Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 10:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಬೆಳ್ಳಿಯ ತಗಡಿನಿಂದ ಎರಡು ತುತ್ತೂರಿಗಳನ್ನು ಮಾಡಿಸಬೇಕು. ಜನಸಮೂಹದವರನ್ನು ಕೂಡಿಸುವುದಕ್ಕೂ ಮತ್ತು ದಂಡುಗಳನ್ನು ಹೊರಡಿಸುವುದಕ್ಕೂ ಅವುಗಳನ್ನು ಉಪಯೋಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನೀನು ಬೆಳ್ಳಿಯ ತಗಡಿನಿಂದ ಎರಡು ಕಹಳೆಗಳನ್ನು ಮಾಡಿಸು. ಜನರನ್ನು ಸಭೆಸೇರಿಸುವುದಕ್ಕೂ ಹಾಗೂ ದಂಡನ್ನು ಹೊರಡಿಸುವುದಕ್ಕೂ ಅವುಗಳನ್ನು ಉಪಯೋಗಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ಬೆಳ್ಳಿಯ ತಗಡಿನಿಂದ ಎರಡು ತುತೂರಿಗಳನ್ನು ಮಾಡಿಸಬೇಕು. ಜನಸಮೂಹದವರನ್ನು ಕೂಡಕರಿಸುವದಕ್ಕೂ ದಂಡುಗಳನ್ನು ಹೊರಡಿಸುವದಕ್ಕೂ ಅವುಗಳನ್ನು ಉಪಯೋಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನೀನು ಬೆಳ್ಳಿಯ ತಗಡುಗಳಿಂದ ಎರಡು ತುತ್ತೂರಿಗಳನ್ನು ಮಾಡಿಸಬೇಕು. ಜನಸಮೂಹದವರನ್ನು ಒಟ್ಟಾಗಿ ಕರೆಸುವುದಕ್ಕೂ ಅವರು ಯಾವಾಗ ಹೊರಡಬೇಕೆಂದು ಹೇಳುವುದಕ್ಕೂ ಇವುಗಳನ್ನು ಉಪಯೋಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನಕ್ಷೆಯ ಕೆಲಸದಿಂದ ಹೊಡೆದು ಮಾಡಿದ ಬೆಳ್ಳಿಯ ತಗಡಿನ ಎರಡು ತುತೂರಿಗಳನ್ನು ನೀನು ಮಾಡಿಸಬೇಕು. ಸಭೆಯನ್ನು ಕರೆಯುವುದಕ್ಕಾಗಿಯೂ, ಪಾಳೆಯಗಳ ಪ್ರಯಾಣಕ್ಕಾಗಿಯೂ ನೀನು ಅವುಗಳನ್ನು ಉಪಯೋಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 10:2
14 ತಿಳಿವುಗಳ ಹೋಲಿಕೆ  

ಉಪವಾಸ ಪ್ರಾರ್ಥನೆಯ ದಿನವನ್ನು ಏರ್ಪಡಿಸಿರಿ, ಪವಿತ್ರ ಸಭೆಯನ್ನು ಸೇರಿಸಿರಿ. ಹಿರಿಯರನ್ನೂ ಮತ್ತು ಸಮಸ್ತ ದೇಶದ ನಿವಾಸಿಗಳನ್ನೂ ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಬರಮಾಡಿ, ಯೆಹೋವನಿಗೆ ಮೊರೆಯಿಡಿರಿ.


ವ್ಯರ್ಥವಾದ ಕಾಣಿಕೆಗಳನ್ನು ಇನ್ನು ತರಬೇಡಿ; ಧೂಪವು ನನಗೆ ಅಸಹ್ಯ; ಅಮಾವಾಸ್ಯೆ, ಹುಣ್ಣಿಮೆಹಬ್ಬ, ಸಬ್ಬತ್ ದಿನ, ಕೂಟ ಪ್ರಕಟಣೆ ಇವು ಬೇಡ; ಅಧರ್ಮದಿಂದ ಕೂಡಿದ ಸಂಘವನ್ನು ನಾನು ಸಹಿಸಲಾರೆನು.


ಅಮಾವಾಸ್ಯೆಯಲ್ಲಿಯೂ, ನಮ್ಮ ಉತ್ಸವದಿನವಾಗಿರುವ ಹುಣ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ.


ನಿಮ್ಮೆಲ್ಲರಿಗೂ ಕರ್ತನು ಒಬ್ಬನೇ, ನಂಬಿಕೆಯು ಒಂದೇ, ದೀಕ್ಷಾಸ್ನಾನ ಒಂದೇ,


“ತುತ್ತೂರಿಯನ್ನು ಹಿಡಿದು ಊದು. ನನ್ನ ಜನರು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಧರ್ಮವಿಧಿಗಳಿಗೆ ದ್ರೋಹಮಾಡಿದ್ದರಿಂದ, ಶತ್ರುವು ಹದ್ದಿನ ಹಾಗೆ ಯೆಹೋವನಾದ ನನ್ನ ನಿವಾಸದ ಮೇಲೆ ಬರುತ್ತಾನೆ.


ಉತ್ಸಾಹಧ್ವನಿಯನ್ನು ತಿಳಿದಿರುವ ಜನರು ಧನ್ಯರು; ಯೆಹೋವನೇ, ಅವರು ನಿನ್ನ ಮುಖಪ್ರಕಾಶದಲ್ಲಿ ಸಂಚರಿಸುತ್ತಾರೆ.


ಹಾಗೂ ಲೇವಿಯ ಗಾಯಕರಾದ ಆಸಾಫ್, ಹೇಮಾನ್, ಯೆದುತೂನರೂ ಇವರ ಮಕ್ಕಳೂ, ಸಹೋದರರೂ ನಾರುಮಡಿಗಳನ್ನು ಧರಿಸಿಕೊಂಡು, ತಾಳಗಳನ್ನೂ, ವೀಣೆಗಳನ್ನೂ, ಕಿನ್ನರಿಗಳನ್ನು ನುಡಿಸುತ್ತಾ ಯಜ್ಞವೇದಿಯ ಪೂರ್ವದಿಕ್ಕಿನಲ್ಲಿ ನಿಂತುಕೊಂಡರು. ಅವರ ಸಂಗಡ ನೂರ ಇಪ್ಪತ್ತು ಮಂದಿ ಯಾಜಕರೂ ತುತ್ತೂರಿಗಳನ್ನು ಊದುತ್ತಾ ಇದ್ದರು.


ಯೆಹೋವನ ಆಲಯದೊಳಗೆ ತಂದ ಹಣದಿಂದ ಬೆಳ್ಳಿಯ ಬಟ್ಟಲುಗಳನ್ನು, ಕತ್ತರಿಗಳನ್ನು, ಬೋಗುಣಿಗಳನ್ನು, ತುತ್ತೂರಿಗಳನ್ನೂ, ಬೆಳ್ಳಿ ಬಂಗಾರದ ಪಾತ್ರೆ ಇವುಗಳನ್ನು ಮಾಡುವುದಕ್ಕಾಗಿ ಉಪಯೋಗಿಸುತ್ತಿರಲಿಲ್ಲ.


ಜನಸಮೂಹದವರು ಕೂಡಿಬರಬೇಕಾದಾಗ ಸಾಧಾರಣವಾಗಿ ಊದಿಸಬೇಕೇ ಹೊರತು ಆರ್ಭಟವಾಗಿ ಊದಿಸಬಾರದು.


“ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿಸಬೇಕು. ಅದರ ಕೆಳಭಾಗವನ್ನು ಕಂಬವನ್ನೂ ನಕಾಸಿ ಕೆಲಸದಿಂದ ಮಾಡಿಸಬೇಕು. ಆ ದೀಪಸ್ತಂಭದ ಬುಡದಿಂದಲೇ ಅಖಂಡವಾಗಿ ಪುಷ್ಪದ ಗೊಂಚಲುಗಳು, ಅರಳಿದ ಪುಷ್ಪಗಳು ಮೊಗ್ಗುಗಳು ಅಲಂಕಾರವಾಗಿ ಕೆತ್ತಿರಬೇಕು.


ಕೃಪಾಸನದ ಎರಡು ಕೊನೆಗಳಲ್ಲಿ ಎರಡು ಬಂಗಾರದ ಕೆರೂಬಿಗಳನ್ನು ಕೆತ್ತನೆ ಕೆಲಸದಿಂದ ಮಾಡಿಸಬೇಕು.


ಯೆಹೋವನು ಮೋಶೆಯ ಸಂಗಡ ಮಾತನಾಡಿ, ಆಜ್ಞಾಪಿಸಿದ್ದೇನೆಂದರೆ,


ಯೆಹೂದದಲ್ಲಿ ಸಾರಿರಿ, ಯೆರೂಸಲೇಮಿನೊಳಗೆ ಪ್ರಕಟಿಸುತ್ತಾ, “ದೇಶದಲ್ಲೆಲ್ಲಾ ಕೊಂಬೂದಿರಿ, ಕೂಡಿಬನ್ನಿರಿ ಕೋಟೆಕೊತ್ತಲಗಳ ಊರುಗಳನ್ನು ಸೇರೋಣ ಎಂದು ಕೂಗಿರಿ.


ಚೀಯೋನಿನಲ್ಲಿ ಕೊಂಬೂದಿರಿ, ನನ್ನ ಪರಿಶುದ್ಧ ಪರ್ವತದಲ್ಲಿ ಎಚ್ಚರಿಕೆಯ ದಿನ ಮೊಳಗಲಿ. ಸಮಸ್ತ ದೇಶದ ನಿವಾಸಿಗಳು ನಡುಗಲಿ, ಏಕೆಂದರೆ ಯೆಹೋವನ ದಿನವು ಬರುತ್ತದೆ; ಅದು ಸಮೀಪವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು