ಅಪೊಸ್ತಲರ ಕೃತ್ಯಗಳು 9:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಕೇಳಿದವರೆಲ್ಲರು ಬೆರಗಾಗಿ; “ಯೇಸುಕ್ರಿಸ್ತನ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ನಾಶಮಾಡುತ್ತಿದ್ದವನು ಇವನಲ್ಲವೇ. ಅಂಥವರನ್ನು ಬೇಡಿಹಾಕಿಸಿ ಮುಖ್ಯಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂದು ಇಲ್ಲಿಗೆ ಬಂದಿರುವನಲ್ಲವೇ” ಎಂದು ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅವನ ಬೋಧನೆಯನ್ನು ಕೇಳಿದವರೆಲ್ಲರೂ ಚಕಿತರಾದರು. “ಜೆರುಸಲೇಮಿನಲ್ಲಿ ಯೇಸುವಿನ ನಾಮಸ್ಮರಣೆ ಮಾಡುತ್ತಿದ್ದವರನ್ನು ಬಲಿಹಾಕುತ್ತಿದ್ದವನು ಇವನೇ ಅಲ್ಲವೇ? ಅಂಥವರನ್ನು ಬಂಧಿಸಿ ಮುಖ್ಯಯಾಜಕರ ಬಳಿಗೆ ಎಳೆದೊಯ್ಯುವ ಉದ್ದೇಶದಿಂದಲೇ ಅಲ್ಲವೆ ಇವನು ಇಲ್ಲಿಗೆ ಬಂದಿರುವುದು?” ಎಂದು ಪ್ರಶ್ನಿಸತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಕೇಳಿದವರೆಲ್ಲರು ಬೆರಗಾಗಿ - ಈ ಹೆಸರು ಹೇಳುವವರನ್ನು ಯೆರೂಸಲೇವಿುನಲ್ಲಿ ಹಾಳುಮಾಡಿದವನು ಇವನಲ್ಲವೇ. ಅಂಥವರನ್ನು ಬೇಡಿಹಾಕಿಸಿ ಮಹಾಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂದೇ ಇಲ್ಲಿಗೆ ಬಂದನಲ್ಲವೇ ಎಂದು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಸೌಲನ ಮಾತನ್ನು ಕೇಳಿದ ಜನರೆಲ್ಲರೂ ವಿಸ್ಮಯಗೊಂಡು, “ಜೆರುಸಲೇಮಿನಲ್ಲಿದ್ದವನು ಈ ಮನುಷ್ಯನೇ. ಈ ಹೆಸರಿನಲ್ಲಿ (ಯೇಸುವಿನ) ನಂಬಿಕೆ ಇಡುವ ಜನರನ್ನು ನಾಶಮಾಡಲು ಇವನು ಪ್ರಯತ್ನಿಸುತ್ತಿದ್ದನು! ಯೇಸುವಿನ ಶಿಷ್ಯರನ್ನು ಬಂಧಿಸಿ ಜೆರುಸಲೇಮಿನಲ್ಲಿರುವ ಮಹಾಯಾಜಕರ ಬಳಿಗೆ ಕೊಂಡೊಯ್ಯಲು ಇವನು ಇಲ್ಲಿಗೂ ಬಂದಿದ್ದಾನೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅವನ ಮಾತುಗಳನ್ನು ಕೇಳಿದವರಿಗೆ ಅತ್ಯಾಶ್ಚರ್ಯವಾಯಿತು. ಅವರು, “ಈ ಹೆಸರನ್ನು ಹೇಳುವವರೆಲ್ಲರಿಗೆ ಯೆರೂಸಲೇಮಿನಲ್ಲಿ ತೊಂದರೆಕೊಟ್ಟು ಗೊಂದಲವೆಬ್ಬಿಸಿದವನು ಇವನೇ ಅಲ್ಲವೇ? ಅಂಥವರನ್ನು ಸೆರೆಹಿಡಿದು ಮುಖ್ಯಯಾಜಕರ ಬಳಿಗೆ ಎಳೆದೊಯ್ಯಲು ಇಲ್ಲಿಗೆ ಬಂದವನಲ್ಲವೇ?” ಎಂದು ಪ್ರಶ್ನಿಸಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ತೆಜೆ ಬೊಲ್ನೆ ಆಯ್ಕಲ್ಲಿ ಲೊಕಾ ಸಗ್ಳ್ಯಿ ಅಜಾಪ್ ಹೊಲಿ, ಅನಿ ಜೆರುಜಲೆಮಾತ್ ಹೊತ್ತೊ ಮಾನುಸ್ ಹ್ಯೊಚ್, ಜೆಜುಚ್ಯಾ ನಾವಾರ್ ವಿಶ್ವಾಸ್ ಥವ್ತಲ್ಯಾ ಲೊಕಾಕ್ನಿ ಜಿವಾನಿ ಮಾರುಕ್ ಬಗಿತ್ ಹೊತ್ತೊ! ಜೆಜುಚ್ಯಾ ಲೊಕಾಕ್ನಿ ಧರುನ್ ಮುಖ್ಯ್ ಯಾಜಕಾಂಚ್ಯಾಕ್ಡೆ ವೊಡುನ್ ನ್ಹೆವ್ಚೆ ಮನುನ್ ಯೆಲ್ಲೊ ಹ್ಯೊಚ್ ನ್ಹಯ್ ಕಾಯ್? ಅಧ್ಯಾಯವನ್ನು ನೋಡಿ |