ್ರಿಸ್ತನ ಸುನ್ನತಿಯು ಶಾರೀರಿಕವಾದ ಪಾಪಸ್ವಭಾವವನ್ನು ತೆಗೆದುಹಾಕುವುದೇ.


ನೀನು ಧರ್ಮಶಾಸ್ತ್ರಕ್ಕನುಸಾರವಾಗಿ ನಡೆಯುವವನಾದರೆ ಸುನ್ನತಿಯೆಂಬ ಸಂಸ್ಕಾರವು ನಿನಗೆ ಪ್ರಯೋಜನಕರವಾಗಿದೆ; ಆದರೆ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆಯುವವನಾಗಿದ್ದರೆ ನಿನಗೆ ಸುನ್ನತಿಯಿದ್ದರೂ ಇಲ್ಲದಂತಾಯಿತು.


“ಆದರೆ ನಮ್ಮ ಪೂರ್ವಿಕರು ಅವನ ಮಾತುಗಳನ್ನು ಕೇಳುವುದಕ್ಕೆ ಮನಸ್ಸಿಲ್ಲದೆ ಅವನನ್ನು ತಳ್ಳಿಬಿಟ್ಟು, ಪುನಃ ಐಗುಪ್ತದೇಶದ ಕಡೆಗೆ ಮನಸ್ಸಿಟ್ಟರು.


“ಆದರೆ ತನ್ನ ಸ್ವಕುಲದವನಿಗೆ ಅನ್ಯಾಯಮಾಡುತ್ತಿದ್ದವನು, ‘ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?


“ಪೂರ್ವಿಕರು ಹೊಟ್ಟೆಕಿಚ್ಚಿನಿಂದ ಯೋಸೇಫನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಚರು. ಅಲ್ಲಿ ದೇವರು ಅವನ ಸಂಗಡ ಇದ್ದು,


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಇಸ್ರಾಯೇಲರಲ್ಲಿ ಸೇರಿಕೊಂಡಿರುವ ಮ್ಲೇಚ್ಛರೊಳಗೆ ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನನಾದ ಯಾರೂ ನನ್ನ ಪವಿತ್ರಾಲಯವನ್ನು ಪ್ರವೇಶಿಸಬಾರದು.


‘ಇಸ್ರಾಯೇಲ್ ವಂಶದವರೇ, ನೀವು ನನ್ನ ರೊಟ್ಟಿಯನ್ನೂ, ಕೊಬ್ಬನ್ನೂ, ರಕ್ತವನ್ನೂ ಅರ್ಪಿಸುವಾಗ, ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನರಾದ ಮ್ಲೇಚ್ಛರನ್ನು ನನ್ನ ಪವಿತ್ರಾಲಯದೊಳಗೆ ಬರಮಾಡಿ, ನನ್ನ ಮಂದಿರವನ್ನು ಅಪವಿತ್ರಗೊಳಿಸಿ, ನನ್ನ ಒಡಂಬಡಿಕೆಯನ್ನು ಭಂಗಪಡಿಸಿ, ನಿಮ್ಮ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.


ನೀನು ಅನೇಕ ವರ್ಷಗಳ ತನಕ ಅವರ ವಿಷಯದಲ್ಲಿ ತಾಳ್ಮೆಯುಳ್ಳವನಾಗಿ ಪ್ರವಾದಿಗಳ ಮುಖಾಂತರ ಮಾತನಾಡುತ್ತಿದ್ದ ನಿನ್ನ ಆತ್ಮನಿಂದ ಅವರನ್ನು ಎಷ್ಟು ಎಚ್ಚರಿಸುತ್ತಿದ್ದರೂ ಅವರು ಕಿವಿಗೊಡದೆ ಹೋದ ಮೇಲೆ ನೀನು ಅವರನ್ನು ಅನ್ಯದೇಶಗಳವರ ಕೈಗೆ ಒಪ್ಪಿಸಿಬಿಟ್ಟೆ.


ಯಾಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರುದ್ಧವಾಗಿ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪುನಃ ಬೀಳುವುದು ಮತ್ತಷ್ಟು ನಿಶ್ಚಯ.


“ನಾನು ಯಾವ ಸಂತಾನದವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಂತಾನದವರು ನಾಚಿಕೆಗೆಟ್ಟವರೂ, ಹಟಗಾರರೂ ಆಗಿರುತ್ತಾರೆ; ನೀನು ಅವರಿಗೆ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿ.


ಅವರಾದರೋ ಕಿವಿಗೊಟ್ಟು ಕೇಳಲಿಲ್ಲ, ಕೇಳಲಿಕ್ಕಾಗಲಿ ಉಪದೇಶ ಹೊಂದಲಿಕ್ಕಾಗಲಿ ಒಪ್ಪಲಿಲ್ಲ.


ಏಕೆಂದರೆ ನೀನು ಹಟವಾದಿ ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು.


ಕೊಂಬುಗಳನ್ನು ಮೇಲೆತ್ತಬೇಡಿರಿ; ಸೊಕ್ಕಿನಿಂದ ಮಾತನಾಡಬೇಡಿರಿ” ಎಂದು ಹೇಳುವೆನು.


ಆದರೂ ನಮ್ಮ ಪೂರ್ವಿಕರು ಗರ್ವಿಗಳಾಗಿ ಹಠಹಿಡಿದು, ನಿನ್ನ ಆಜ್ಞೆಗಳಿಗೆ ಅವಿಧೇಯರಾದರು.


ಈಗ ನೀವು ನಿಮ್ಮ ಪೂರ್ವಿಕರಂತೆ ರಾಜಾಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡಿರುವ ಪವಿತ್ರಾಲಯಕ್ಕೆ ಬಂದು ಆತನನ್ನು ಆರಾಧಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವುದು.


ನಿಮ್ಮ ದೇವರಾದ ಯೆಹೋವನು ನಿಮ್ಮ ಮತ್ತು ನಿಮ್ಮ ಸಂತತಿಯವರ ಹೃದಯಕ್ಕೆ ಸುನ್ನತಿಮಾಡುವನು. ಆಗ ನೀವು ಆತನನ್ನು ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಕೊಳ್ಳುವಿರಿ.


ಅದಲ್ಲದೆ ಆತನು ನನಗೆ, “ಈ ಜನರ ಸ್ವಭಾವವನ್ನು ನಾನು ನೋಡುತ್ತಾ ಬಂದಿದ್ದೇನೆ; ಇವರು ನನ್ನ ಆಜ್ಞೆಗೆ ಅವಿಧೇಯರಾದವರು.


ನಿಮ್ಮ ದೇವರಾದ ಯೆಹೋವನು ಆ ಉತ್ತಮ ದೇಶವನ್ನು ನಿಮಗೆ ಸ್ವದೇಶವಾಗಿ ಕೊಡುವುದು ನಿಮ್ಮ ಸದಾಚಾರದ ಫಲವಲ್ಲವೆಂದು ಚೆನ್ನಾಗಿ ತಿಳಿದುಕೊಳ್ಳಿರಿ. ನೀವು ಆತನ ಆಜ್ಞೆಯನ್ನು ಪಾಲಿಸದ ಮೊಂಡ ಜನರೇ ಆಗಿದ್ದೀರಿ.


“ಕರ್ತನೇ, ನಿನ್ನ ದೃಷ್ಟಿಯಲ್ಲಿ ದಯೆಯು ನನಗೆ ದೊರಕಿರುವುದಾದರೆ ನೀನೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಮೊಂಡುಬುದ್ಧಿಯವರೇ; ಆದಾಗ್ಯೂ ನೀನು ನಮ್ಮ ಪಾಪಗಳನ್ನೂ, ಅಧರ್ಮಗಳನ್ನು ಕ್ಷಮಿಸಿ ನಿನ್ನ ಸ್ವತ್ತಾಗಿ ನಮ್ಮನ್ನು ಸ್ವೀಕರಿಸಬೇಕು” ಎಂದನು.


“ಅವರು ಯಾವ ಮೋಶೆಯನ್ನು ಬೇಡವೆಂದು ನಿರಾಕರಿಸಿ ‘ನಿನ್ನನ್ನು ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?’ ಎಂದು ಕೇಳಿದರೋ, ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ, ಬಿಡುಗಡೆಮಾಡುವವನನ್ನಾಗಿಯೂ ನೇಮಿಸಿದನು.


ಚಿನ್ ಅರಣ್ಯದಲ್ಲಿ ಇಸ್ರಾಯೇಲರ ಸಮೂಹದವರು ನನ್ನೊಡನೆ ವಿವಾದಿಸಿದಾಗ ನೀವಿಬ್ಬರೂ ನನ್ನ ಗೌರವವನ್ನು ಅವರ ಎದುರಿನಲ್ಲಿ ಕಾಪಾಡದೆ ನನ್ನ ಆಜ್ಞೆಯನ್ನು ಉಲ್ಲಂಘಿಸಿದ್ದರಿಂದ ಆ ದೇಶವನ್ನು ಸೇರಬಾರದು” ಎಂದು ಹೇಳಿದೆನು. ಚಿನ್ ಅರಣ್ಯದಲ್ಲಿನ ಮೆರೀಬಾ ಕಾದೇಶಿನ ಪ್ರವಾಹದ ಹತ್ತಿರ ನಡೆದ ಸಂಗತಿಯನ್ನು ಸೂಚಿಸಿ ಇದನ್ನು ಹೇಳಿದನು.


ಆದರೆ ಅವರು ದೇವರಾದ ಯೆಹೋವನನ್ನು ನಂಬದೆ, ಆತನ ಆಜ್ಞೆಗಳಿಗೆ ಮಣಿಯದೆ ಇದ್ದ ತಮ್ಮ ಹಿರಿಯರಂತೆ ಯೆಹೋವನ ಮಾತಿಗೆ ಕಿವಿಗೊಡದೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು