Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:53 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ದೇವದೂತರ ಮೂಲಕ ನೇಮಕವಾದ ಧರ್ಮಶಾಸ್ತ್ರವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

53 ದೇವದೂತರ ಮೂಲಕ ಧರ್ಮಶಾಸ್ತ್ರವನ್ನು ಪಡೆದ ನೀವೇ ಅದಕ್ಕೆ ಅವಿಧೇಯರಾಗಿ ನಡೆದಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ದೇವದೂತರ ಮೂಲಕ ನೇಮಕವಾದ ಧರ್ಮಶಾಸ್ತ್ರವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸುವದಿಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

53 ದೇವರು ತನ್ನ ದೂತರ ಮೂಲಕ ಕೊಟ್ಟ ಮೋಶೆಯ ಧರ್ಮಶಾಸ್ತ್ರವನ್ನು ಪಡೆದುಕೊಂಡ ನೀವೇ ಅದಕ್ಕೆ ವಿಧೇಯರಾಗುವುದಿಲ್ಲ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 ದೇವದೂತರ ಮುಖಾಂತರವಾಗಿ ಜಾರಿಗೆ ಬಂದ ಮೋಶೆಯ ನಿಯಮವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸುವುದಿಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

53 ತುಮಿ ಸರ್ಗಾತ್ಲ್ಯಾ ದೆವ್ ದುತಾಂಚ್ಯಾಕ್ನಾ ಖಾಯ್ದ್ಯಾಂಚೆ ಪುಸ್ತಕ್ ಘೆಟ್ಲ್ಯಾಶಿ ಖರೆ ತೆಕಾ ಮಾನುಕ್ನ್ಯಾಸಿ!”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:53
10 ತಿಳಿವುಗಳ ಹೋಲಿಕೆ  

ಯಾಕೆಂದರೆ, ದೇವದೂತರ ಮೂಲಕ ಹೇಳಲ್ಪಟ್ಟ ಸಂದೇಶವು ಸ್ಥಿರವಾಗಿರಲು, ಅದನ್ನು ಮೀರಿ ಮಾಡಿದ ಪ್ರತಿಯೊಂದು ತಪ್ಪಿಗೂ ಮತ್ತು ಅವಿಧೇಯತ್ವಕ್ಕೂ ಶಿಕ್ಷಾರ್ಹವಾದ ಪ್ರತಿಫಲ ಹೊಂದಿದ್ದರು.


ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ಯಾತಕ್ಕೆ? ವಾಗ್ದಾನದಲ್ಲಿ ಸೂಚಿತನಾದವನು ಹುಟ್ಟಿ ಬರುವತನಕ ದೇವರು ಇಂಥಿಂಥದು ಅಪರಾಧವೆಂದು ತೋರಿಸುವುದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇಮಿಸಿ ದೇವದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು.


ಅವನೇ ಸೀನಾಯಿಬೆಟ್ಟದಲ್ಲಿ, ತನ್ನೊಡನೆ ಮಾತನಾಡಿದ ದೇವದೂತನಿಗೂ ನಮ್ಮ ಪೂರ್ವಿಕರಿಗೂ ಅಡವಿಯಲ್ಲಿದ್ದ ಸಭೆಯೊಳಗೆ ಇದ್ದು ಜೀವಕರವಾದ ದೈವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು ಆಗಿದ್ದಾನೆ.


“ಯೆಹೋವನು ಸೀನಾಯಿಬೆಟ್ಟದಿಂದ ಬಂದು ಸೇಯೀರ್ ಎಂಬ ಬೆಟ್ಟದ ಸೀಮೆಯೊಳಗಿಂದ ಪ್ರಕಾಶಿಸಿ ಪಾರಾನ್ ಪರ್ವತದಿಂದ ಪ್ರಜ್ವಲಿಸಿ, ಲಕ್ಷಾಂತರ ಪರಿಶುದ್ಧದೂತರ ಮಧ್ಯದಿಂದ ಅವರಿಗೋಸ್ಕರ ದಯಮಾಡಿದನು; ಆತನ ಬಲಪಾರ್ಶ್ವದಲ್ಲಿ ಅಗ್ನಿಸದೃಶವಾದ ಧರ್ಮಶಾಸ್ತ್ರವಿತ್ತು.


ಸುನ್ನತಿ ಮಾಡಿಸಿಕೊಂಡವರೇ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುತ್ತಿಲ್ಲವಲ್ಲಾ. ಅವರು ನಿಮ್ಮ ಶರೀರದ ವಿಷಯದಲ್ಲಿ ಹೆಚ್ಚಳಪಡುವುದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ.


ಮೋಶೆಯು ನಿಮಗೆ ಧರ್ಮಶಾಸ್ತ್ರವನ್ನು ಕೊಡಲಿಲ್ಲವೇ? ಆದರೂ ನಿಮ್ಮಲ್ಲಿ ಒಬ್ಬನಾದರೂ ಆ ಧರ್ಮಶಾಸ್ತ್ರದಂತೆ ನಡೆಯಲಿಲ್ಲ. ನೀವು ನನ್ನನ್ನು ಕೊಲ್ಲುವುದಕ್ಕೆ ಹುಡುಕುವುದೇಕೆ?” ಎಂದು ಕೇಳಿದನು.


ದೇವರಿಗೆ ಸಹಸ್ರಾರು ಮಾತ್ರವಲ್ಲ ಲಕ್ಷಾಂತರ ರಥಗಳು ಇವೆ. ಕರ್ತನಾದ ಯೆಹೋವನು ಅವುಗಳ ಸಮೇತವಾಗಿ, ಸೀನಾಯ್ ಬೆಟ್ಟದಿಂದ ಪವಿತ್ರಾಲಯಕ್ಕೆ ಬಂದಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು