Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಹಿಂಸೆ ಅನುಭವಿಸಬೇಕೆಂಬುದನ್ನು ನಾನೇ ಅವನಿಗೆ ತೋರಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವನು ನನ್ನ ನಾಮದ ನಿಮಿತ್ತ ಎಷ್ಟು ಕಷ್ಟಕಾರ್ಪಣ್ಯಗಳನ್ನು ಅನುಭವಿಸಬೇಕೆಂಬುದನ್ನು ನಾನೇ ಅವನಿಗೆ ತೋರಿಸುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವನು ನನ್ನ ಹೆಸರಿನ ನಿವಿುತ್ತ ಎಷ್ಟು ಹಿಂಸೆ ಅನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅವನು ನನ್ನ ಹೆಸರಿನ ನಿಮಿತ್ತ ಅನುಭವಿಸಬೇಕಾಗಿರುವ ಹಿಂಸೆಯನ್ನು ನಾನೇ ಅವನಿಗೆ ತೋರಿಸಿಕೊಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನನ್ನ ಹೆಸರಿನ ನಿಮಿತ್ತವಾಗಿ ಅವನು ಎಷ್ಟು ಕಷ್ಟಪಡಬೇಕೆಂಬುದನ್ನು ನಾನು ಅವನಿಗೆ ತೋರಿಸುವೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 “ತೆನಿ ಮಾಜ್ಯಾ ಸಾಟ್ನಿ ಸೊಸುನ್ ಘೆವ್ಚೊ ಹೊಲ್ಲೊ ತರಾಸ್ ಮಿಯಾಚ್, ತೆಕಾ ದಾಕ್ವುನ್ ದಿತಾ” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:16
22 ತಿಳಿವುಗಳ ಹೋಲಿಕೆ  

ಸಂಕಟಗಳನ್ನು ಅನುಭವಿಸುವುದಕ್ಕಾಗಿಯೇ ನಾವು ನೇಮಿಸಲ್ಪಟ್ಟವರೆಂದು ನೀವೇ ಬಲ್ಲಿರಷ್ಟೆ.


ತನ್ನ ಕೈಕಾಲುಗಳನ್ನು ಕಟ್ಟಿಕೊಂಡು; “ಈ ನಡುಕಟ್ಟು ಯಾವನದೋ ಅವನನ್ನು ‘ಯೆಹೂದ್ಯರು ಇದೇ ರೀತಿಯಾಗಿ ಯೆರೂಸಲೇಮಿನಲ್ಲಿ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸಿ ಕೊಡುವರು, ಎಂದು ಪವಿತ್ರಾತ್ಮನು ಹೇಳುತ್ತಾನೆಂಬುದಾಗಿ’” ಹೇಳಿದನು.


ಬದಲಾಗಿ, ಎಲ್ಲಾ ವಿಷಯಗಳಲ್ಲಿ ದೇವರ ಸೇವಕರೆಂದು ನಮ್ಮ ಸೇವೆಯನ್ನು ಸಮ್ಮತ ಮಾಡಿಕೊಂಡು, ನಾವು ಸಂಕಟದಲ್ಲಿಯೂ, ಕೊರತೆಗಳಲ್ಲಿಯೂ, ಇಕ್ಕಟ್ಟುಗಳಲ್ಲಿಯೂ, ಪೆಟ್ಟುಗಳಲ್ಲಿಯೂ,


ದಣಿಗಿಂತ ಆಳು ದೊಡ್ಡವನಲ್ಲವೆಂಬುದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕ ಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಕೈಗೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಗೊಳ್ಳುತ್ತಿದ್ದರು.


ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಧನ್ಯರು. ಮಹಿಮೆಯ ಆತ್ಮನಾಗಿರುವ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲಾ.


ಅದರ ನಿಮಿತ್ತದಿಂದಲೇ ಈ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನಗೆ ಒಪ್ಪಿಸಿಕೊಟ್ಟಿರುವುದನ್ನು ಆತನು ಆ ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.


“ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.


“ಆಗ ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು; ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲಾ ಜನಾಂಗಗಳವರು ದ್ವೇಷಿಸುವರು.


ಅಂತಿಯೋಕ್ಯ, ಇಕೋನ್ಯ, ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ, ಕಷ್ಟಾನುಭವಗಳನ್ನೂ ತಿಳಿದವನಾಗಿದ್ದೀ. ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನು, ಅವೆಲ್ಲವುಗಳೊಳಗಿನಿಂದ ಕರ್ತನು ನನ್ನನ್ನು ಬಿಡಿಸಿದನು.


ಅಲ್ಲಿ ಶಿಷ್ಯರನ್ನು ಹುಡುಕಿ, ಕಂಡು ಏಳು ದಿನ ಉಳಿದುಕೊಂಡೆವು. ಅವರು ದೇವರಾತ್ಮನ ಪ್ರೇರಣೆಯಿಂದ ಪೌಲನಿಗೆ; ನೀನು ಯೆರೂಸಲೇಮಿಗೆ ಕಾಲಿಡಬೇಡವೆಂದು ಹೇಳಿದರು.


ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಹಿಂಸೆಯಲ್ಲಿ, ರಾಜ್ಯದಲ್ಲಿ, ತಾಳ್ಮೆಯಲ್ಲಿ, ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರ ಯೇಸುವಿನ ವಿಷಯವಾಗಿ ಸಾಕ್ಷಿ ನೀಡಲು ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು.


ಮತ್ತು ಇಲ್ಲಿಯೂ ನಿನ್ನ ಹೆಸರನ್ನು ಸ್ಮರಿಸುವವರೆಲ್ಲರಿಗೆ ಬೇಡಿಹಾಕಿಸುವ ಅಧಿಕಾರವನ್ನು ಮುಖ್ಯಯಾಜಕರಿಂದ ಹೊಂದಿದ್ದಾನೆ” ಅಂದನು.


ಸೂರೆಯಾಗದಿದ್ದರೂ ಸೂರೆಮಾಡಿದಿ! ಬಾಧೆಪಡದಿದ್ದರೂ ಬಾಧಿಸಿದಿ! ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ. ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು.


ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ಅಲ್ಲಿ ನಿನಗೆ ತಿಳಿಸಲ್ಪಡುವುದು” ಎಂದು ಹೇಳಿದನು.


ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.


ಅದಕ್ಕೆ ಪೌಲನು; “ನೀವು ದುಃಖಿಸುತ್ತಾ ಏಕೆ ನನ್ನ ಎದೆಯೊಡೆಯುವಂತೆ ಮಾಡುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿಮಿತ್ತವಾಗಿ ಯೆರೂಸಲೇಮಿನಲ್ಲಿ ಬೇಡೀಹಾಕಿಸಿಕೊಳ್ಳುವುದಕ್ಕೆ ಮಾತ್ರವಲ್ಲ ಸಾಯುವುದಕ್ಕೂ ಸಿದ್ಧವಾಗಿದ್ದೇನೆ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು