Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 1:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರು ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸಮಸ್ತ ಪುರುಷರನ್ನೂ ಸಮೂಹದವರೆಲ್ಲರನ್ನೂ ಕೂಡಿಸಿದರು. ಇಪ್ಪತ್ತು ವರ್ಷ ಹಾಗೂ ಮೇಲ್ಪಟ್ಟ ವಯಸ್ಸುಳ್ಳವರೆಲ್ಲರೂ ಒಬ್ಬೊಬ್ಬರಾಗಿ ಗೋತ್ರ ಕುಟುಂಬಗಳ ಪ್ರಕಾರ ತಮ್ಮತಮ್ಮ ವಂಶಾವಳಿಯನ್ನು ಬರೆಯಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಎರಡನೆಯ ತಿಂಗಳಿನ ಮೊದಲನೆ ದಿನ ಜನಸಮೂಹವನ್ನು ಕೂಡಿಸಿದರು. ಇಪ್ಪತ್ತು ವರ್ಷ ಮೇಲ್ಪಟ್ಟ ವಯಸ್ಸಿನವರೆಲ್ಲರೂ ಒಬ್ಬೊಬ್ಬರಾಗಿ ಗೋತ್ರ, ಕುಟುಂಬಗಳ ಪ್ರಕಾರ ತಮ್ಮ ತಮ್ಮ ವಂಶಾವಳಿಯನ್ನು ತಿಳಿಸಿ ಹೆಸರುಗಳನ್ನು ನೊಂದಾಯಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸಮೂಹದವರೆಲ್ಲರನ್ನೂ ಕೂಡಿಸಿದರು. ಆಗ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರೂ ಒಬ್ಬೊಬ್ಬರಾಗಿ ಗೋತ್ರ ಕುಟುಂಬಗಳ ಪ್ರಕಾರ ತಮ್ಮ ತಮ್ಮ ವಂಶಾವಳಿಯನ್ನು ತಿಳಿಸಿ ಹೆಸರುಗಳನ್ನು ಬರಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಎರಡನೆ ತಿಂಗಳಿನ ಮೊದಲನೆ ದಿನದಲ್ಲಿ ಎಲ್ಲಾ ಜನರು ಒಟ್ಟಾಗಿ ಸೇರಿಬಂದರು. ಜನರು ತಮ್ಮತಮ್ಮ ಕುಟುಂಬಗಳಿಗನುಸಾರವಾಗಿ, ಗೋತ್ರಗಳಿಗನುಸಾರವಾಗಿ ಪಟ್ಟಿ ಮಾಡಿಸಿದರು. ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸಮಸ್ತ ಪುರುಷರನ್ನೂ ಸಮೂಹದವರೆಲ್ಲರನ್ನೂ ಕೂಡಿಸಿದರು. ಜನರು ತಮ್ಮ ಗೋತ್ರ ಮತ್ತು ಕುಟುಂಬಗಳ ಅನುಸಾರವಾಗಿ ತಮ್ಮ ವಂಶಾವಳಿಯನ್ನು ನೊಂದಾಯಿಸಿದರು. ಹಾಗೂ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಹೆಚ್ಚಾದ ವಯಸ್ಸಿನವರ ಹೆಸರುಗಳನ್ನು ಒಬ್ಬೊಬ್ಬರಾಗಿ ಪಟ್ಟಿಮಾಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 1:18
7 ತಿಳಿವುಗಳ ಹೋಲಿಕೆ  

ಉಳಿದ ತೇಲ್ಮೆಲಹ, ತೇಲ್ಹರ್ಷ, ಕೆರೂಬ್, ಅದ್ದಾನ್ ಮತ್ತು ಇಮ್ಮೇರ್ ಎಂಬ ಊರುಗಳಿಂದ ಬಂದವರಾಗಿ ತಮ್ಮ ಗೋತ್ರವಂಶಾವಳಿಗಳನ್ನು ತೋರಿಸಿದರು.


ಅವನಿಗೆ ತಂದೆಯಿಲ್ಲ, ತಾಯಿಯಿಲ್ಲ, ವಂಶಾವಳಿಯೂ ಇಲ್ಲ. ಹುಟ್ಟು, ಸಾವು ಇಲ್ಲ. ಆತನು ದೇವರ ಕುಮಾರನಿಗೆ ಹೋಲಿಕೆಯಾಗಿದು, ನಿರಂತರವಾಗಿ ಯಾಜಕನಾಗಿರುವನು.


ತೇಲ್ಮೆಲಹ, ತೇಲ್ಹರ್ಷ, ಕೆರೂಬ್, ಆದ್ದೋನ್ ಮತ್ತು ಇಮ್ಮೇರ್, ಎಂಬ ಊರುಗಳಿಂದ ಬಂದವರಾಗಿ ತಮ್ಮ ಗೋತ್ರಗಳ ವಂಶಾವಳಿಗಳನ್ನು ತೋರಿಸಿ ತಾವು ಇಸ್ರಾಯೇಲರೆಂಬುದನ್ನು ಸ್ಥಾಪಿಸಲಾರದವರಾದ,


ಆದರೆ ಮೆಲ್ಕಿಜೆದೇಕನು ಲೇವಿಯ ವಂಶಾವಳಿಗೆ ಸೇರಿದವನಲ್ಲ, ಆದರೂ ಅಬ್ರಹಾಮನಿಂದ ದಶಮ ಭಾಗಗಳನ್ನು ತೆಗೆದುಕೊಂಡದ್ದಲ್ಲದೆ ದೇವರಿಂದ ವಾಗ್ದಾನಗಳನ್ನು ಹೊಂದಿದವನನ್ನು ಆಶೀರ್ವದಿಸಿದನು.


ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸೀನಾಯಿ ಅರಣ್ಯದಲ್ಲಿ ದೇವದರ್ಶನದ ಗುಡಾರದೊಳಗೆ ಯೆಹೋವನು ಮೋಶೆಯ ಸಂಗಡ ಹೀಗೆ ಮಾತನಾಡಿದನು,


ಹೆಸರಿನಿಂದ ಸೂಚಿತರಾದ ಈ ಪುರುಷರನ್ನು ಮೋಶೆಯು ಮತ್ತು ಆರೋನನು ಆರಿಸಿಕೊಂಡರು.


ಇಸ್ರಾಯೇಲ್ ಗೋತ್ರಗಳ ಕುಟುಂಬಗಳ ಮುಖ್ಯಸ್ಥರು: ಇಸ್ರಾಯೇಲನ ಚೊಚ್ಚಲು ಮಗನಾದ ರೂಬೇನನ ಮಕ್ಕಳು: ಹನೋಕ್, ಫಲ್ಲು, ಹೆಚ್ರೋನ್, ಕರ್ಮೀ. ಇವರೇ ರೂಬೇನಿನಿಂದ ಉಂಟಾದ ಗೋತ್ರಗಳ ಮೂಲ ಪುರುಷರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು