Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 1:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಇಸ್ರಾಯೇಲರ ಸರ್ವಸಮೂಹದ ಗಂಡಸರನ್ನು ಗೋತ್ರದ ಕುಟುಂಬಗಳ ಪ್ರಕಾರ ಹೆಸರು ಹಿಡಿದು ಒಬ್ಬೊಬ್ಬರನ್ನಾಗಿ ಲೆಕ್ಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನೀನು ಮತ್ತು ಆರೋನ ಇಸ್ರಯೇಲ್ ಜನಸಮೂಹದ ಗಂಡಸರನ್ನು ಗೋತ್ರ ಹಾಗೂ ಕುಟುಂಬಗಳಿಗೆ ಅನುಗುಣವಾಗಿ ಹೆಸರು ಹಿಡಿದು ಒಬ್ಬೊಬ್ಬರನ್ನಾಗಿ ಎಣಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಸ್ರಾಯೇಲ್ಯರ ಸರ್ವಸಮೂಹದ ಗಂಡಸರನ್ನು ಗೋತ್ರ ಕುಟುಂಬಗಳ ಪ್ರಕಾರ ಹೆಸರುಹಿಡಿದು ಒಬ್ಬೊಬ್ಬರನ್ನಾಗಿ ಲೆಕ್ಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಇಸ್ರೇಲ್ ಜನರೆಲ್ಲರನ್ನು ಅವರವರ ಗೋತ್ರ ಕುಟುಂಬಗಳ ಪ್ರಕಾರ ಲೆಕ್ಕಿಸಿ ಪ್ರತಿಯೊಬ್ಬನ ಹೆಸರನ್ನೂ ಪಟ್ಟಿಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಇಸ್ರಾಯೇಲ್ ಜನಸಮೂಹದ ಗಂಡಸರನ್ನು ಗೋತ್ರ ಹಾಗೂ ಕುಟುಂಬಗಳಿಗೆ ಅನುಗುಣವಾಗಿ ಹೆಸರು ಹಿಡಿದು ಒಬ್ಬೊಬ್ಬರನ್ನಾಗಿ ಎಣಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 1:2
16 ತಿಳಿವುಗಳ ಹೋಲಿಕೆ  

ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ ಒಂದೊಂದು “ಬೆಕಾ” ಅಂದರೆ ಅರ್ಧ ಶೆಕೆಲ್ ಆಗಿತ್ತು. ಜನಗಣತಿಯಲ್ಲಿ ಎಣಿಸಲ್ಪಟ್ಟವರಲ್ಲಿ ಇಪ್ಪತ್ತು ವರ್ಷದವರು ಹಾಗೂ ಅದಕ್ಕೂ ಮೇಲ್ಪಟ್ಟ ವಯಸ್ಸುಳ್ಳವರ ಲೆಕ್ಕ ಆರು ಲಕ್ಷದ ಮೂರು ಸಾವಿರದ ಐನೂರ ಐವತ್ತು ಮಂದಿಯಾಗಿತ್ತು.


“ನೀನು ಇಸ್ರಾಯೇಲ್ಯರ ಜನಗಣತಿ ಮಾಡಿಸಿ ಅವರನ್ನು ಲೆಕ್ಕಿಸುವಾಗ ಅವರಿಗೆ ಬಾಧೆಯುಂಟಾಗಿ ವ್ಯಾಧಿ ಸಂಭವಿಸದಂತೆ ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣಕ್ಕಾಗಿ ವಿಮೋಚನ ಕ್ರಯವನ್ನು ಯೆಹೋವನಿಗೆ ಕೊಡಬೇಕು.


ಅವರು ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸಮಸ್ತ ಪುರುಷರನ್ನೂ ಸಮೂಹದವರೆಲ್ಲರನ್ನೂ ಕೂಡಿಸಿದರು. ಇಪ್ಪತ್ತು ವರ್ಷ ಹಾಗೂ ಮೇಲ್ಪಟ್ಟ ವಯಸ್ಸುಳ್ಳವರೆಲ್ಲರೂ ಒಬ್ಬೊಬ್ಬರಾಗಿ ಗೋತ್ರ ಕುಟುಂಬಗಳ ಪ್ರಕಾರ ತಮ್ಮತಮ್ಮ ವಂಶಾವಳಿಯನ್ನು ಬರೆಯಿಸಿಕೊಂಡರು.


ಸಿಮೆಯೋನನ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷಕ್ಕೆ ಮೇಲ್ಪಟ್ಟ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.


ಇಸ್ರಾಯೇಲರು ರಾಮ್ಸೇಸ್ ಪಟ್ಟಣದಿಂದ ಹೊರಟು ಸುಕ್ಕೋತಿಗೆ ಬಂದರು. ಹೆಂಗಸರು ಮಕ್ಕಳು ಅಲ್ಲದೆ ಗಂಡಸರು ಮಾತ್ರ ಸುಮಾರು ಆರುಲಕ್ಷ ಮಂದಿ ಇದ್ದರು.


ಸಮೂಹದ ಜನಗಣತಿಯಲ್ಲಿ ದಾಖಲಿಸಿದ ಜನರಿಂದ ದೇವರ ಸೇವೆಗೆಂದು ಸಂಗ್ರಹಿಸಿದ ಬೆಳ್ಳಿಯ ತೂಕವು ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ ನೂರು ತಲಾಂತು ಹಾಗು ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲ್.


ಹೀಗೆ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಮೋಶೆ ಸೀನಾಯಿ ಅರಣ್ಯದಲ್ಲಿ ಅವರನ್ನು ಲೆಕ್ಕಮಾಡಿ ಮೊಟ್ಟಮೊದಲು ಜನಗಣತಿ ಪ್ರಾರಂಭಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು