ಅಪೊಸ್ತಲರ ಕೃತ್ಯಗಳು 9:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು, “ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣು ಕಾಣುವಂತೆಯೂ, ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅಂತೆಯೇ ಅನನೀಯನು ಹೊರಟು ಆ ಮನೆಗೆ ಹೋದನು. ಸೌಲನ ಮೇಲೆ ಹಸ್ತನಿಕ್ಷೇಪಮಾಡಿ, “ಸಹೋದರ ಸೌಲನೇ, ಪ್ರಭು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆ. ನೀನು ಬರುವಾಗ ದಾರಿಯಲ್ಲಿ ಕಾಣಿಸಿಕೊಂಡ ಯೇಸುಸ್ವಾಮಿಯೇ, ನೀನು ದೃಷ್ಟಿಯನ್ನು ಮರಳಿ ಪಡೆಯುವಂತೆಯೂ ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ಕಳುಹಿಸಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು - ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆದ್ದರಿಂದ ಅನನೀಯನು ಅಲ್ಲಿಂದ ಹೊರಟು ಯೂದನ ಮನೆಗೆ ಹೋದನು. ಅವನು ಸೌಲನ ಮೇಲೆ ತನ್ನ ಕೈಗಳನ್ನಿಟ್ಟು, “ಸೌಲನೇ, ನನ್ನ ಸಹೋದರನೇ, ಪ್ರಭುವಾದ ಯೇಸು ನನ್ನನ್ನು ಕಳುಹಿಸಿದ್ದಾನೆ. ನೀನು ಇಲ್ಲಿಗೆ ಬರುವಾಗ ದಾರಿಯಲ್ಲಿ ಕಂಡದ್ದು ಆತನನ್ನೇ. ನೀನು ಮತ್ತೆ ದೃಷ್ಟಿಪಡೆಯಬೇಕೆಂತಲೂ ಪವಿತ್ರಾತ್ಮಭರಿತನಾಗಬೇಕೆಂತಲೂ ಯೇಸು ನನ್ನನ್ನು ಕಳುಹಿಸಿದನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆಮೇಲೆ ಅನನೀಯನು ಆ ಮನೆಗೆ ಹೋಗಿ ಒಳಗೆ ಪ್ರವೇಶಿಸಿದನು. ತನ್ನ ಕೈಗಳನ್ನು ಸೌಲನ ಮೇಲಿಟ್ಟು, “ಸಹೋದರ ಸೌಲನೇ, ನೀನು ಇಲ್ಲಿಗೆ ಬರುತ್ತಿದ್ದಾಗ ದಾರಿಯಲ್ಲಿ ನಿನಗೆ ದರ್ಶನಕೊಟ್ಟ ಕರ್ತ ಯೇಸು, ನಿನಗೆ ಪುನಃ ದೃಷ್ಟಿ ಬರುವಂತೆಯೂ ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ಕಳುಹಿಸಿದ್ದಾರೆ,” ಎಂದು ಹೇಳಲು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ತಸೆ ಹೊವ್ನ್ ಅನನಿಯ್ ಜುದಾಸಾಚ್ಯಾ ಘರಾಕ್ ಗೆಲೊ, ಅನಿ ಸಾವ್ಲುಚೆರ್ ಅಪ್ನಿ ಹಾತಾ ಥವ್ನ್ “ಸಾವ್ಲ್, ಮಾಜ್ಯಾ ಭಾವಾ, ಧನಿಯಾ ಜೆಜುನ್ ಮಾಕಾ ಧಾಡುನ್ ದಿಲಾ, ತಿಯಾ ಹಿತ್ತೆ ಯೆತಾನಾ ವಾಟೆರ್ ಬಗಟಲ್ಲೆ ತೆಕಾಚ್, ತುಕಾ ಪರ್ತುನ್ ಡೊಳೆ ಯೆಯ್ ಸಾರ್ಕೆ ಹೊವ್ಚೆ, ಅನಿ ಪವಿತ್ರ್ ಆತ್ಮ್ಯಾನ್ ಭರುಚೊ ಮನುನ್ ಜೆಜುನ್ ಮಾಕಾ ಧಾಡುನ್ ದಿಲಾ” ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |