ಅರಣ್ಯಕಾಂಡ 1:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇಸ್ರಾಯೇಲರಲ್ಲಿ ಸೈನಿಕರಾಗಿ ಹೊರಡತಕ್ಕವರನ್ನು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರನ್ನು ಸೈನ್ಯಸೈನ್ಯವಾಗಿ ನೀನೂ ಆರೋನನೂ ಲೆಕ್ಕಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇಸ್ರಯೇಲರಲ್ಲಿ ಸೈನಿಕ ಸೇವೆ ಸಲ್ಲಿಸತಕ್ಕವರನ್ನು, ಅಂದರೆ ಇಪ್ಪತ್ತು ವರ್ಷ ಮೇಲ್ಪಟ್ಟ ವಯಸ್ಸುಳ್ಳ ಎಲ್ಲರನ್ನು ಸೈನ್ಯ ಸೈನ್ಯವಾಗಿ ಪಟ್ಟಿಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇಸ್ರಾಯೇಲ್ಯರಲ್ಲಿ ಸೈನಿಕರಾಗಿ ಹೊರಡತಕ್ಕವರನ್ನು ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರನ್ನು ಸೈನ್ಯಸೈನ್ಯವಾಗಿ ನೀನೂ ಆರೋನನೂ ಲೆಕ್ಕಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನೀನೂ ಆರೋನನೂ ಇಸ್ರೇಲರಲ್ಲಿ ಎಲ್ಲಾ ಪುರುಷರನ್ನು ಲೆಕ್ಕಿಸಬೇಕು. ಇಸ್ರೇಲ್ ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಸುಳ್ಳ ಪುರುಷರನ್ನು ಲೆಕ್ಕಿಸು. ಅವರನ್ನು ಅವರವರ ವಿಭಾಗಗಳಿಗೆ ಅನುಸಾರವಾಗಿ ಪಟ್ಟಿಮಾಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಇಸ್ರಾಯೇಲರಲ್ಲಿ ಸೈನಿಕ ಸೇವೆ ಸಲ್ಲಿಸತಕ್ಕವರನ್ನು ಅಂದರೆ, ಇಪ್ಪತ್ತು ವರ್ಷಕ್ಕಿಂತಲೂ ಹೆಚ್ಚಾದ ವಯಸ್ಸುಳ್ಳ ಎಲ್ಲರನ್ನು ಸೈನ್ಯಸೈನ್ಯವಾಗಿ ನೀನು ಮತ್ತು ಆರೋನನು ಪಟ್ಟಿಮಾಡಬೇಕು. ಅಧ್ಯಾಯವನ್ನು ನೋಡಿ |