Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಪೇತ್ರನು ಅವನಿಗೆ, “ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡುತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ನೀನೇ ಹಾಸಿಕೋ” ಎಂದು ಹೇಳಿದನು. ಕೂಡಲೆ ಅವನು ಎದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಪೇತ್ರನು ಅವನಿಗೆ, “ಐನೇಯಾ, ಯೇಸುಕ್ರಿಸ್ತರು ನಿನ್ನನ್ನು ಸ್ವಸ್ಥಪಡಿಸುತ್ತಾರೆ, ಎದ್ದು ನಿನ್ನ ಹಾಸಿಗೆಯನ್ನು ಎತ್ತಿಡು,” ಎಂದನು. ಆ ಕ್ಷಣವೇ ಅವನು ಎದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಪೇತ್ರನು ಅವನಿಗೆ - ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡುತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ಹಾಸಿಕೋ ಎಂದು ಹೇಳಿದನು. ಕೂಡಲೆ ಅವನು ಎದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಪೇತ್ರನು ಅವನಿಗೆ, “ಐನೇಯಾ, ಯೇಸು ಕ್ರಿಸ್ತನು ನಿನ್ನನ್ನು ಗುಣಪಡಿಸುತ್ತಾನೆ. ಎದ್ದು ನಿನ್ನ ಹಾಸಿಗೆಯನ್ನು ಎತ್ತಿಡು!” ಎಂದು ಹೇಳಿದನು. ಆ ಕೂಡಲೇ ಐನೇಯನು ಎದ್ದುನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಪೇತ್ರನು ಅವನಿಗೆ, “ಐನೇಯ, ಕ್ರಿಸ್ತ ಯೇಸುವು ನಿನ್ನನ್ನು ಗುಣಪಡಿಸುತ್ತಾರೆ. ಏಳು, ನಿನ್ನ ಹಾಸಿಗೆಯನ್ನು ಸುತ್ತಿಡು,” ಎಂದು ಹೇಳಲು, ತಕ್ಷಣವೇ ಐನೇಯ ಮೇಲಕ್ಕೆದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಪೆದ್ರು ತೆಕಾ “ಎನೆಯಾ ಜೆಜು ಕ್ರಿಸ್ತ್ ತುಕಾ ಗುನ್ ಕರ್‍ತಾ ಉಟುನ್ ತುಜೆ ಹಾತ್ರಾನ್ ಗೊಳಾ ಕರುನ್ ಥವ್!” ಮನುನ್ ಸಾಂಗ್ಲ್ಯಾನ್, ತನ್ನಾಚ್ ಎನೆಯಾ ಉಟುನ್ ಇಬೆ ರ್‍ಹಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:34
11 ತಿಳಿವುಗಳ ಹೋಲಿಕೆ  

ಪೇತ್ರನು ಇದನ್ನು ನೋಡಿ ಜನರಿಗೆ; “ಇಸ್ರಾಯೇಲ್ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನೀವು ನಮ್ಮನೇಕೆ ಈ ರೀತಿ ದೃಷ್ಟಿಯಿಟ್ಟು ನೋಡುತ್ತಿದ್ದಿರಿ? ನಾವು ನಮ್ಮ ಸ್ವಂತ ಶಕ್ತಿಯಿಂದಾಗಲಿ, ನಮ್ಮ ದೈವಭಕ್ತಿಯಿಂದಾಗಲಿ ಇವನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಬೇಡಿರಿ.


ಆಗ ಪೇತ್ರನು “ಬೆಳ್ಳಿ ಬಂಗಾರವಂತೂ ನನ್ನಲ್ಲಿಲ್ಲ, ನನ್ನಲ್ಲಿರುವುದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆ” ಎಂದು ಹೇಳಿ,


ಅಥವಾ ‘ಎದ್ದು ನಡೆ’ ಅನ್ನುವದೋ? ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು” ಎಂದು ಹೇಳಿ ಪಾರ್ಶ್ವವಾಯು ರೋಗಿಗೆ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಅಂದನು.


ಅನೇಕ ದಿನ ಅವಳು ಹೀಗೆ ಮಾಡುತ್ತಿದ್ದುದರಿಂದ ಪೌಲನು ಬಹಳವಾಗಿ ಬೇಸರಗೊಂಡು ಹಿಂತಿರುಗಿ ಅವಳೊಳಗಿದ್ದ ದುರಾತ್ಮಕ್ಕೆ; “ಅವಳನ್ನು ಬಿಟ್ಟುಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಆಜ್ಞಾಪಿಸುತ್ತೇನೆ” ಎಂದು ಹೇಳಿದನು. ಅದೇ ಗಳಿಗೆಯಲ್ಲಿಯೇ ಅದು ಬಿಟ್ಟು ಹೋಯಿತು.


ನೀವು ಶಿಲುಬೆಗೆ ಹಾಕಿಸಿದಂತಹ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂತಹ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ಸೌಖ್ಯಹೊಂದಿದದವನಾಗಿ ನಿಮ್ಮೆದುರಿನಲ್ಲಿ ನಿಂತಿದ್ದಾನೆ ಎಂಬುದನ್ನು ನೀವು ಮತ್ತು ಇಸ್ರಾಯೇಲ್ ಜನರೆಲ್ಲರಿಗೂ ಈ ಸಂಗತಿ ತಿಳಿದಿರಲಿ.


ನೀವು ನೋಡುತ್ತಿರುವಂತಹ, ನಿಮಗೆ ಗುರುತಿರುವಂತಹ ಈ ಮನುಷ್ಯನು ಗುಣವಾಗುವುದಕ್ಕೆ ಯೇಸುವಿನ ಹೆಸರಿನಲ್ಲಿ ಇಟ್ಟ ಅವನ ನಂಬಿಕೆಯೇ ಕಾರಣ; ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನಿಗೆ ನಿಮ್ಮೆಲ್ಲರ ಮುಂದೆ ಸಂಪೂರ್ಣಸೌಖ್ಯವನ್ನು ಕೊಟ್ಟಿತು.


ಆತನು ಕೈಚಾಚಿ ಆತನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುದ್ಧನಾಗು” ಅಂದನು. ಕೂಡಲೆ ಅವನು ಕುಷ್ಠದಿಂದ ಶುದ್ಧನಾದನು.


ಯೇಸು ಈ ಮೊದಲನೆಯ ಸೂಚಕ ಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ, ತನ್ನ ಮಹಿಮೆಯನ್ನು ತೋರ್ಪಡಿಸಿದನು. ಇದರಿಂದ ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು.


ಅಲ್ಲಿ ಪಾರ್ಶ್ವವಾಯುರೋಗಿಯಾಗಿ ಎಂಟು ವರ್ಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು.


ಮತ್ತು ಲುದ್ದದಲ್ಲಿಯೂ, ಶಾರೋನಿನಲ್ಲಿಯೂ ವಾಸವಾಗಿದ್ದವರೆಲ್ಲರು ಅವನನ್ನು ನೋಡಿ, ಅವರು ಕರ್ತನ ಕಡೆಗೆ ತಿರುಗಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು