Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 1:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಎಫ್ರಾಯೀಮ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 40,500 ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಎಫ್ರಾಯೀಮ್ ಕುಲದಲ್ಲಿ ಲೆಕ್ಕಿಸಲ್ಪಟ್ಟ ಪುರುಷರ ಒಟ್ಟು ಸಂಖ್ಯೆ 40,500.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಎಫ್ರಾಯೀಮನ ಗೋತ್ರದಲ್ಲಿ ಎಣಿಕೆಯಾದವರು 40,500 ಜನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 1:33
7 ತಿಳಿವುಗಳ ಹೋಲಿಕೆ  

ಎಫ್ರಾಯೀಮ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 32,500 ಮಂದಿ. ಇದೇ ಯೋಸೇಫ್ ವಂಶದ ಕುಟುಂಬಗಳ ವಿವರ.


ಯೋಸೇಫನ ಜ್ಯೇಷ್ಠಸಂತತಿಯವರು ಗೂಳಿಯೋಪಾದಿಯಲ್ಲಿ ಗಾಂಭೀರ್ಯವುಳ್ಳವರು. ಅವರ ಕೊಂಬುಗಳು ಕಾಡುಕೋಣದ ಕೊಂಬುಗಳಷ್ಟು (ಬಲವುಳ್ಳವು); ಅವುಗಳಿಂದ ಭೂಮಂಡಲದ ಜನಾಂಗಗಳನ್ನೆಲ್ಲಾ ಇರಿದು ಓಡಿಸುವರು. ಎಫ್ರಾಯೀಮ್ ಕುಲದ ಕೊಟ್ಯಾಂತರ ಜನರೂ ಮನಸ್ಸೆ ಕುಲದ ಲಕ್ಷಾಂತರ ಮಂದಿಯೂ ಇಂಥವರೇ” ಎಂದು ಹೇಳಿದನು.


ಅವನ ಸೈನಿಕರ ಸಂಖ್ಯೆ 40,500 ಮಂದಿ.


ಐಗುಪ್ತ ದೇಶಕ್ಕೆ ನಿನ್ನ ಬಳಿಗೆ ಬರುವುದಕ್ಕಿಂತ ಮೊದಲು ಇಲ್ಲಿ ಹುಟ್ಟಿದ ನಿನ್ನಿಬ್ಬರು ಮಕ್ಕಳು ನನಗೆ ಮಕ್ಕಳಾಗಿರಬೇಕು. ರೂಬೇನ್ ಸಿಮೆಯೋನರು ನನ್ನ ಮಕ್ಕಳಾಗಿರುವಂತೆಯೆ ಎಫ್ರಾಯೀಮ್ ಮನಸ್ಸೆಯರೂ ನನ್ನ ಮಕ್ಕಳಾಗಿರಲಿ.


ಯೋಸೇಫನಿಂದ ಹುಟ್ಟಿದವರೊಳಗೆ ಎಫ್ರಾಯೀಮ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.


ಮನಸ್ಸೆ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.


ಆದರೆ ಅವನ ತಂದೆ ಒಪ್ಪದೆ, “ಮಗನೇ ನಾನು ಬಲ್ಲೆ. ನನಗೆ ಗೊತ್ತು. ಇವನಿಂದಲೂ ಜನಾಂಗವುಂಟಾಗುವುದು. ಇವನು ಬಲಿಷ್ಠನಾಗುವನು. ಆದರೂ ಇವನಿಗಿಂತಲೂ ಇವನ ತಮ್ಮನು ಬಲಿಷ್ಠನಾಗುವನು. ತಮ್ಮನ ಸಂತತಿಯಲ್ಲಿಯೇ ಜನರು ಹೇರಳವಾಗಿ ಹುಟ್ಟುವರು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು