Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮತ್ತು ‘ನಿನ್ನ ಸಂತಾನದವರು ದಾಸರಾಗಿ ಸೇವೆಸಲ್ಲಿಸುವ ಅನ್ಯಜನರಿಗೆ ನಾನೇ ನ್ಯಾಯತೀರಿಸುವೆನು. ಆ ಮೇಲೆ ಅವರು ಹೊರಟುಬಂದು ಈ ಸ್ಥಳದಲ್ಲಿ ನನ್ನನ್ನು ಆರಾಧಿಸುವರು’ ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವರಿಂದ ಗುಲಾಮಗಿರಿಯನ್ನು ಪಡೆಯುವ ಜನಾಂಗಕ್ಕೆ ನಾನು ದಂಡನೆ ವಿಧಿಸುವೆನು. ಅನಂತರ ಅವರು ಅಲ್ಲಿಂದ ಹೊರಬಂದು ನನ್ನನ್ನು ಈ ಸ್ಥಳದಲ್ಲೇ ಆರಾಧಿಸುವರು,’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮತ್ತು ನಿನ್ನ ಸಂತಾನದವರು ದಾಸರಾಗಿ ಸೇವಿಸುವ ಅನ್ಯಜನರಿಗೆ ನಾನೇ ನ್ಯಾಯತೀರಿಸುವೆನು. ಆಮೇಲೆ ಅವರು ಹೊರಟುಬಂದು ಈ ಸ್ಥಳದಲ್ಲಿ ನನ್ನನ್ನು ಆರಾಧಿಸುವರು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಅವರನ್ನು ಗಲಾಮರನ್ನಾಗಿ ಮಾಡಿಕೊಂಡ ಜನಾಂಗವನ್ನು ನಾನು ದಂಡಿಸುವೆನು’ ಎಂದು ಹೇಳಿದನು. ಇದಲ್ಲದೆ ದೇವರು ಅವನಿಗೆ, ‘ಆ ಬಳಿಕ ನಿನ್ನ ಜನರು ಆ ದೇಶದಿಂದ ಹೊರಗೆ ಬಂದು ನನ್ನನ್ನು ಈ ಸ್ಥಳದಲ್ಲಿ ಆರಾಧಿಸುವರು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ ಅವರು ಗುಲಾಮರಾಗಿ ಸೇವೆ ಸಲ್ಲಿಸುತ್ತಿದ್ದ ದೇಶಕ್ಕೆ ನಾನು ನ್ಯಾಯತೀರಿಸುವೆನು. ಅನಂತರ ಅವರು ಹೊರಟುಬಂದು ಈ ಸ್ಥಳದಲ್ಲಿ ನನ್ನನ್ನು ಆರಾಧಿಸುವರು,’ ಎಂದು ದೇವರು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಖರೆ ತೆಂಕಾ ಗುಲಾಮ್ ಕರುನ್‍ ಘೆಟಲ್ಯಾಕ್ನಿ ಮಿಯಾಚ್ ಝಡ್ತಿ ಕರ್‍ತಾ ,ಅನಿ ತುಜ್ಯಾ ಪಿಳ್ಗಿಚಿ ಲೊಕಾ ತ್ಯಾ ದೆಶ್ಯಾತ್ನಾ ಭಾಯ್ರ್ ಪಡುನ್ ಯೆವ್ನ್ ಮಾಕಾ ಹ್ಯಾ ಜಾಗ್ಯಾರ್ ಆರಾದನ್ ಕರ್ತಾತ್, ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:7
11 ತಿಳಿವುಗಳ ಹೋಲಿಕೆ  

ಅದಕ್ಕೆ ದೇವರು, “ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ನನ್ನನ್ನು ಆರಾಧಿಸುವಿರಿ. ನಿನ್ನನ್ನು ಕಳುಹಿಸಿದವನು ನಾನೇ ಎಂಬುವುದಕ್ಕೆ ಇದು ನಿನಗೆ ಗುರುತಾಗಿರುವುದು” ಅಂದನು.


ಆದುದರಿಂದ ಈಗ ಬಾ, ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಹೊರಗೆ ಬರಮಾಡುವುದಕ್ಕೆ ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು