Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ನೆಲಕ್ಕೆ ಬಿದ್ದನು. ಆಗ, “ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ?” ಎಂದು ಹೇಳುವ ವಾಣಿಯನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವನು ನೆಲಕ್ಕುರುಳಿದನು. “ಸೌಲನೇ, ಸೌಲನೇ, ನನ್ನನ್ನೇಕೆ ಹಿಂಸಿಸುತ್ತಿರುವೆ?” ಎಂಬ ವಾಣಿ ಅವನಿಗೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ನೆಲಕ್ಕೆ ಬಿದ್ದು - ಸೌಲನೇ, ಸೌಲನೇ, ನನ್ನನ್ನು ಯಾಕೆ ಹಿಂಸೆ ಪಡಿಸುತ್ತೀ ಎಂದು ಹೇಳುವ ವಾಣಿಯನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸೌಲನು ನೆಲಕ್ಕೆ ಬಿದ್ದನು. “ಸೌಲನೇ, ಸೌಲನೇ, ನೀನು ನನ್ನನ್ನೇಕೆ ಹಿಂಸಿಸುತ್ತಿರುವೆ?” ಎಂಬ ವಾಣಿಯೊಂದು ಅವನಿಗೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನು ನೆಲದ ಮೇಲೆ ಬೀಳಲು, “ಸೌಲನೇ, ಸೌಲನೇ, ಏಕೆ ನನ್ನನ್ನು ಹಿಂಸೆಪಡಿಸುತ್ತೀ?” ಎಂದು ಹೇಳುವ ವಾಣಿಯನ್ನು ಕೇಳಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತನ್ನಾ ಸಾವ್ಲು ಜಿಮ್ನಿರ್ ಪಡ್ಲೊ, “ಸಾವ್ಲ್, ಸಾವ್ಲ್! ತಿಯಾ ಮಾಕಾ ಕಶ್ಯಾಕ್ ತರಾಸ್ ದಿತೈಯ್?” ಮನ್ತಲಿ ಧನ್‍ ತೆಕಾ ಆಯ್ಕೊಯೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:4
22 ತಿಳಿವುಗಳ ಹೋಲಿಕೆ  

ನಿಮ್ಮನ್ನು ತಾಕುವವನು ನನ್ನ ಕಣ್ಣು ಗುಡ್ಡೆಯನ್ನು ತಾಕುವವನಾಗಿದ್ದಾನೆ. ಆದಕಾರಣ ತನ್ನ ಪ್ರಸಿದ್ಧಿಗಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಯೆಹೋವನು ನಿಮ್ಮನ್ನು ಸೂರೆಮಾಡಿದ ಜನಾಂಗಗಳ ವಿಷಯವಾಗಿ,


ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ದೇಹದ ಅಂಗಗಳೆಲ್ಲವೂ ಅನೇಕವಾಗಿದ್ದು ಒಂದೇ ದೇಹವಾಗಿದೆಯೋ, ಹಾಗೆಯೇ ಕ್ರಿಸ್ತನು ಇದ್ದಾನೆ.


ಆದ್ದರಿಂದ ದೇವರ ದಯೆಯನ್ನೂ, ದಂಡನೆಯನ್ನು ನೋಡು; ಬಿದ್ದವರಿಗೆ ದಂಡನೆಯನ್ನೂ, ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆಯನ್ನು ಹೊಂದುವಿ. ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.


ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ, ಪುರಾತನ ಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.


ಆಗ ಯೆಹೋವನ ದೂತನು ಆಕಾಶದೊಳಗಿನಿಂದ, “ಅಬ್ರಹಾಮನೇ, ಅಬ್ರಹಾಮನೇ” ಎಂದು ಅವನನ್ನು ಕರೆದನು. ಅದಕ್ಕೆ ಅಬ್ರಹಾಮನು, “ಇಗೋ, ಇದ್ದೇನೆ” ಎಂದನು.


“ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದಿ? ಎಲ್ಲಿಗೆ ಹೋಗುತ್ತೀ?” ಎಂದು ಕೇಳಲು ಅವಳು, “ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಾ ಇದ್ದೇನೆ” ಎಂದಳು.


ಸಭೆಯೆಂಬ ದೇಹಕ್ಕೆ ನಾವು ಅಂಗಗಳಾಗಿದ್ದೇವೆ ಸಭೆಯೆಂಬ ಈ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಪಾಲನೆ ಮಾಡುತ್ತಾ ಬಂದಿದ್ದಾನೆ.


ನಿನ್ನನ್ನು ಇತರರಿಗಿಂತಲೂ ಶ್ರೇಷ್ಠನನ್ನಾಗಿ ಮಾಡಿದವರು ಯಾರು? ದೇವರಿಂದ ಹೊಂದದೆ ಇರುವಂಥದು ನಿನ್ನಲ್ಲಿ ಒಂದಾದರೂ ಉಂಟೋ? ಹೊಂದಿದ ಮೇಲೆ ಹೊಂದಿದ್ದಲ್ಲವೆಂಬಂತೆ ಯಾಕೆ ಕೊಚ್ಚಿಕೊಳ್ಳುತ್ತೀ?


ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?” ಎಂದು ಕೇಳಲು ಅವನು “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ” ಎಂದನು. ಆತನು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು” ಎಂದು ಹೇಳಿದನು.


ಅದಕ್ಕೆ ಉತ್ತರವಾಗಿ ಅರಸನು, ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.


ಆಗ ಯೆಹೋವ ದೇವರು ಮನುಷ್ಯನನ್ನು ಕರೆದು, “ನೀನು ಎಲ್ಲಿದ್ದೀ?” ಎಂದು ಕೇಳಿದನು.


ಯೇಸು ಆಕೆಗೆ, “ಮರಿಯಳೇ,” ಎಂದು ಹೇಳಲು, ಆಕೆಯು ಅವನ ಕಡೆಗೆ ತಿರುಗಿ ಇಬ್ರಿಯ ಭಾಷೆಯಲ್ಲಿ ಆತನಿಗೆ, “ರಬ್ಬೂನಿ” ಎಂದಳು. ಹಾಗೆಂದರೆ ಗುರುವೇ ಎಂದರ್ಥ.


ಆತನು ಅವರಿಗೆ “ನಾನೇ ಆತನು” ಎಂದು ಹೇಳಿದಾಗ ಅವರು ಹಿಂದಕ್ಕೆ ಸರಿದು ನೆಲಕ್ಕೆ ಬಿದ್ದರು.


ಆದರೆ, ಕರ್ತನು ಆಕೆಗೆ, “ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ.


“ನೀವಿಬ್ಬರೂ ಸಮೂಹದವರಲ್ಲಿ ಇರದೆ ಬೇರೆ ನಿಲ್ಲಬೇಕು. ನಾನು ಒಂದು ಕ್ಷಣಮಾತ್ರದಲ್ಲಿ ಅವರನ್ನು ದಹಿಸಿಬಿಡುತ್ತೇನೆ” ಎಂದು ಹೇಳಿದನು. ಆಗ ಮೋಶೆ ಮತ್ತು ಆರೋನರು ಬೋರಲುಬಿದ್ದರು.


ಅವನು ಅದನ್ನು ನೋಡುವುದಕ್ಕೆ ಹತ್ತಿರ ಬರುವುದನ್ನು ಯೆಹೋವನು ಕಂಡನು. ಆಗ ದೇವರು ಆ ಪೊದೆಯೊಳಗಿಂದ “ಮೋಶೆಯೇ, ಮೋಶೆಯೇ” ಎಂದು ಅವನನ್ನು ಕರೆದನು. ಅದಕ್ಕೆ ಮೋಶೆ, “ಇಗೋ ಇದ್ದೇನೆ” ಅಂದನು.


ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣಬಿಟ್ಟಳು. ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿರುವುದನ್ನು ಕಂಡು ಆಕೆಯನ್ನು ಹೊತ್ತುಕೊಂಡು ಹೋಗಿ ಗಂಡನ ಮಗ್ಗುಲಲ್ಲಿ ಹೂಣಿಟ್ಟರು.


ಆಗ, “ಯಾರನ್ನು ಕಳುಹಿಸಲಿ? ಯಾರು ನಮಗೋಸ್ಕರ ಹೋಗುವನು?” ಎಂಬ ಕರ್ತನ ನುಡಿಯನ್ನು ಕೇಳಿ, “ಇಗೋ, ನಾನಿದ್ದೇನೆ, ನನ್ನನ್ನು ಕಳುಹಿಸು” ಎಂದೆನು.


ಅದಕ್ಕೆ ಸೌಲನು;, “ಕರ್ತನೇ, ನೀನಾರು?” ಎಂದು ಕೇಳಿದ್ದಕ್ಕೆ, ಕರ್ತನು, “ನೀನು ಹಿಂಸೆಪಡಿಸುವ ಯೇಸುವೇ ನಾನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು