Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಮತ್ತು ಗ್ರೀಕ್ ಭಾಷೆಯನ್ನಾಡುವ ಯೆಹೂದ್ಯರ ಸಂಗಡ ಮಾತನಾಡಿ ತರ್ಕಮಾಡುತ್ತಿದ್ದನು. ಆದರೆ ಅವರು ಅವನನ್ನು ಕೊಲ್ಲುವುದಕ್ಕೆ ಪ್ರಯತ್ನ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಗ್ರೀಕ್ ಮಾತನಾಡುತ್ತಿದ್ದ ಯೆಹೂದ್ಯರೊಡನೆ ಸಂಭಾಷಿಸುತ್ತಾ ಅವರ ವಿರುದ್ಧ ವಾದಿಸುತ್ತಿದ್ದನು. ಅವರಾದರೋ ಅವನನ್ನು ಕೊಲ್ಲಲು ಹವಣಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಮತ್ತು ಗ್ರೀಕ್ ಭಾಷೆಯನ್ನಾಡುವ ಯೆಹೂದ್ಯರ ಸಂಗಡ ಮಾತಾಡಿ ತರ್ಕಿಸುತ್ತಿದ್ದನು. ಆದರೆ ಅವರು ಅವನನ್ನು ಕೊಲ್ಲುವದಕ್ಕೆ ಪ್ರಯತ್ನ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಗ್ರೀಕ್ ಮಾತಾಡುತ್ತಿದ್ದ ಯೆಹೂದ್ಯರೊಂದಿಗೆ ಸೌಲನು ಪದೇಪದೇ ವಾದಮಾಡಿದನು. ಆದರೆ ಅವರು ಅವನನ್ನು ಕೊಲ್ಲಲು ಪ್ರಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಗ್ರೀಕ್ ಮಾತನಾಡುವ ಯೆಹೂದ್ಯರೊಂದಿಗೆ ಅವನು ಮಾತನಾಡಿ ಚರ್ಚೆಮಾಡಿದಾಗ, ಅವರು ಅವನನ್ನು ಕೊಲ್ಲಲು ಪ್ರಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಸಾವ್ಲು ಗ್ರಿಕ್ ಭಾಶ್ಯಾ ಭೊಲ್ತಲ್ಯಾ ಜುದೆವಾಂಚ್ಯಾ ವಾಂಗ್ಡಾ ಪರ್ತುನ್ ಭೊಲ್ತಾ ಅನಿ ವಾದ್ ಕರ್‍ತಾ ಖರೆ ತೆನಿ ತೆಕಾ ಜಿವ್ ಕಾಡುಕ್ ಬಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:29
13 ತಿಳಿವುಗಳ ಹೋಲಿಕೆ  

ಆ ದಿನಗಳಲ್ಲಿ ಶಿಷ್ಯರು ಹೆಚ್ಚುತ್ತಾ ಬರಲಾಗಿ ಅವರೊಳಗೆ ಗ್ರೀಕ್ ಭಾಷೆಯವರು ಇಬ್ರಿಯ ಭಾಷೆಯವರ ಮೇಲೆ ದೂರು ನೀಡುತ್ತಾ ಅನುದಿನದ ಉಪಚಾರದಲ್ಲಿ ನಮ್ಮ ವಿಧವೆಯರನ್ನು ಸರಿಯಾಗಿ ಪರಾಂಬರಿಸುವುದಿಲ್ಲವೆಂದು ಗೊಣಗುಟ್ಟಿದರು.


ಆದರೂ ಪ್ರಧಾನ ದೇವದೂತನಾದ ಮೀಕಾಯೇಲನು ಮೋಶೆಯ ದೇಹದ ವಿಷಯದಲ್ಲಿ ಸೈತಾನನೊಂದಿಗೆ ವಾಗ್ವಾದ ಮಾಡಿದಾಗ, ಅವನು ಸೈತಾನನಿಗೆ ವಿರೋಧವಾಗಿ ಒಂದೂ ನಿಂದೆಯ ಮಾತನಾಡದೆ, “ಕರ್ತನು ನಿನ್ನನ್ನು ಗದರಿಸಲಿ” ಎಂದನು.


ಕ್ರಿಸ್ತನ ಸೇವೆಯಲ್ಲಿ ಎಷ್ಟೋ ಪ್ರಯಾಣಗಳನ್ನು ಮಾಡಿದೆನು. ನದಿಗಳ ಅಪಾಯಗಳೂ, ಕಳ್ಳರ ಅಪಾಯಗಳೂ, ಸ್ವಂತ ಜನರಿಂದ ಅಪಾಯಗಳೂ, ಅನ್ಯಜನರಿಂದ ಅಪಾಯಗಳೂ, ಪಟ್ಟಣದಲ್ಲಿ ಅಪಾಯ, ನಿರ್ಜನ ಸ್ಥಳದಲ್ಲಿ ಅಪಾಯ, ಸಮುದ್ರದಲ್ಲಿ ಅಪಾಯ, ಸುಳ್ಳು ಸಹೋದರರೊಳಗಿನಿಂದಾದ ಅಪಾಯಗಳೂ ನನಗೆ ಸಂಭವಿಸಿದವು.


ಅವರಲ್ಲಿ ಕುಪ್ರದ್ವೀಪದವರು ಕೆಲವರೂ, ಕುರೇನ್ಯದವರು ಕೆಲವರೂ, ಅಂತಿಯೋಕ್ಯಕ್ಕೆ ಬಂದು, ಗ್ರೀಕರೊಂದಿಗೆ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ಸಾರಿದರು.


ಆ ಪಟ್ಟಣದಲ್ಲಿ ಪೌಲನು ಸಭಾಮಂದಿರದೊಳಗೆ ಹೋಗಿ, ಮೂರು ತಿಂಗಳು ಅಲ್ಲೇ ದೇವರ ರಾಜ್ಯದ ವಿಷಯಗಳನ್ನು ಕುರಿತು, ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.


ಎಫೆಸಕ್ಕೆ ಬಂದಾಗ ಅವರನ್ನು ಅಲ್ಲೇ ಬಿಟ್ಟು, ತಾನು ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ವಾದಿಸಿದನು.


ಆದುದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರ ಮತ್ತು ಯೆಹೂದ್ಯ ಮತಾವಲಂಬಿಗಳೊಂದಿಗೆ ಮತ್ತು ಪ್ರತಿದಿನ ಪೇಟೆಯಲ್ಲಿ ಕಂಡುಬಂದವರ ಸಂಗಡಲೂ ಚರ್ಚಿಸಿದನು.


ಆದರೆ ಬಾರ್ನಬನು ಅವನನ್ನು ಕೈಹಿಡಿದು, ಅಪೊಸ್ತಲರ ಬಳಿಗೆ ಕರೆದುಕೊಂಡುಹೋಗಿ, ಅವನು ದಮಸ್ಕದ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ, ಕರ್ತನು ಅವನ ಸಂಗಡ ಮಾತನಾಡಿದ್ದನ್ನೂ, ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಪ್ರಚಾರ ಮಾಡಿದ್ದನ್ನೂ ಅವರಿಗೆ ವಿವರವಾಗಿ ಹೇಳಿದನು.


ಪ್ರಿಯರೇ, ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನ ಮಾಡುತ್ತಿದ್ದಾಗ, ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ, ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.


ಆ ಮೇಲೆ ಸೌಲನು ಯೆರೂಸಲೇಮಿನಲ್ಲಿದ್ದುಕೊಂಡು ಅವರಲ್ಲಿ ಬರುತ್ತಾ ಹೋಗುತ್ತಾ ಕರ್ತನ ಹೆಸರಿನಲ್ಲಿ ಧೈರ್ಯದಿಂದ ಬೋಧಿಸತೊಡಗಿದನು.


ಆತನು; ‘ನೀನು ತ್ವರೆಪಟ್ಟು ಬೇಗನೆ ಯೆರೂಸಲೇಮಿನಿಂದ ಹೊರಟುಹೋಗು, ನನ್ನ ವಿಷಯದಲ್ಲಿ, ನೀನು ಹೇಳುವ ಸಾಕ್ಷಿಯನ್ನು ಅವರು ಅಂಗೀಕರಿಸುವುದಿಲ್ಲ’ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು