ಅಪೊಸ್ತಲರ ಕೃತ್ಯಗಳು 9:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆದರೆ ಬಾರ್ನಬನು ಅವನನ್ನು ಕೈಹಿಡಿದು, ಅಪೊಸ್ತಲರ ಬಳಿಗೆ ಕರೆದುಕೊಂಡುಹೋಗಿ, ಅವನು ದಮಸ್ಕದ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ, ಕರ್ತನು ಅವನ ಸಂಗಡ ಮಾತನಾಡಿದ್ದನ್ನೂ, ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಪ್ರಚಾರ ಮಾಡಿದ್ದನ್ನೂ ಅವರಿಗೆ ವಿವರವಾಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆಗ ಬಾರ್ನಬನು ಅವನನ್ನು ಪ್ರೇಷಿತರ ಬಳಿಗೆ ಕರೆದುಕೊಂಡು ಹೋದನು. ಸೌಲನು ಪ್ರಭುವನ್ನು ಮಾರ್ಗದಲ್ಲಿ ದರ್ಶಿಸಿದ್ದನ್ನೂ ಅವರು ಅವನೊಂದಿಗೆ ಮಾತನಾಡಿದ್ದನ್ನೂ ತಿಳಿಸಿದನು. ಅಲ್ಲದೆ ದಮಸ್ಕಸಿನಲ್ಲಿ ಧೈರ್ಯದಿಂದ ಯೇಸುವಿನ ಹೆಸರಿನಲ್ಲಿ ಬೋಧಿಸಿದ್ದನ್ನೂ ಅವರಿಗೆ ವಿವರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆದರೆ ಬಾರ್ನಬನು ಅವನನ್ನು ಕೈಹಿಡಿದು ಅಪೊಸ್ತಲರ ಬಳಿಗೆ ಕರೆದುಕೊಂಡುಹೋಗಿ ಅವನು ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ ಕರ್ತನು ಅವನ ಸಂಗಡ ಮಾತಾಡಿದ್ದನ್ನೂ ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತಾಡಿದ್ದನ್ನೂ ಅವರಿಗೆ ವಿವರವಾಗಿ ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆದರೆ ಬಾರ್ನಬನು ಸೌಲನನ್ನು ಸ್ವೀಕರಿಸಿಕೊಂಡು ಅಪೊಸ್ತಲರ ಬಳಿಗೆ ಕರೆದುಕೊಂಡು ಬಂದನು. ಸೌಲನು ದಮಸ್ಕದ ದಾರಿಯಲ್ಲಿ ಪ್ರಭುವನ್ನು ನೋಡಿರುವುದನ್ನೂ ಪ್ರಭುವು ಸೌಲನೊಂದಿಗೆ ಮಾತಾಡಿದ್ದನ್ನೂ ಬಾರ್ನಬನು ಅವರಿಗೆ ವಿವರಿಸಿದನು. ಅಲ್ಲದೆ ಸೌಲನು ದಮಸ್ಕದಲ್ಲಿ ಜನರಿಗೆ ಪ್ರಭುವಿನ ವಿಷಯದಲ್ಲಿ ನಿರ್ಭಯವಾಗಿ ಬೋಧಿಸಿದ್ದನ್ನೂ ಅವರಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಬಾರ್ನಬನು ಅವನನ್ನು ಕರೆದುಕೊಂಡು ಅಪೊಸ್ತಲರ ಬಳಿಗೆ ಬಂದನು. ಸೌಲನು ಪ್ರಯಾಣ ಮಾಡುತ್ತಿದ್ದಾಗ ಅವನಿಗೆ ಕರ್ತ ಯೇಸು ದರ್ಶನವಾದದ್ದನ್ನೂ ಕರ್ತ ಯೇಸು ಅವನೊಂದಿಗೆ ಮಾತನಾಡಿದ್ದನ್ನೂ ಯಾವ ಭಯವಿಲ್ಲದೆ ದಮಸ್ಕದಲ್ಲಿ ಯೇಸುವಿನ ಹೆಸರಿನಲ್ಲಿ ಅವನು ಬೋಧಿಸಿದ್ದನ್ನೂ ಬಾರ್ನಬನು ತಿಳಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ಖರೆ ಬಾರ್ನಾಬಾಸ್ ತೆಕಾ ಮಜತ್ ಕರುಕ್ ಯೆಲೊ ಅನಿ ಅಪೊಸ್ತಲಾಂಚ್ಯಾ ಜಗ್ಗೊಳ್ ಬುಲ್ವುನ್ ಹಾನ್ಲ್ಯಾನ್, ಸಾವ್ಲಾನ್ ದಮಸ್ಕಾಚ್ಯಾ ವಾಟೆರ್ ಧನಿಯಾಕ್ ಬಗಲ್ಲೆ, ಅನಿ ಧನಿಯಾನ್ ತೆಚ್ಯಾ ವಾಂಗ್ಡಾ ಬೊಲಲ್ಲೆ ಬರ್ನಾಬಾಸಾನ್ ತೆಂಕಾ ಸಾಂಗ್ಲ್ಯಾನ್, ತವ್ಡೆಚ್ ನ್ಹಯ್ ಸಾವ್ಲಾನ್ ಧಮಾಸ್ಕಾತ್ ಲೊಕಾಕ್ನಿ ಧನಿಯಾಚ್ಯಾ ವಿಶಯಾತ್ ಧೈರ್‍ಯಾನಿ ಪರ್ಗಟ್ ಕರ್ಲ್ಯಾನ್. ಅಧ್ಯಾಯವನ್ನು ನೋಡಿ |