Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಏನೂ ಕಾಣಿಸಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸೌಲನು ಮೇಲಕ್ಕೆದ್ದು ಕಣ್ಣರಳಿಸಿ ನೋಡಿದರೂ ಅವನಿಗೇನೂ ಕಾಣಿಸಲಿಲ್ಲ. ಆದುದರಿಂದ ಸಂಗಡಿಗರು ಅವನ ಕೈಹಿಡಿದು ದಮಸ್ಕಸ್ ಪಟ್ಟಣಕ್ಕೆ ಕರೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಏನೂ ಕಾಣಿಸಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಸೌಲನು ನೆಲದ ಮೇಲಿಂದ ಎದ್ದು ಕಣ್ಣುಗಳನ್ನು ತೆರೆದನು. ಆದರೆ ಅವನಿಗೆ ಏನೂ ಕಾಣಲಿಲ್ಲ. ಆದ್ದರಿಂದ ಸೌಲನೊಂದಿಗಿದ್ದ ಜನರು ಅವನನ್ನು ಕೈಹಿಡಿದು ದಮಸ್ಕಕ್ಕೆ ಕರೆದೊಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಸೌಲನು ನೆಲದಿಂದ ಎದ್ದ ಮೇಲೆ ಕಣ್ಣು ತೆರೆದಾಗ ಏನೂ ಕಾಣಿಸಲಿಲ್ಲ. ಅವರು ಅವನ ಕೈಹಿಡಿದು ದಮಸ್ಕದೊಳಗೆ ಕರೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಖಾಲ್ತಿ ಪಡಲ್ಯಾಕ್ನಾ ಸಾವ್ಲಾನ್ ಉಟುನ್ ಡೊಳೆ ಉಗಡ್ಲ್ಯಾನ್, ಖರೆ ತೆಕಾ ಕಾಯ್ಬಿ ದಿಸಿನಸಿ ತನ್ನಾ ತೆಚ್ಯಾ ವಾಂಗ್ಡಾ ಹೊತ್ತ್ಯಾ ಲೊಕಾನಿ ತೆಕಾ ಹಾತಿಕ್ ಧರುನ್ ಧಮಸ್ಕಾಕ್ ನ್ಹೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:8
10 ತಿಳಿವುಗಳ ಹೋಲಿಕೆ  

ಆ ಬೆಳಕಿನ ಮಹಿಮೆಯಿಂದ ನನಗೆ ಕಣ್ಣುಕಾಣದೆ ಇದ್ದುದರಿಂದ ನನ್ನ ಜೊತೆಯಲ್ಲಿದ್ದವರು, ನನ್ನನ್ನು ಕೈಹಿಡಿದುಕೊಂಡು ದಮಸ್ಕದೊಳಕ್ಕೆ ಕರೆದುಕೊಂಡುಹೋದರು.


ಕೂಡಲೇ ಅವನ ಕಣ್ಣುಗಳಿಂದ ಪರೆಗಳಂತೆ ಏನೋ ಬಿದ್ದು ಅವನ ಕಣ್ಣು ಕಾಣಿಸಿದವು. ಅವನು ಎದ್ದು ದೀಕ್ಷಾಸ್ನಾನ ಮಾಡಿಸಿಕೊಂಡನು.


ಇಗೋ, ಕರ್ತನು ನಿನಗೆ ವಿರುದ್ಧವಾಗಿ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ನೋಡದೆ ಇರುವಿ” ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಕಣ್ಣು ಮೊಬ್ಬಾಗಿ ಕತ್ತಲೆ ಕವಿಯಿತು; ಅವನು ಕೈಹಿಡಿದು ಆಧಾರ ಕೊಡುವವರನ್ನು ಹುಡುಕುತ್ತಾ ತಿರುಗಾಡಿದನು.


ಇದಲ್ಲದೆ ಅವರು ಮನೆಯ ಹೊರಗಿದ್ದ ಮನುಷ್ಯರಿಗೆ ಚಿಕ್ಕವರಿಗೂ ದೊಡ್ಡವರಿಗೂ ಕೂಡ ಕಣ್ಣು ಮೊಬ್ಬಾಗುವಂತೆ ಮಾಡಿದ್ದರಿಂದ ಅವರು ಬಾಗಿಲು ಯಾವುದೆಂದು ತಿಳಿಯದೆ ಬೇಸರಗೊಂಡರು.


ಅದಕ್ಕೆ ಯೆಹೋವನು ಅವನಿಗೆ, “ಮನುಷ್ಯರಿಗೆ ಬಾಯಿಕೊಟ್ಟವನು ಯಾರು? ಒಬ್ಬನನ್ನು ಮೂಕನಾಗಿ, ಕಿವುಡನಾಗಿ, ದೃಷ್ಠಿಯುಳ್ಳವನಾಗಿ ಹಾಗೂ ಕುರುಡನಾಗಿ ಉಂಟುಮಾಡಿದವನಾರು? ಯೆಹೋವನಾದ ನಾನೇ ಅಲ್ಲವೇ?


ಅವನು ರಾತ್ರಿ ವೇಳೆಯಲ್ಲಿ ತನ್ನ ದಂಡನ್ನು ಎರಡು ಭಾಗಮಾಡಿ ತನ್ನ ಭಟರೊಡನೆ ಅವರ ಮೇಲೆ ಬಿದ್ದು, ಹೊಡೆದು, ದಮಸ್ಕ ಪಟ್ಟಣದ ಉತ್ತರಕಡೆಯಲ್ಲಿರುವ ಹೋಬಾ ಊರಿನ ತನಕ ಅವರನ್ನು ಹಿಂದಟ್ಟಿದ್ದನು.


ಅವನು ಮೂರು ದಿನಗಳು ಕಣ್ಣುಕಾಣದೆ, ಏನೂ ತಿನ್ನಲಿಲ್ಲ ಮತ್ತು ಏನೂ ಕುಡಿಯದೇ ಇದ್ದನು.


ದಮಸ್ಕದಲ್ಲಿ ಅರಸನಾದ ಅರೇತನ ಅಧೀನದಲ್ಲಿದ್ದ ಅಧಿಪತಿಯು ನನ್ನನ್ನು ಹಿಡಿಯಬೇಕೆಂದು ದಮಸ್ಕದವರ ಪಟ್ಟಣವನ್ನು ಕಾಯುತ್ತಿರಲು


ಯೆರೂಸಲೇಮಿಗೆ ನನಗಿಂತ ಮೊದಲು ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರುಗಿ ದಮಸ್ಕಕ್ಕೆ ಬಂದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು