ಅಪೊಸ್ತಲರ ಕೃತ್ಯಗಳು 9:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಕರ್ತನು ಅವನಿಗೆ, “ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ, ಅರಸುಗಳಿಗೂ, ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಪ್ರಭು ಅವನಿಗೆ, “ನೀನು ಹೋಗು, ನನ್ನ ನಾಮವನ್ನು ಅನ್ಯಧರ್ಮದವರಿಗೂ ಅರಸರಿಗೂ ಇಸ್ರಯೇಲಿನ ಜನರಿಗೂ ಪ್ರಕಟಿಸಲು ನಾನು ಆರಿಸಿಕೊಂಡಿರುವ ಸಾಧನ ಅವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಕರ್ತನು ಅವನಿಗೆ - ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ ಅರಸುಗಳಿಗೂ ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದರೆ ಪ್ರಭುವು ಅನನೀಯನಿಗೆ, “ಹೋಗು! ಮುಖ್ಯವಾದ ಕೆಲಸಕ್ಕಾಗಿ ನಾನು ಸೌಲನನ್ನು ಆರಿಸಿಕೊಂಡಿದ್ದೇನೆ. ಅವನು ನನ್ನ ಬಗ್ಗೆ ರಾಜರುಗಳಿಗೂ ಯೆಹೂದ್ಯರಿಗೂ ಮತ್ತು ಇತರ ಜನಾಂಗಗಳಿಗೂ ತಿಳಿಸಬೇಕಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದರೆ ಕರ್ತ ಯೇಸುವು ಅವನಿಗೆ, “ಹೋಗು! ಯೆಹೂದ್ಯರಲ್ಲದವರಿಗೂ ಅವರ ಅರಸುಗಳಿಗೂ ಇಸ್ರಾಯೇಲ್ ದೇಶಕ್ಕೂ ನನ್ನ ಹೆಸರನ್ನು ಪ್ರಸಿದ್ಧಿಪಡಿಸಲು ಅವನು ನಾನು ಆಯ್ದುಕೊಂಡ ಸಾಧನವಾಗಿದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಖರೆ ಧನಿಯಾನ್ ಅನನಿಯಾಕ್, ಜಾ! ತೆಕಾ ಮಿಯಾ ಮಾಜ್ಯಾ ವಿಶಯಾತ್ ರಾಜಾಕ್ನಿ, ಜುದೆವಾಕ್ನಿ, ಅನಿ ಹುರಲ್ಯಾ ಇಸ್ರಾಯೆಲ್ ಲೊಕಾಕ್ನಿ ಕಳ್ವುತಲ್ಯಾ ಮುಖ್ಯ್ ಕಾಮಾಚೊ ಹತಿಯಾರ್ ಕರುನ್ ಎಚುನ್ ಘೆಟಲ್ಲೆ ಹಾಯ್. ಅಧ್ಯಾಯವನ್ನು ನೋಡಿ |