Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಪೇತ್ರನು ಎಲ್ಲಾ ಕಡೆಗಳಲ್ಲಿಯೂ ಸಂಚಾರಮಾಡುತ್ತಿರುವಾಗ, ಲುದ್ದದಲ್ಲಿ ವಾಸವಾಗಿದ್ದ ದೇವಜನರ ಬಳಿಗೂ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಪೇತ್ರನು ಅಲ್ಲಲ್ಲಿದ್ದ ಭಕ್ತವಿಶ್ವಾಸಿಗಳಿಗೆ ಭೇಟಿಕೊಡುತ್ತಾ ಲುದ್ದ ಎಂಬ ಊರಿನಲ್ಲಿ ವಾಸವಾಗಿದ್ದ ಭಕ್ತರ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಪೇತ್ರನು ಎಲ್ಲಾ ಕಡೆಯೂ ಸಂಚಾರಮಾಡುತ್ತಿರುವಾಗ ಲುದ್ದದಲ್ಲಿ ವಾಸಿಯಾಗಿದ್ದ ದೇವಜನರ ಬಳಿಗೂ ಬಂದನು..

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಜೆರುಸಲೇಮಿನ ಸುತ್ತಮುತ್ತಲ್ಲಿದ್ದ ಊರುಗಳಲ್ಲೆಲ್ಲಾ ಪೇತ್ರನು ಪ್ರಯಾಣ ಮಾಡುತ್ತಿರುವಾಗ ಲುದ್ದ ಎಂಬ ಊರಲ್ಲಿ ವಾಸವಾಗಿರುವ ವಿಶ್ವಾಸಿಗಳನ್ನು ಭೇಟಿಯಾಗಲು ಅಲ್ಲಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಪೇತ್ರನು ಬೇರೆ ಬೇರೆ ಕಡೆಗಳಲ್ಲಿ ಪ್ರಯಾಣಮಾಡಿದ ತರುವಾಯ ಲುದ್ದದಲ್ಲಿಯ ದೇವಭಕ್ತರನ್ನು ಸಂದರ್ಶಿಸಲು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಪೆದ್ರು ಜೆರುಜಲೆಮಾಚ್ಯಾ ಅಜು ಬಾಜು ಹೊತ್ತ್ಯಾ ಗಾಂವಾತ್ನಿ ಜಾಂವ್ನ್ಗೆತ್ ರಾತಾನಾ ಲಿಡ್ಡಾ ಮನ್ತಲ್ಯಾ ಗಾಂವಾತ್ ಹೊತ್ತ್ಯಾ ದೆವಾಚ್ಯಾ ಲೊಕಾಕ್ನಿ ಭೆಟುಚೆ ಮನುನ್ ಥೈ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:32
18 ತಿಳಿವುಗಳ ಹೋಲಿಕೆ  

ಅದಕ್ಕೆ ಅನನೀಯನು, “ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನನ್ನು ನಂಬಿದ ದೇವಜನರಿಗೆ ಎಷ್ಟೋ ಕೇಡನ್ನುಂಟುಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ಕೇಳಿದ್ದೇನೆ.


ಹೀಗಿರಲಾಗಿ ಅವರು ಕರ್ತನ ವಾಕ್ಯವನ್ನು ಪ್ರಮಾಣಪೂರ್ವಕವಾಗಿ ಹೇಳಿದ ಮೇಲೆ ಯೆರೂಸಲೇಮಿಗೆ ಹಿಂತಿರುಗಿ ಬಂದು ಸಮಾರ್ಯದವರ ಅನೇಕ ಊರುಗಳಲ್ಲಿ ಸುವಾರ್ತೆಯನ್ನು ಸಾರಿದರು.


ಕ್ರಿಸ್ತ ಯೇಸುವಿನ ದಾಸರಾದ ಪೌಲ ಮತ್ತು ತಿಮೊಥೆಯರು, ಫಿಲಿಪ್ಪಿಯದಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವಜನರಾಗಿರುವವರೆಲ್ಲರಿಗೂ ಮತ್ತು ಅವರೊಂದಿಗಿರುವ ಸಭಾಧ್ಯಕ್ಷರಿಗೂ ಹಾಗೂ ಸಭಾಸೇವಕರಿಗೂ ಬರೆಯುವುದೇನೆಂದರೆ,


ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಎಫೆಸದಲ್ಲಿರುವ ದೇವಜನರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟಿರುವವರಿಗೂ ಬರೆಯುವುದೇನಂದರೆ,


ಆತನ ಹೆಸರಿನ ಪ್ರಸಿದ್ಧಿಗಾಗಿ ನಂಬಿಕೆಯೆಂಬ ವಿಧೇಯತ್ವವು ಉಂಟಾಗುವುದಕ್ಕೋಸ್ಕರ ನಾವು ಆತನ ಮೂಲಕವಾಗಿ ಕೃಪೆಯನ್ನೂ ಮತ್ತು ಅಪೊಸ್ತಲತನವನ್ನೂ ಹೊಂದಿದೆವು.


ಯೆರೂಸಲೇಮಿನಲ್ಲಿ ಹಾಗೆಯೇ ಮಾಡಿದ್ದೆನು. ಮುಖ್ಯಯಾಜಕರಿಂದ, ಅಧಿಕಾರವನ್ನು ಪಡೆದು ದೇವಜನರಲ್ಲಿ ಅನೇಕರನ್ನು ಸೆರೆಮನೆಗಳಲ್ಲಿ ಇರಿಸಿ, ಅವರಿಗೆ ಮರಣದ ತೀರ್ಪಾದಾಗ, ನಾನು ಅದಕ್ಕೆ ಸಮ್ಮತಿಯನ್ನು ಸೂಚಿಸಿದೆನು.


ಅವನು ಆಕೆಯನ್ನು ಕೈಹಿಡಿದು ಎಬ್ಬಿಸಿ, ಅಲ್ಲಿದ್ದ ವಿಧವೆಯರನ್ನು ಮತ್ತು ದೇವಜನರನ್ನೂ ಕರೆದು, ಜೀವಿತಳಾದ ಆಕೆಯನ್ನು ಅವರೆದುರಿಗೆ ನಿಲ್ಲಿಸಿದನು.


ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ, ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.


ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು.


ಬಂಡೆಗಳು ಸೀಳಿಹೋದವು; ಸಮಾಧಿಗಳು ತೆರೆದವು; ನಿದ್ರೆಹೋಗಿದ್ದ ಅನೇಕ ಭಕ್ತರ ದೇಹಗಳು ಜೀವದಿಂದ ಎದ್ದವು;


ನ್ಯಾಯಮಾರ್ಗವನ್ನು ರಕ್ಷಿಸುತ್ತಾ, ತನ್ನ ಭಕ್ತರ ದಾರಿಯನ್ನು ನೋಡಿಕೊಳ್ಳುವನು.


ಭೂಲೋಕದಲ್ಲಿರುವ ದೇವಜನರ ವಿಷಯದಲ್ಲಿ, “ಇವರೇ ಶ್ರೇಷ್ಠರು, ಇವರೇ ನನಗೆ ಇಷ್ಟರಾದವರು” ಎಂದು ಹೇಳುವೆನು.


ಎಲ್ಪಾಲನ ಮಕ್ಕಳು ಏಬರ್, ಮಿಷ್ಷಾಮ್ ಮತ್ತು ಶೆಮೆದ್. ಇವರೂ ಓನೋ, ಲೋದ್ ಎಂಬ ಪಟ್ಟಣಗಳನ್ನೂ, ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಟ್ಟಿಸಿದರು.


ಲೋದ್, ಹಾದೀದ್ ಮತ್ತು ಓನೋ ಎಂಬ ಊರುಗಳವರು 725


ಲೋದ್, ಹಾದೀದ್, ಮತ್ತು ಓನೋ ಊರಿನವರು - 721.


ಲೋದ್, ಓನೋ, ಗೇಹರಾಷೀಮ್ ಎಂಬ ಗ್ರಾಮಗಳೂ ಬೆನ್ಯಾಮೀನ್ ಕುಲದವರ ನಿವಾಸ ಸ್ಥಾನಗಳಾಗಿದ್ದವು.


ಅಲ್ಲಿ ಪಾರ್ಶ್ವವಾಯುರೋಗಿಯಾಗಿ ಎಂಟು ವರ್ಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು