ಅಪೊಸ್ತಲರ ಕೃತ್ಯಗಳು 8:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅದಕ್ಕೆ ಸೀಮೋನನು, “ನೀವು ಹೇಳಿರುವ ಸಂಗತಿಗಳಲ್ಲಿ ಯಾವುದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ಕರ್ತನನ್ನು ಬೇಡಿಕೊಳ್ಳಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆಗ ಸಿಮೋನನು, “ನೀವು ಹೇಳಿದ ಯಾವ ಕೇಡೂ ನನಗೆ ತಗಲದಂತೆ ನನಗಾಗಿ ನೀವೇ ಪ್ರಭುವಿನಲ್ಲಿ ಪ್ರಾರ್ಥನೆಮಾಡಿ,” ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅದಕ್ಕೆ ಸೀಮೋನನು - ನೀವು ಹೇಳಿರುವ ಸಂಗತಿಗಳಲ್ಲಿ ಯಾವದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ನೀವೇ ಕರ್ತನನ್ನು ಬೇಡಿಕೊಳ್ಳಿರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಸಿಮೋನನು, “ನೀವಿಬ್ಬರೂ ನನಗೋಸ್ಕರ ಪ್ರಭುವಿನಲ್ಲಿ ಪ್ರಾರ್ಥಿಸಿ. ನೀವು ಹೇಳಿದ ಸಂಗತಿಗಳು ನನಗಾಗದಂತೆ ಪ್ರಾರ್ಥಿಸಿ!” ಎಂದು ಕೇಳಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆಗ ಸೀಮೋನನು, “ನೀವು ಹೇಳಿದ ಯಾವುದೂ ನನಗೆ ಸಂಭವಿಸದಂತೆ ನನಗೋಸ್ಕರ ಕರ್ತ ಯೇಸುವಿನಲ್ಲಿ ಪ್ರಾರ್ಥಿಸಿರಿ,” ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ತನ್ನಾ ಸಿಮಾವಾನ್ ಮಾಜ್ಯಾ ಸಾಟ್ನಿ ತುಮಿ ದೊಗೆಬಿ ಧನಿಯಾಕ್ಡೆ ತುಮಿ ಸಾಂಗಲ್ಲ್ಯಾ ಸಂಗ್ತಿಯಾತ್ನಿ ಎಕ್ಬಿ ಮಾಕಾ ಹೊವ್ಕ್ ನ್ಹಯ್ ಸಾರ್ಕೆ ಮಾಗ್ನಿ ಕರಾ! ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |
ಈಗ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಹೋಗಿ ನಿಮ್ಮ ದೋಷಪರಿಹಾರಕ್ಕಾಗಿ ಹೋಮಮಾಡಿರಿ. ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆ ಮಾಡುವನು. ನಾನು ಅವನ ವಿಜ್ಞಾಪನೆಯನ್ನು ಲಾಲಿಸಿ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ನಿಮಗೆ ವಿಧಿಸುವುದಿಲ್ಲ. ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ” ಎಂದು ಹೇಳಿದನು.