Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಆ ಮೇಲೆ ಪೇತ್ರನು ಯೊಪ್ಪದಲ್ಲಿ ಚರ್ಮದ ಕೆಲಸ ಮಾಡುವ ಸೀಮೋನನೆಂಬುವನ ಬಳಿಯಲ್ಲಿ ಬಹಳ ದಿನಗಳ ವರೆಗೂ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಪೇತ್ರನು ಹಲವು ದಿನಗಳನ್ನು ಜೊಪ್ಪದಲ್ಲಿ ಚರ್ಮ ಹದಮಾಡುವ ಸಿಮೋನನ ಮನೆಯಲ್ಲಿ ಕಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಆಮೇಲೆ ಪೇತ್ರನು ಯೊಪ್ಪದಲ್ಲಿ ಚರ್ಮಕಾರನಾದ ಸೀಮೋನನೆಂಬವನ ಬಳಿಯಲ್ಲಿ ಬಹಳ ದಿವಸದವರೆಗೂ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಪೇತ್ರನು ಅನೇಕ ದಿನಗಳವರೆಗೆ ಜೊಪ್ಪದಲ್ಲಿದ್ದನು. ಚರ್ಮಕಾರನಾದ ಸಿಮೋನನ ಮನೆಯಲ್ಲಿ ಅವನು ಇಳಿದುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಪೇತ್ರನು ಯೊಪ್ಪದಲ್ಲಿ ಸೀಮೋನ ಎಂಬ ಹೆಸರಿನ ಚರ್ಮಕಾರನೊಂದಿಗೆ ಕೆಲವು ದಿನ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ಪೆದ್ರು ಲೈ ದಿಸಾಂಚ್ಯಾ ಪತರ್ ಬಿ ಜೊಪ್ಪಾತ್ಲ್ಯಾ ಚಮ್ಡ್ಯಾಚೆ ಕಾಮ್ ಕರ್‍ತಲ್ಯಾ ಸಿಮಾವಾಚ್ಯಾ ಘರಾತ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:43
12 ತಿಳಿವುಗಳ ಹೋಲಿಕೆ  

ಅವನು ಚಮ್ಮಾರನಾದ ಸೀಮೋನನ ಬಳಿಯಲ್ಲಿ ಇಳುಕೊಂಡಿದ್ದಾನೆ; ಈ ಸೀಮೋನನ ಮನೆಯು ಸಮುದ್ರತೀರದ ಬಳಿಯಲ್ಲಿ ಇದೆ” ಎಂದು ಹೇಳಿದನು.


ನೀನು ಯಾರನ್ನಾದರು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು, ಅವನು ಚಮ್ಮಾರನಾದ ಸೀಮೋನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರ ತೀರದ ಸಮೀಪವಿದೆ’ ಅಂದನು.


ಮೇಯರ್ಕೋನ್, ರಕ್ಕೋನ್ ಇವೇ. ಯೊಪ್ಪಕ್ಕೆ ಹೊಂದಿರುವ ಪ್ರದೇಶವೂ ಇವರಿಗೇ ದೊರಕಿತು.


ನಾವಾದರೋ ನಿನಗೆ ಬೇಕಾದ ಎಲ್ಲಾ ಮರಗಳನ್ನು ಲೆಬನೋನಿನಲ್ಲಿ ಕಡಿದು ತೆಪ್ಪಗಳಾಗಿ ಕಟ್ಟಿ, ಸಮುದ್ರ ಮಾರ್ಗವಾಗಿ ಯೊಪ್ಪಕ್ಕೆ ತೆಗೆದುಕೊಂಡು ಬರುತ್ತೇವೆ. ಅಲ್ಲಿಂದ ನೀನು ಅವುಗಳನ್ನು ಯೆರೂಸಲೇಮಿಗೆ ತರಿಸಿಕೊಳ್ಳಬಹುದು” ಎಂಬುದಾಗಿ ಉತ್ತರ ಕೊಟ್ಟನು.


ಆದರೆ ಪರ್ಷಿಯ ರಾಜನಾದ ಕೋರೆಷನಿಂದ ಪಡೆದುಕೊಂಡ ಅಪ್ಪಣೆಯ ಮೇರೆಗೆ ಅವರು ಕಲ್ಲುಕುಟಿಗರಿಗೆ ಮತ್ತು ಬಡಗಿಗಳಿಗೆ ಹಣವನ್ನೂ, ಲೆಬನೋನಿನಿಂದ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ದೇವದಾರು ಮರಗಳನ್ನು ತರುತ್ತಿದ್ದ ಚೀದೋನ್ಯರಿಗೆ ಮತ್ತು ತೂರ್ಯರಿಗೆ ಅನ್ನಪಾನಗಳನ್ನೂ ಮತ್ತು ಎಣ್ಣೆಯನ್ನೂ ಕೊಟ್ಟಿದ್ದರು.


ಆದರೆ ಯೋನನು ಯೆಹೋವನ ಸನ್ನಿಧಿಯಿಂದ ತಪ್ಪಿಸಿಕೊಳ್ಳಲು ತಾರ್ಷೀಷಿಗೆ ಓಡಿಹೋಗಬೇಕೆಂದು ಯೋಚಿಸಿ ಹೊರಟು ಯೊಪ್ಪ ಎಂಬ ಊರಿಗೆ ಬಂದು ಅಲ್ಲಿ ತಾರ್ಷೀಷಿಗೆ ಹೊರಡುವ ಹಡಗನ್ನು ಕಂಡು ಪ್ರಯಾಣದ ದರವನ್ನು ಕೊಟ್ಟು ತಾರ್ಷೀಷಿಗೆ ಪ್ರಯಾಣಮಾಡುತ್ತಿದ್ದ ಹಡಗಿನವರೊಡನೆ ಅದನ್ನು ಹತ್ತಿದನು.


ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿ ಇದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ, “ತಡಮಾಡದೆ ನಮ್ಮ ಹತ್ತಿರಕ್ಕೆ ಬರಬೇಕೆಂದು” ಬೇಡಿಕೊಂಡರು.


ಈ ಸಂಗತಿಯು ಯೊಪ್ಪದಲ್ಲೆಲ್ಲಾ ಹರಡಿ ಅನೇಕರು ಕರ್ತನ ಮೇಲೆ ನಂಬಿಕೆಯಿಟ್ಟರು.


ಈಗ ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ, ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು.


ಅವರಿಗೆ ಈ ಸಂಗತಿಗಳನ್ನೆಲ್ಲಾ ವಿವರವಾಗಿ ಹೇಳಿ, ಅವರನ್ನು ಯೊಪ್ಪ ಎಂಬ ಪಟ್ಟಣಕ್ಕೆ ಕಳುಹಿಸಿದನು.


ಆ ಮನುಷ್ಯನ ಮನೆಯೊಳಗೆ ನಾವು ಸೇರಲು ಅವನು ನಮಗೆ, ಒಬ್ಬ ದೇವದೂತನು ನನ್ನ ಮನೆಯಲ್ಲಿ ನಿಂತಿರುವುದನ್ನು ಕಂಡೆನು. ಆ ದೂತನು; “ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸು.


ನಾನು ಮಾತನಾಡುವುದಕ್ಕೆ ಪ್ರಾರಂಭಿಸಿದಾಗ, ಪವಿತ್ರಾತ್ಮವು ಮೊದಲು ನಮ್ಮ ಮೇಲೆ ಇಳಿದಂತೆ ಅವರ ಮೇಲೆಯೂ ಇಳಿಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು