ಅರಣ್ಯಕಾಂಡ 1:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸೀನಾಯಿ ಅರಣ್ಯದಲ್ಲಿ ದೇವದರ್ಶನದ ಗುಡಾರದೊಳಗೆ ಯೆಹೋವನು ಮೋಶೆಯ ಸಂಗಡ ಹೀಗೆ ಮಾತನಾಡಿದನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇಸ್ರಯೇಲರು ಈಜಿಪ್ಟ್ ದೇಶವನ್ನು ಬಿಟ್ಟು ಹೊರಟ ಎರಡನೆಯ ವರ್ಷದ ಎರಡನೆಯ ತಿಂಗಳ ಮೊದಲನೆಯ ದಿನ ಸರ್ವೇಶ್ವರ ಸ್ವಾಮಿ ಸೀನಾಯಿ ಮರುಭೂಮಿಯಲ್ಲಿ ದೇವದರ್ಶನದ ಗುಡಾರದಿಂದ ಮೋಶೆಗೆ ಹೀಗೆಂದು ಆಜ್ಞಾಪಿಸಿದರು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಇಸ್ರಾಯೇಲ್ಯರು ಐಗುಪ್ತದೇಶದಿಂದ ಹೊರಟ ಎರಡನೆಯ ವರುಷದ ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಸೀನಾಯಿ ಅರಣ್ಯದಲ್ಲಿ ದೇವದರ್ಶನದ ಗುಡಾರದೊಳಗೆ ಮೋಶೆಗೆ ಹೀಗೆ ಆಜ್ಞಾಪಿಸಿದನು. - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನು ದೇವದರ್ಶನಗುಡಾರದೊಳಗೆ ಮೋಶೆಯೊಡನೆ ಮಾತಾಡಿದನು. ಆಗ ದೇವದರ್ಶನಗುಡಾರವು ಸೀನಾಯಿ ಮರುಭೂಮಿಯಲ್ಲಿತ್ತು. ಇಸ್ರೇಲರು ಈಜಿಪ್ಟನ್ನು ಬಿಟ್ಟ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಇದು ನಡೆಯಿತು. ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟ ನಂತರದ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಯೆಹೋವ ದೇವರು ಸೀನಾಯಿ ಮರುಭೂಮಿಯಲ್ಲಿ ದೇವದರ್ಶನದ ಗುಡಾರದೊಳಗೆ ಮೋಶೆಯ ಸಂಗಡ ಹೀಗೆ ಮಾತನಾಡಿದರು: ಅಧ್ಯಾಯವನ್ನು ನೋಡಿ |