Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ತರುವಾಯ ಫಿಲಿಪ್ಪನು ಅಜೋತ್ ಎಂಬಲ್ಲಿ ಕಾಣಿಸಿಕೊಂಡು ಅಲ್ಲಿಂದ ಕೈಸರೈಯದ ತನಕ ಎಲ್ಲಾ ಊರುಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಫಿಲಿಪ್ಪನಾದರೋ ಆಜೋತ್ ಎಂಬಲ್ಲಿ ಕಾಣಿಸಿಕೊಂಡನು. ಅಲ್ಲಿಂದ ಸೆಜರೇಯವನ್ನು ತಲುಪುವವರೆಗೆ ಎಲ್ಲಾ ಊರುಗಳಲ್ಲೂ ಶುಭಸಂದೇಶವನ್ನು ಸಾರುತ್ತಾ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿಕೊಂಡು ಅಲ್ಲಿಂದ ಕೈಸರೈಯದ ತನಕ ಎಲ್ಲಾ ಊರುಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಆದರೆ ಫಿಲಿಪ್ಪನು ಅಜೋತ್ ಎಂಬ ಪಟ್ಟಣದಲ್ಲಿ ಕಾಣಿಸಿಕೊಂಡು ಸೆಜರೇಯ ಎಂಬ ಪಟ್ಟಣಕ್ಕೆ ಹೋದನು. ಅಲ್ಲಿಗೆ ಹೋಗುವಾಗ ದಾರಿಯಲ್ಲಿ ಸಿಕ್ಕಿದ ಎಲ್ಲಾ ಊರುಗಳಲ್ಲಿಯೂ ಸುವಾರ್ತೆಯನ್ನು ಸಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಫಿಲಿಪ್ಪನು, ಅಜೋತಿನಲ್ಲಿ ಕಾಣಿಸಿಕೊಂಡು, ಕೈಸರೈಯ ತಲುಪುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಪ್ರಯಾಣಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಖರೆ ಫಿಲಿಪಾನ್ ಅಜೊತ್ ಮನ್ತಲ್ಯಾ ಶಾರಾತ್ ದಾಕ್ವುನ್ ಘೆವ್ನ್ ಸೆಜರೆಯ ಮನ್ತಲ್ಯಾ ಶಾರಾತ್ ಜಾತಾನಾ ವಾಟೆರ್ ಗಾವಲ್ಯಾ ಸಗ್ಳ್ಯಾ ಗಾಂವಾತ್ನಿ ಬಿ ದೆವಾಚಿ ಬರಿ ಖಬರ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:40
21 ತಿಳಿವುಗಳ ಹೋಲಿಕೆ  

ಮರುದಿನ ಹೊರಟು ಕೈಸರೈಯಕ್ಕೆ ಬಂದು, ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನ ಬಳಿಯಲ್ಲಿಯೇ ಇಳುಕೊಂಡೆವು. ಅವನು ಆ ಏಳು ಮಂದಿಯಲ್ಲಿ ಒಬ್ಬನಾಗಿದ್ದನು.


ಫೆಸ್ತನು ಅವರಿಗೆ; ಪೌಲನು ಕೈಸರೈಯದಲ್ಲಿ ಸೆರೆಮನೆಯೊಳಗಿದ್ದಾನೆ, ನಾನೇ ಬೇಗ ಅಲ್ಲಿಗೆ ಹೊರಟು ಹೋಗಬೇಕೆಂದಿದ್ದೇನೆ.


ಸವಾರರು ಕೈಸರೈಯಕ್ಕೆ ಸೇರಿ, ದೇಶಾಧಿಪತಿಗೆ ಪತ್ರವನ್ನು ಒಪ್ಪಿಸಿ, ಪೌಲನನ್ನು ಅವನ ಮುಂದೆ ನಿಲ್ಲಿಸಿದರು.


ಆ ಮೇಲೆ ಅವನು ಶತಾಧಿಪತಿಗಳಲ್ಲಿ ಇಬ್ಬರನ್ನು ಕರೆಯಿಸಿ; “ರಾತ್ರಿ ಒಂಭತ್ತು ಘಂಟೆಗೆ ಕೈಸರೈಯದ ತನಕ ಹೋಗುವಂತೆ ಇನ್ನೂರು ಮಂದಿ ಸಿಪಾಯಿಗಳನ್ನೂ, ಎಪ್ಪತ್ತುಮಂದಿ ಕುದುರೆ ಸವಾರರನ್ನೂ, ಇನ್ನೂರು ಮಂದಿ ಈಟಿ ಹಿಡಿದ ಸೈನಿಕರನ್ನು ಸಿದ್ಧಮಾಡಿರಿ.”


ಕೈಸರೈಯ ಪಟ್ಟಣದಲ್ಲಿ ಇತಾಲ್ಯ ಸೈನ್ಯದ ಶತಾಧಿಪತಿಯಾದ ಕೊರ್ನೆಲ್ಯನೆಂಬ ಒಬ್ಬ ಮನುಷ್ಯನಿದ್ದನು.


ಫಿಲಿಷ್ಟಿಯರು ದೇವರ ಮಂಜೂಷವನ್ನು ಎಬೆನೆಜೆರಿನಿಂದ ಅಷ್ಡೋದಿನಲ್ಲಿರುವ


ನಾನು ಯೆರೂಸಲೇಮ್ ಮೊದಲುಗೊಂಡು ಇಲ್ಲುರಿಕ ಸೀಮೆಯ ಸುತ್ತಮುತ್ತ ಪ್ರಯಾಣಿಸಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ಪೂರೈಸಿದ್ದೇನೆ.


ಕೆಲವು ದಿನಗಳು ಕಳೆದನಂತರ ಅಗ್ರಿಪ್ಪರಾಜನೂ, ಬೆರ್ನಿಕೆರಾಣಿಯೂ, ಫೆಸ್ತನನ್ನು ಭೇಟಿಯಾಗುವುದಕ್ಕೆ ಕೈಸರೈಯಕ್ಕೆ ಬಂದರು.


ಅವನು ಯೆರುಸಲೇಮಿನಲ್ಲಿ ಎಂಟು ಹತ್ತಕ್ಕಿಂತ ಹೆಚ್ಚು ದಿನಗಳು ನಿಲ್ಲದೆ ಕೈಸರೈಯಕ್ಕೆ ಹೋಗಿ ಮರುದಿನ ನ್ಯಾಯಸ್ಥಾನದಲ್ಲಿ ಕುಳಿತುಕೊಂಡು, ಪೌಲನನ್ನು ಕರತರಬೇಕೆಂದು ಅಪ್ಪಣೆಮಾಡಿದನು.


ಫೆಸ್ತನು ಅಧಿಕಾರ ವಹಿಸಿಕೊಂಡು, ಮೂರು ದಿನಗಳಾದ ನಂತರ ಕೈಸರೈಯದಿಂದ ಯೆರೂಸಲೇಮಿಗೆ ಹೋದನು.


ಕೈಸರೈಯದಿಂದ ಕೆಲವು ಶಿಷ್ಯರು ನಮ್ಮ ಜೊತೆಯಲ್ಲಿ ಬಂದು ನಾವು ಇಳುಕೊಳ್ಳಬೇಕಾಗಿದ್ದವನ ಮನೆಯ ತನಕ ನಮ್ಮನ್ನು ಕರೆದುಕೊಂಡು ಹೋದರು. ಆ ಮನೆಯವನು ಪ್ರಥಮ ಶಿಷ್ಯರಲ್ಲಿ ಒಬ್ಬನಾದ ಕುಪ್ರದೇಶದ ಮ್ನಾಸೋನನೆಂಬವನು.


ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದ್ದರಿಂದ, ಕಾವಲುಗಾರರನ್ನು ವಿಚಾರಣೆಮಾಡಿ, ಅವರಿಗೆ ಮರಣದಂಡನೆಯನ್ನು ವಿಧಿಸಿದನು. ಬಳಿಕ ಹೆರೋದನು ಯೂದಾಯದಿಂದ ಕೈಸರೈಗೆ ಹೋಗಿ ಅಲ್ಲಿ ಕೆಲವು ಕಾಲ ಇದ್ದನು.


ಮರುದಿನ ಅವನು ಕೈಸರೈಯಕ್ಕೆ ಬಂದು ಸೇರಿದನು. ಕೊರ್ನೆಲ್ಯನು ತನ್ನ ಬಂಧುಬಳಗದವರನ್ನೂ ಮತ್ತು ಅಪ್ತಮಿತ್ರರನ್ನೂ ಕರೆಯಿಸಿ ಪೇತ್ರನಿಗಾಗಿ ಎದುರುನೋಡುತ್ತಿದ್ದನು.


ಹೀಗಿರಲಾಗಿ ಅವರು ಕರ್ತನ ವಾಕ್ಯವನ್ನು ಪ್ರಮಾಣಪೂರ್ವಕವಾಗಿ ಹೇಳಿದ ಮೇಲೆ ಯೆರೂಸಲೇಮಿಗೆ ಹಿಂತಿರುಗಿ ಬಂದು ಸಮಾರ್ಯದವರ ಅನೇಕ ಊರುಗಳಲ್ಲಿ ಸುವಾರ್ತೆಯನ್ನು ಸಾರಿದರು.


ಅಷ್ಡೋದಿನಲ್ಲಿ ಮಿಶ್ರಜಾತಿಯವರು ವಾಸಮಾಡುವರು; ಹೀಗೆ ಫಿಲಿಷ್ಟಿಯದ ಗರ್ವವನ್ನು ಭಂಗಪಡಿಸುವೆನು.


ಇಸ್ರಾಯೇಲರ ಪ್ರಾಂತ್ಯಗಳಲ್ಲಿ ಯಾರೊಬ್ಬರೂ ಉಳಿಯಲಿಲ್ಲ. ಆದರೆ ಗಾಜಾ, ಗತೂರು, ಅಷ್ಡೋದ್, ಎಂಬ ಊರುಗಳಲ್ಲಿ ಮಾತ್ರ ಕೆಲವರು ಉಳಿದಿದ್ದರು.


ಇದು ಸಹೋದರರಿಗೆ ತಿಳಿದು ಬರಲು, ಅವರು ಅವನನ್ನು ಕೈಸರೈಯಕ್ಕೆ ಕರೆದುಕೊಂಡು ಹೋಗಿ, ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು.


ಆ ಕ್ಷಣದಲ್ಲೇ ಮೂವರು ಪುರುಷರು ನಾವಿದ್ದ ಮನೆಯ ಮುಂದೆ ನಿಂತಿದ್ದರು. ಅವರು ಕೈಸರೈಯದಿಂದ ನನ್ನ ಹತ್ತಿರಕ್ಕೆ ಕಳುಹಿಸಲ್ಪಟ್ಟವರು.


ಯೆರೂಸಲೇಮಿಗೆ ಹೋಗಿ ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು