Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸೌಲನಿಗೆ ಅವನ ಕೊಲೆಗೆ ಸಮ್ಮತಿಸಿದನು. ಆ ದಿನದಲ್ಲಿ ಯೆರೂಸಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರು ಹೊರತಾಗಿ ಎಲ್ಲರೂ ಯೂದಾಯ, ಸಮಾರ್ಯ ಸೀಮೆಗಳಿಗೆ ಚದರಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆ ದಿನವೇ ಜೆರುಸಲೇಮಿನ ಧರ್ಮಸಭೆಯ ವಿರುದ್ಧ ಕ್ರೂರ ಹಿಂಸೆ ಪ್ರಾರಂಭ ಆಯಿತು. ಪ್ರೇಷಿತರ ಹೊರತು ಇತರ ಭಕ್ತವಿಶ್ವಾಸಿಗಳು ಜುದೇಯ ಮತ್ತು ಸಮಾರಿಯ ಪ್ರಾಂತ್ಯಗಳಲ್ಲೆಲ್ಲಾ ಚದರಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇದನ್ನು ಹೇಳಿ ನಿದ್ರೆಹೋದನು. ಸೌಲನು ಅವನ ಕೊಲೆಗೆ ಸಮ್ಮತಿಸುವವನಾಗಿದ್ದನು. ಆ ದಿವಸದಲ್ಲಿ ಯೆರೂಸಲೇವಿುನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರು ಹೊರತಾಗಿ ಎಲ್ಲರು ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1-3 ಸ್ತೆಫನನ ಕೊಲೆಗೆ ಸೌಲನ ಸಮ್ಮತಿಯಿತ್ತು. ಕೆಲವು ಭಕ್ತರು ಸ್ತೆಫನನನ್ನು ಸಮಾಧಿ ಮಾಡಿದರು. ಅವರು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು. ಜೆರುಸಲೇಮಿನಲ್ಲಿದ್ದ ವಿಶ್ವಾಸಿಗಳ ಸಮುದಾಯವನ್ನು ಹಿಂಸಿಸಲು ಯೆಹೂದ್ಯರು ಅಂದೇ ಆರಂಭಿಸಿ ಅವರನ್ನು ಬಹಳವಾಗಿ ಸಂಕಟಪಡಿಸಿದರು. ಆ ಸಭೆಯನ್ನು ನಾಶಮಾಡಲು ಸೌಲನು ಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದೊಯ್ದು ಸೆರೆಮನೆಗೆ ಹಾಕಿದನು. ವಿಶ್ವಾಸಿಗಳೆಲ್ಲಾ ಜೆರುಸಲೇಮನ್ನು ಬಿಟ್ಟುಹೋದರು. ಅಪೊಸ್ತಲರು ಮಾತ್ರ ಅಲ್ಲೇ ಇದ್ದರು. ವಿಶ್ವಾಸಿಗಳು ಜುದೇಯ ಮತ್ತು ಸಮಾರ್ಯದ ಬೇರೆಬೇರೆ ಸ್ಥಳಗಳಿಗೆ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸೌಲನು ಸ್ತೆಫನನ ಕೊಲೆಗೆ ಸಮ್ಮತಿಸಿದ್ದನು. ಆ ದಿನವೇ ಯೆರೂಸಲೇಮಿನ ಸಭೆಗೆ ವಿರೋಧವಾಗಿ ಮಹಾಹಿಂಸೆ ಪ್ರಾರಂಭವಾಯಿತು, ಅಪೊಸ್ತಲರನ್ನು ಬಿಟ್ಟು ಉಳಿದವರೆಲ್ಲರೂ ಯೂದಾಯ ಮತ್ತು ಸಮಾರ್ಯ ಪ್ರಾಂತಗಳಿಗೆ ಚದರಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಸಾವ್ಲುಕ್ ಸ್ತೆಪನಾಚೊ ಜಿವ್ ಕಾಡಲೆ ಒಪ್ಕಿ ಹೊಲ್ಲೆ, ತ್ಯಾ ದಿಸಾಕ್ನಾಚ್ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ ವಿರೊದ್ ಹೊವ್ನ್ ತರಾಸ್ ಸುರು ಹೊಲೊ, ಅನಿ ತೆನಿ ಸಗ್ಳ್ಯಾನಿ ಅಪೊಸ್ತಲಾಕ್ನಿ ಸೊಡುನ್ ಸಾಮಾರ್ಯಾಚ್ಯಾ ಗಾಂವಾಕ್ನಿ ಪಗ್ಳುನ್ ಗೆಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:1
35 ತಿಳಿವುಗಳ ಹೋಲಿಕೆ  

ಮತ್ತು ನಿನ್ನ ಸಾಕ್ಷಿಯಾದ ಸ್ತೆಫನನ ರಕ್ತವು ಚೆಲ್ಲಿಸಲ್ಪಟ್ಟಾಗ, ನಾನೂ ಹತ್ತಿರ ನಿಂತು ಅದನ್ನು ಸಮ್ಮತಿಸಿ, ಅವನನ್ನು ಕೊಂದವರ ವಸ್ತ್ರಗಳನ್ನು ಕಾಯುತ್ತಿದ್ದೆನಲ್ಲಾ’ ಎಂಬುದು ಅವರೇ ಬಲ್ಲವರಾಗಿದ್ದಾರೆ.


ಅವನನ್ನು ಊರ ಹೊರಕ್ಕೆ ನೂಕಿಕೊಂಡು ಹೋಗಿ ಕೊಲ್ಲುವುದಕ್ಕೆ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಕಾಲುಗಳ ಬಳಿಯಲ್ಲಿ ಇಟ್ಟರು.


ಅವರು ಅವನ ಮಾತಿಗೆ ಒಪ್ಪಿ ಅಪೊಸ್ತಲರನ್ನು ಕರೆಯಿಸಿ, ಹೊಡಿಸಿ ಯೇಸುವಿನ ಹೆಸರನ್ನು ಹೇಳಿ ಮಾತನಾಡಲೇಬಾರದೆಂದು ಅಪ್ಪಣೆಕೊಟ್ಟು ಅವರನ್ನು ಬಿಟ್ಟುಬಿಟ್ಟರು.


ಸಭಿಕರು ಈ ಮಾತನ್ನು ಕೇಳಿ ರೌದ್ರಗೊಂಡು ಅವರನ್ನು ಕೊಲ್ಲಿಸಬೇಕೆಂದು ಆಲೋಚಿಸಿದರು.


ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು.


ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ, ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.


ಹೀಗಿರಲಾಗಿ ಯೂದಾಯ, ಗಲಿಲಾಯ, ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು, ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಬೆಳೆಯುತ್ತಾ ಬಂದಿತು.


ಚದರಿಹೋದವರು ಅಲ್ಲಲ್ಲಿ ಹೋಗಿ ಸುವಾರ್ತೆಯನ್ನು ಸಾರುತ್ತಿದ್ದರು.


ದಣಿಗಿಂತ ಆಳು ದೊಡ್ಡವನಲ್ಲವೆಂಬುದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕ ಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಕೈಗೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಗೊಳ್ಳುತ್ತಿದ್ದರು.


ನಂಬಿಕೆಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೇ ಐಗುಪ್ತದೇಶವನ್ನು ಬಿಟ್ಟುಹೋದನು. ಏಕೆಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನಂತೆ ದೃಢಚಿತ್ತನಾಗಿದ್ದನು.


ಸಹೋದರರೇ, ನನಗೆ ಸಂಭವಿಸಿರುವಂಥವುಗಳೆಲ್ಲವೂ ಸುವಾರ್ತೆಯ ಪ್ರಸಾರಣೆಗೆ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬುದಾಗಿ ಅಪೇಕ್ಷಿಸುತ್ತೇನೆ.


ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಸಾಮಂತ ಹೆರೋದನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ.


ಅವನೇ ಸೀನಾಯಿಬೆಟ್ಟದಲ್ಲಿ, ತನ್ನೊಡನೆ ಮಾತನಾಡಿದ ದೇವದೂತನಿಗೂ ನಮ್ಮ ಪೂರ್ವಿಕರಿಗೂ ಅಡವಿಯಲ್ಲಿದ್ದ ಸಭೆಯೊಳಗೆ ಇದ್ದು ಜೀವಕರವಾದ ದೈವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು ಆಗಿದ್ದಾನೆ.


“ನೀವು ಹೋಗಿ, ದೇವಾಲಯದಲ್ಲಿ ನಿಂತುಕೊಂಡು ಈ ಜೀವ ವಾಕ್ಯಗಳನ್ನು ಜನರಿಗೆಲ್ಲಾ ತಿಳಿಸಿರಿ” ಅಂದನು.


ಅಸೂಯೆ ತುಂಬಿದವರಾಗಿ ಅಪೊಸ್ತಲರನ್ನು ಹಿಡಿದು ಸೆರೆಯಲ್ಲಿಟ್ಟರು.


ಅವರೆಲ್ಲರೂ ದೇವರನ್ನು ಕೊಂಡಾಡುವವರಾಗಿಯೂ, ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ಪ್ರತಿದಿನ ಅವರೊಂದಿಗೆ ಸಭೆಗೆ ಸೇರಿಸುತ್ತಿದ್ದನು.


ಅವರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವು ಬರಲಿದೆ.


ಆದುದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.


ಉಳಿದವರು ಅವನ ಆಳುಗಳನ್ನು ಹಿಡಿದು ಅವಮಾನಮಾಡಿ ಕೊಂದು ಹಾಕಿದರು.


“ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ ಅದಕ್ಕೆ ಬೇರೆ ಯಾವುದರಿಂದ ಉಪ್ಪಿನ ರುಚಿಯನ್ನು ಕೊಡಲು ಸಾಧ್ಯ? ಜನರು ಅದನ್ನು ಹೊರಗೆಹಾಕಿ ದಾರಿಹೋಕರು ತುಳಿಯುವುದಕ್ಕೆ ಅದು ಯೋಗ್ಯವೇ ಹೊರತು ಮತ್ತ್ಯಾವ ಕೆಲಸಕ್ಕೂ ಬರುವುದಿಲ್ಲ.


ಅದನ್ನು ಕೇಳಿ ರಾಜನು ಬಹಳ ಸಂತೋಷಪಟ್ಟು, ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆ ಎತ್ತಬೇಕೆಂದು ಅಪ್ಪಣೆಮಾಡಲು ಅವನನ್ನು ಅಲ್ಲಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಭರವಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ.


ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇಮಿನ ಕಡೆಗೆ ಕದವಿಲ್ಲದೆ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರ ಸಲ್ಲಿಸುತ್ತಿದ್ದನು


ಆಗ ನಾನು ದೂತರ ಮುಖಾಂತರವಾಗಿ ಅವರಿಗೆ, “ನನಗೆ ಒಂದು ದೊಡ್ಡ ಕೆಲಸವುಂಟು; ಅದನ್ನು ಬಿಟ್ಟು ನಿಮ್ಮ ಬಳಿಗೆ ಬಂದರೆ ಆ ಕೆಲಸವು ನಿಂತು ಹೋಗುವುದು; ನಾನು ಬರಲು ಸಾಧ್ಯವಿಲ್ಲ” ಎಂದು ಹೇಳಿ ಕಳುಹಿಸಿದೆನು.


ಈ ಮಾತುಗಳನ್ನು ಕೇಳಿ ಅವರು ರೌದ್ರಮನಸ್ಸುಳ್ಳವರಾಗಿ ಅವನ ಮೇಲೆ ಹಲ್ಲು ಕಡಿದರು.


ಭಕ್ತರಾದ ಜನರು ಸ್ತೆಫನನ ದೇಹವನ್ನು ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.


ಫಿಲಿಪ್ಪನು ಸಮಾರ್ಯವೆಂಬ ಪಟ್ಟಣಕ್ಕೆ ಹೋಗಿ ಕ್ರಿಸ್ತನ ವಿಷಯವಾಗಿ ಅಲ್ಲಿರುವವರಿಗೆ ಪ್ರಚುರಪಡಿಸಿದನು.


“ದಾವೀದನಾದರೋ ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕನುಸಾರವಾಗಿ ಸೇವೆಮಾಡಿದ ನಂತರ, ಸತ್ತಾಗ ತನ್ನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು, ಅವನ ದೇಹವು ಕೊಳೆಯುವ ಅವಸ್ಥೆಯನ್ನು ಅನುಭವಿಸಿತು.


ಯೆರೂಸಲೇಮಿನಲ್ಲಿ ಹಾಗೆಯೇ ಮಾಡಿದ್ದೆನು. ಮುಖ್ಯಯಾಜಕರಿಂದ, ಅಧಿಕಾರವನ್ನು ಪಡೆದು ದೇವಜನರಲ್ಲಿ ಅನೇಕರನ್ನು ಸೆರೆಮನೆಗಳಲ್ಲಿ ಇರಿಸಿ, ಅವರಿಗೆ ಮರಣದ ತೀರ್ಪಾದಾಗ, ನಾನು ಅದಕ್ಕೆ ಸಮ್ಮತಿಯನ್ನು ಸೂಚಿಸಿದೆನು.


ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಮಾಡುವವರನ್ನೂ ಹೊಗಳುತ್ತಾ ಪ್ರೇರೇಪಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು