Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮ ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಅವನು ಸಂತೋಷವುಳ್ಳವನಾಗಿ ತನ್ನ ಪ್ರಯಾಣವನ್ನು ಮುಂದುವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಅವರಿಬ್ಬರು ನೀರಿನಿಂದ ಮೇಲಕ್ಕೆ ಬಂದೊಡನೆ ಪ್ರಭುವಿನ ಆತ್ಮವು ಫಿಲಿಪ್ಪನನ್ನು ಅಲ್ಲಿಂದ ಕೊಂಡೊಯ್ಯಿತು. ಆ ಅಧಿಕಾರಿ ಫಿಲಿಪ್ಪನನ್ನು ಪುನಃ ಕಾಣಲಿಲ್ಲ; ಅವನು ಸಂತೋಷಭರಿತನಾಗಿ ಪ್ರಯಾಣವನ್ನು ಮುಂದುವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮ ಫಿಲಿಪ್ಪನನ್ನು ಎತ್ತಿಕೊಂಡುಹೋಗಲಾಗಿ ಕಂಚುಕಿಯು ಸಂತೋಷವುಳ್ಳವನಾಗಿ ತನ್ನ ದಾರಿಯನ್ನು ಹಿಡಿದು ಅವನನ್ನು ಕಾಣಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಅವರು ನೀರಿನಿಂದ ಮೇಲಕ್ಕೆ ಬಂದಾಗ ಪ್ರಭುವಿನ ಆತ್ಮನಿಂದ ಫಿಲಿಪ್ಪನು ಎತ್ತಲ್ಪಟ್ಟನು. ಅವನು ಫಿಲಿಪ್ಪನನ್ನು ಮತ್ತೆಂದೂ ನೋಡಲಿಲ್ಲ. ಅವನು ಬಹಳ ಸಂತೋಷದಿಂದ ತನ್ನ ಪ್ರಯಾಣವನ್ನು ಮುಂದುವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಅವರು ನೀರಿನಿಂದ ಹೊರಗೆ ಬಂದಾಗ, ತಕ್ಷಣವೇ ಕರ್ತದೇವರ ಆತ್ಮರು ಫಿಲಿಪ್ಪನನ್ನು ತೆಗೆದುಕೊಂಡು ಹೋದರು. ಆಮೇಲೆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಕಂಚುಕಿಯು ಸಂತೋಷಪಡುತ್ತಾ ತನ್ನ ಮಾರ್ಗದಲ್ಲಿ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ತೆನಿ ಪಾನಿಯಾತ್ನಾ ವೈರ್ ಯೆಲ್ಲ್ಯಾತನ್ನಾ, ಧನಿಯಾಚ್ಯಾ ಆತ್ಮ್ಯಾನ್ ಫಿಲಿಪಾಕ್ ಉಕ್ಲುನ್ ನ್ಹೆಲ್ಯಾನ್, ಅನಿ ಕನ್ನಾಬಿ ಫಿಲಿಪ್ ತ್ಯಾ ಮಾನ್ಸಾಕ್ ದಿಸುಕ್ ನಾ, ತೊ ಲೈ ಕುಶಿ ಹೊವ್ನ್ ಅಪ್ನಿ ಜಾವ್‍ಲಾಗಲ್ಯಾ ವಾಟೆನ್ ಫಿಡೆ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:39
29 ತಿಳಿವುಗಳ ಹೋಲಿಕೆ  

ನಾನು ನಿನ್ನನ್ನು ಬಿಟ್ಟು ಹೊರಟ ಕೂಡಲೆ ಯೆಹೋವನ ಆತ್ಮವು ನಿನ್ನನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವುದು. ನಾನು ಹೋಗಿ ಅಹಾಬನಿಗೆ ಹೇಳುವಷ್ಟರಲ್ಲಿ ನೀನು ಅವನಿಗೆ ಸಿಕ್ಕದೆ ಹೋದರೆ ಅವನು ನನ್ನನ್ನು ಕೊಂದು ಹಾಕುವನು. ನಾನು ಬಾಲ್ಯಾರಭ್ಯ ಯೆಹೋವನಲ್ಲಿ ಭಯಭಕ್ತಿಯುಳ್ಳವನಲ್ಲವೇ?


ಅನಂತರ ಅವರು ಅವನಿಗೆ, “ನಿನ್ನ ಸೇವಕರಾದ ನಮ್ಮಲ್ಲಿ ಐವತ್ತು ಮಂದಿ ಬಲಿಷ್ಠಜನರಿದ್ದಾರೆ. ನಿನ್ನ ಯಜಮಾನನ್ನು ಹುಡುಕುವುದಕ್ಕೆ ಅವರಿಗೆ ಅಪ್ಪಣೆಯಾಗಲಿ ಯೆಹೋವನ ಆತ್ಮವು ಅವನನ್ನು ಎತ್ತಿಕೊಂಡು ಹೋಗಿ ಒಂದು ಬೆಟ್ಟದ ಮೇಲಾಗಲಿ ತಗ್ಗಿನಲ್ಲಾಗಲಿ ಇಟ್ಟಿರಬಹುದು” ಎಂದು ಹೇಳಿದರು. ಅವನು ಅವರಿಗೆ, “ನೀವು ಅವರನ್ನು ಕಳುಹಿಸಬೇಡಿರಿ” ಎಂದನು.


ಆಮೇಲೆ ದೇವರಾತ್ಮ ಪರವಶನಾದ ನನ್ನನ್ನು ಎತ್ತಿ, ದಿವ್ಯ ದರ್ಶನದ ಮುಖಾಂತರ ಕಸ್ದೀಯರ ದೇಶದಲ್ಲಿ ಸೆರೆಯಾದವರ ಬಳಿಗೆ ಕರೆತಂದಿತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು.


ಆಗ ಆ ತೇಜೋರೂಪಿಯು ಮನುಷ್ಯ ಹಸ್ತದಂಥ ಹಸ್ತವನ್ನು ಚಾಚಿ ನನ್ನ ತಲೆಯ ಕೂದಲಿನಿಂದ ಹಿಡಿಯಲು ದೇವರಾತ್ಮವು ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಯೆರೂಸಲೇಮಿನವರೆಗೆ ಒಯ್ದು, ಒಳಗಣ ಪ್ರಾಕಾರದ ಉತ್ತರ ಬಾಗಿಲ ಮುಂದೆ, ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ಆ ದೇವದರ್ಶನದಲ್ಲಿ ನನಗೆ ಕಂಡು ಬಂದಿತು.


ದೇವರಾತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆದು ತಂದಿತು. ಆಗ ಯೆಹೋವನ ಮಹಿಮೆಯು ಆಲಯವನ್ನು ತುಂಬಿಕೊಂಡಿತು.


ಆ ಮೇಲೆ ದೇವರಾತ್ಮವು ನನ್ನನ್ನು ಎತ್ತಿ ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಯೆಹೋವನ ಆಲಯದ ಮೂಡಣ ಬಾಗಿಲಿಗೆ ತಂದುಬಿಟ್ಟಿತು; ಇಗೋ, ಬಾಗಿಲ ಮುಂದೆ ಇಪ್ಪತ್ತೈದು ಜನರು ನಿಂತಿದ್ದರು; ಅವರ ಮಧ್ಯದಲ್ಲಿ ಅಜ್ಜೂರನ ಮಗನಾದ ಯಾಜನ್ಯ, ಬೆನಾಯನ ಮಗನಾದ ಪೆಲತ್ಯ ಎಂಬ ಜನನಾಯಕರನ್ನು ನಾನು ನೋಡಿದೆ.


ಯೇಸುವು ನೀರಿನೊಳಗಿನಿಂದ ಮೇಲಕ್ಕೆ ಬಂದ ಕೂಡಲೇ ಪರಲೋಕವು ತೆರೆಯಲ್ಪಟ್ಟು ದೇವರಾತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿಯುವುದನ್ನು ಕಂಡನು.


ನಿಜವಾದ ಸುನ್ನತಿಯವರು ಯಾರೆಂದರೆ, ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ, ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ, ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವುಗಳೇ.


ಆದರೆ ನೀವು ನಿಮ್ಮ ಅಹಂನಿಂದ ಹೊಗಳಿಕೊಳ್ಳುತ್ತೀರಿ. ಅಂಥ ಹೊಗಳಿಕೆಯೆಲ್ಲಾ ಕೆಟ್ಟದ್ದೇ.


ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ, ಸಂತೋಷಪಡಿರಿ ಎಂದು ಪುನಃ ಹೇಳುತ್ತೇನೆ.


ಈಗ ನಾವು ನೆಲೆಗೊಂಡಿರುವ ದೇವರ ಕೃಪಾಶ್ರಯಕ್ಕೆ ಆತನ ಮುಖಾಂತರವೇ ನಂಬಿಕೆಯಿಂದ ಸೇರಿದವರಾಗಿದ್ದೇವೆ ಮತ್ತು ದೇವರ ಮಹಿಮೆಯ ನಿರೀಕ್ಷೆಯಲ್ಲಿ ಉಲ್ಲಾಸಪಡುತ್ತೇವೆ.


ಶಿಷ್ಯರಾದವರು ಸಂತೋಷಭರಿತರೂ, ಪವಿತ್ರಾತ್ಮಭರಿತರೂ ಆಗಿದ್ದರು.


ಆ ಪಟ್ಟಣದಲ್ಲಿ ಬಹು ಸಂತೋಷವುಂಟಾಯಿತು.


“ಪರಲೋಕ ರಾಜ್ಯವು ಹೊಲದಲ್ಲಿ ಮುಚ್ಚಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ಕಂಡುಕೊಂಡು ಮುಚ್ಚಿಟ್ಟು. ತನಗಾದ ಸಂತೋಷದಿಂದ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.


ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡ ನೀರಿನಿಂದ ಮೇಲಕ್ಕೆ ಬಂದ ಕೂಡಲೇ ಇಗೋ, ಆತನಿಗಾಗಿ ಪರಲೋಕವು ತೆರೆಯಿತು; ಮತ್ತು ದೇವರ ಆತ್ಮವು ಪಾರಿವಾಳದ ಹಾಗೆ ತನ್ನ ಮೇಲೆ ಇಳಿದು ಬರುವುದನ್ನು ಕಂಡನು.


ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು. ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ, ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ.


ನಿನ್ನ ಕಟ್ಟಳೆಗಳನ್ನು ನನ್ನ ನಿತ್ಯಸ್ವತ್ತಾಗಿ ಆರಿಸಿಕೊಂಡಿದ್ದೇನೆ, ಅವು ನನ್ನ ಹೃದಯಕ್ಕೆ ಉಲ್ಲಾಸಕರವಾಗಿವೆ.


ಸರ್ವಸಂಪತ್ತಿನಲ್ಲಿ ಹೇಗೋ, ಹಾಗೆಯೇ ನಿನ್ನ ಕಟ್ಟಳೆಯ ಮಾರ್ಗದಲ್ಲಿ ಆನಂದಿಸುತ್ತೇನೆ.


ತರುವಾಯ ಅವರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಊಟಮಾಡಿಸಿದನು. ಅವನು ತನ್ನ ಮನೆಯವರೆಲ್ಲರ ಸಂಗಡ ದೇವರನ್ನು ನಂಬಿ ಸಂತೋಷಪಟ್ಟರು.


ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಲು, ಆತನು ತನ್ನ ಆತ್ಮದ ಮೂಲಕ ನನ್ನನ್ನು ಒಯ್ದು ಎಲುಬುಗಳಿಂದ ತುಂಬಿದ್ದ ಒಂದು ಕಣಿವೆಯಲ್ಲಿ ಇಳಿಸಿದನು.


ದೇವರಾತ್ಮನು ಫಿಲಿಪ್ಪನಿಗೆ, “ನೀನು ಆ ರಥದ ಹತ್ತಿರ ಹೋಗಿ ಅದರೊಂದಿಗೆ ಸೇರಿ ನಡೆ” ಎಂದು ಹೇಳಿದನು.


ಫಿಲಿಪ್ಪನು ಕಂಚುಕಿಯು ಇಬ್ಬರೂ ನೀರಿನೊಳಗೆ ಇಳಿದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು