ಅಪೊಸ್ತಲರ ಕೃತ್ಯಗಳು 8:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅವನು ಎದ್ದು ಹೊರಟು ಹೋಗುತ್ತಿರುವಾಗ ಇಥಿಯೋಪ್ಯ ದೇಶದ ಒಬ್ಬ ಮನುಷ್ಯನನ್ನು ಕಂಡನು. ಅವನು ಕಂಚುಕಿಯೂ ಇಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾರಿಯೂ ಹಾಗೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27-28 ಅಂತೆಯೇ ಫಿಲಿಪ್ಪನು ಹೊರಟನು. ಆಗ ಇಥಿಯೋಪಿಯದ ಕಂಚುಕಿಯೊಬ್ಬನು ಅದೇ ಮಾರ್ಗವಾಗಿ ಬರುತ್ತಿದ್ದನು. ಅವನು ಆ ದೇಶದ ರಾಣಿ ಕಂದಾಕಿಯ ಕೋಶಾಧಿಕಾರಿ ಹಾಗೂ ಸಚಿವ. ದೇವಾರಾಧನೆಗೆಂದು ಜೆರುಸಲೇಮಿಗೆ ಹೋಗಿ ಹಿಂದಿರುಗುತ್ತಿದ್ದನು. ಅವನು ತನ್ನ ರಥದಲ್ಲಿ ಕುಳಿತು ಯೆಶಾಯನ ಪ್ರವಾದನೆಯನ್ನು ಓದುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅವನು ಎದ್ದು ಹೊರಟುಹೋದನು; ಹೋಗುತ್ತಿರುವಾಗ ಐಥಿಯೋಪ್ಯ ದೇಶದ ಒಬ್ಬ ಮನುಷ್ಯನನ್ನು ಕಂಡನು. ಅವನು ಕಂಚುಕಿಯೂ ಐಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾರಿಯೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆದ್ದರಿಂದ ಫಿಲಿಪ್ಪನು ಸಿದ್ಧನಾಗಿ ಹೊರಟನು. ಇಥಿಯೋಪಿಯಾದ ಒಬ್ಬನನ್ನು ಅವನು ದಾರಿಯಲ್ಲಿ ಕಂಡನು. ಈ ಮನುಷ್ಯನು ನಪುಂಸಕನಾಗಿದ್ದನು. ಇಥಿಯೋಪಿಯದ ರಾಣಿಯಾದ ಕಂದಾಕೆಯ ಆಸ್ಥಾನದಲ್ಲಿ ಇವನು ಮುಖ್ಯಾಧಿಕಾರಿಯಾಗಿದ್ದನು. ಹಣವನ್ನೆಲ್ಲ ನೋಡಿಕೊಳ್ಳುವ ಜವಾಬ್ದಾರಿ ಇವನದೇ ಆಗಿತ್ತು. ಈ ಮನುಷ್ಯನು ಆರಾಧನೆಗಾಗಿ ಜೆರುಸಲೇಮಿಗೆ ಹೋಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅದರಂತೆ ಅವನು ಹೋಗುತ್ತಿದ್ದಾಗ, ಮಾರ್ಗದಲ್ಲಿ ಐಥಿಯೋಪ್ಯದ ರಾಣಿ ಕಂದಾಕೆಯ ಹಣಕಾಸಿನ ಮುಖ್ಯ ಅಧಿಕಾರಿಯಾಗಿದ್ದ ಕಂಚುಕಿಯನ್ನು ಭೇಟಿಯಾದನು. ಈ ಮನುಷ್ಯನು ಆರಾಧನೆಗಾಗಿ ಯೆರೂಸಲೇಮಿಗೆ ಹೋಗಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ತಸೆ ಹೊವ್ನ್ ಫಿಲಿಪ್ ತಯಾರ್ ಹೊವ್ನ್ ಜಾವ್ಲಾಲೊ, ತನ್ನಾ ಇಥಿಯೊಫಿಯಾತ್ಲೊ, ಎಕ್ ಮಾನುಸ್ ತೆಕಾ ವಾಟೆರ್ ದಿಸ್ಲೊ, ಹೊ ಮಾನುಸ್ ಹಿಜ್ಡಾ ಹೊಲ್ಲೊ, ಇಥಿಯೊಫಿಯಾಚ್ಯಾ ರಾನಿಚ್ಯಾ ಆಸ್ಥಾನಾತ್ ಹ್ಯೊ ಮೊಟೊ ಅಧಿಕಾರಿ ಹೊವ್ನ್ ಹೊತ್ತೊ ಪೈಸೆ ಸಗ್ಳ್ಯೆ ಬಗುನ್ ಘೆತಲಿ ಜವಾಬ್ದಾರಿ ತೆಕಾಚ್ ಹೊತ್ತಿ, ತೊ ದೆವಾಚಿ ಸ್ತುತಿ ಕರುಕ್ ಸಾಟ್ನಿ ಜೆರುಜಲೆಮಾಕ್ ಗೆಲ್ಲೊ. ಅಧ್ಯಾಯವನ್ನು ನೋಡಿ |