ಅರಣ್ಯಕಾಂಡ 10:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆದುದರಿಂದ ಇಸ್ರಾಯೇಲರು ಸೀನಾಯಿ ಅರಣ್ಯವನ್ನು ಬಿಟ್ಟು ಮುಂದೆ ಮುಂದೆ ಪ್ರಯಾಣಮಾಡಿದರು. ತರುವಾಯ ಆ ಮೇಘವು ಪಾರಾನ್ ಅರಣ್ಯದಲ್ಲಿ ನಿಂತಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆದ್ದರಿಂದ ಇಸ್ರಯೇಲರು ಸೀನಾಯಿ ಮರುಭೂಮಿಯನ್ನು ಬಿಟ್ಟು ಮುಂದೆ ಮುಂದೆ ಪ್ರಯಾಣ ಮಾಡಿದರು. ಬಳಿಕ ಆ ಮೇಘ ಪಾರಾನ್ ಮರುಭೂಮಿಯಲ್ಲಿ ನಿಂತಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇಸ್ರಾಯೇಲ್ಯರು ಸೀನಾಯಿ ಅರಣ್ಯವನ್ನು ಬಿಟ್ಟು ಮುಂದೆ ಮುಂದೆ ಪ್ರಯಾಣಮಾಡಿದರು. ತರುವಾಯ ಆ ಮೇಘವು ಪಾರಾನ್ ಅರಣ್ಯದಲ್ಲಿ ನಿಂತಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆದ್ದರಿಂದ, ಇಸ್ರೇಲರು ತಮ್ಮ ಪ್ರಯಾಣವನ್ನು ಪ್ರಾರಂಭಿಸಿದರು. ಅವರು ಸೀನಾಯಿ ಮರುಭೂಮಿಯನ್ನು ಬಿಟ್ಟು ಮೇಘವು ಪಾರಾನ್ ಮರುಭೂಮಿಯಲ್ಲಿ ನಿಲ್ಲುವವರೆಗೆ ಪ್ರಯಾಣ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ಇಸ್ರಾಯೇಲರು ತಮ್ಮ ಕ್ರಮಗಳ ಪ್ರಕಾರ ಸೀನಾಯಿ ಮರುಭೂಮಿಯಿಂದ ಪ್ರಯಾಣಮಾಡಿದರು. ಮೇಘವು ಪಾರಾನ್ ಎಂಬ ಮರುಭೂಮಿಯಲ್ಲಿ ಇಳಿಯಿತು. ಅಧ್ಯಾಯವನ್ನು ನೋಡಿ |
ಈಗ ಹಿಂದಿರುಗಿ ಅಮೋರಿಯರು ಇರುವ ಬೆಟ್ಟದ ಸೀಮೆಗೂ ಮತ್ತು ಅದಕ್ಕೆ ಸೇರಿದ ಪ್ರದೇಶದ ಕಡೆಗೆ ಪ್ರಯಾಣಮಾಡಿರಿ. ಅವು ಯಾವುವೆಂದರೆ: ತಗ್ಗಾದ ಪ್ರದೇಶ, ಬೆಟ್ಟದ ಮೇಲಿನ ಪ್ರದೇಶ, ಇಳಕಲಿನ ಪ್ರದೇಶ, ದಕ್ಷಿಣಸೀಮೆ ಮತ್ತು ಸಮುದ್ರತೀರ ಎಂಬ ನಾಡುಗಳನ್ನು ಒಳಗೊಂಡಿರುವ ಕಾನಾನ್ಯರ ದೇಶ, ಲೆಬನೋನ್ ಪರ್ವತ ಮತ್ತು ಯೂಫ್ರೆಟಿಸ್ ಎಂಬ ಮಹಾನದಿಯ ವರೆಗೆ ವಿಸ್ತರಿಸಿಕೊಂಡಿರುವ ಪ್ರದೇಶಗಳಿಗೆ ಹೋಗಿರಿ.