Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 10:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಮೋಶೆಯು ತನ್ನ ಮಾವನಾಗಿದ್ದ ಮಿದ್ಯಾನ್ಯನಾದ ರೆಗೂವೇಲನ ಮಗನಾದ ಹೋಬಾಬನಿಗೆ, “ಯೆಹೋವನು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣಮಾಡುತ್ತಾ ಇದ್ದೇವೆ. ಇಸ್ರಾಯೇಲರಿಗೆ ಒಳಿತನ್ನು ಉಂಟುಮಾಡುತ್ತೇನೆಂದು ಯೆಹೋವನು ತಾನೇ ಹೇಳಿದ್ದಾನೆ. ಆದುದರಿಂದ ನೀನೂ ನಮ್ಮ ಜೊತೆಯಲ್ಲಿ ಬಾ; ನಮ್ಮಿಂದ ನಿನಗೂ ಒಳ್ಳೆಯದಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಮೋಶೆ ತನ್ನ ಮಾವನಾಗಿದ್ದ ಮಿದ್ಯಾನ್ಯನಾದ ರೆಗೂವೇಲನ ಮಗ ಹೋಬಾಬನಿಗೆ, “ಸರ್ವೇಶ್ವರ ನಮಗೆ ಕೊಡುವುದಾಗಿ ವಾಗ್ದಾನ ಮಾಡಿದ ನಾಡಿಗೆ ನಾವು ಪ್ರಯಾಣ ಮಾಡುತ್ತಿದ್ದೇವೆ. ಇಸ್ರಯೇಲರಿಗೆ ಒಳಿತನ್ನೇ ಮಾಡುವುದಾಗಿ ಸರ್ವೇಶ್ವರ ಸ್ವಾಮಿಯೇ ಹೇಳಿದ್ದಾರೆ. ಆದ್ದರಿಂದ ನೀನೂ ನಮ್ಮ ಸಂಗಡ ಬಾ; ನಮ್ಮಿಂದ ನಿನಗೂ ಒಳ್ಳೆಯದಾಗುವುದು,” ಎಂದು ಹೇಳಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಮೋಶೆ ತನ್ನ ಮಾವನಾಗಿದ್ದ ವಿುದ್ಯಾನ್ಯನಾದ ರೆಗೂವೇಲನ ಮಗನಾದ ಹೋಬಾಬನಿಗೆ - ಯೆಹೋವನು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣಮಾಡುತ್ತಾ ಇದ್ದೇವೆ. ಇಸ್ರಾಯೇಲ್ಯರಿಗೆ ಮೇಲನ್ನುಂಟುಮಾಡುತ್ತೇನೆಂದು ಯೆಹೋವನು ತಾನೇ ಹೇಳಿದ್ದಾನೆ. ಆದದರಿಂದ ನೀನು ನಮ್ಮ ಜೊತೆಯಲ್ಲಿ ಬಾ; ನವ್ಮಿುಂದ ನಿನಗೂ ಮೇಲುಂಟಾಗುವದೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಹೋಬಾಬನು ಮಿದ್ಯಾನ್ಯನಾದ ರೆಗೂವೇಲನ ಮಗನು. ರೆಗೂವೇಲನು ಮೋಶೆಯ ಮಾವ. ಮೋಶೆಯು ಹೋಬಾಬನಿಗೆ, “ದೇವರು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣ ಮಾಡುತ್ತಿದ್ದೇವೆ. ನಮ್ಮೊಂದಿಗೆ ಬಾ. ನೀನು ನಮ್ಮೊಂದಿಗೆ ಉದ್ದಾರವಾಗುವೆ; ಯಾಕೆಂದರೆ ಯೆಹೋವನು ಇಸ್ರೇಲರಿಗೆ ಒಳ್ಳೆಯವುಗಳನ್ನು ವಾಗ್ದಾನ ಮಾಡಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಮೋಶೆ ತನ್ನ ಮಾವನಾಗಿದ್ದ ಮಿದ್ಯಾನನಾದ ರೆಯೂವೇಲನ ಮಗ ಹೊಬಾಬನಿಗೆ, “ಯೆಹೋವ ದೇವರು ನಮಗೆ ಕೊಡುತ್ತೇನೆಂದು ಹೇಳಿದ ದೇಶಕ್ಕೆ ಪ್ರಯಾಣ ಮಾಡುತ್ತಿದ್ದೇವೆ. ನಮ್ಮ ಸಂಗಡ ನೀನೂ ಬಾ, ನಾವು ನಿನಗೆ ಒಳ್ಳೆಯದನ್ನು ಮಾಡುವೆವು. ಏಕೆಂದರೆ ಯೆಹೋವ ದೇವರು ಇಸ್ರಾಯೇಲರನ್ನು ಕುರಿತು ಒಳ್ಳೆಯವುಗಳನ್ನು ವಾಗ್ದಾನ ಮಾಡಿದ್ದಾರೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 10:29
31 ತಿಳಿವುಗಳ ಹೋಲಿಕೆ  

ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.


(ಕೇನ್ಯನಾದ) ಹೆಬೆರನು ಉಳಿದ ಕೇನ್ಯರಿಂದ ತನ್ನನ್ನು ಪ್ರತ್ಯೇಕಿಸಿಕೊಂಡನು. ಕೇನ್ಯರು ಮೋಶೆಯ ಮಾವನಾದ ಹೋಬಾಬನ ವಂಶದವರು. ಹೆಬೆರನು ಕೆದೆಷಿನ ಹತ್ತಿರ ಇರುವ ಚಾನನ್ನೀಮೆಂಬ ಊರಿನ ಏಲೋನ್ ವೃಕ್ಷದ ವರೆಗೆ ಬಂದು ಅಲ್ಲಿ ಗುಡಾರ ಹಾಕಿಕೊಂಡಿದ್ದನು.


ಮೋಶೆಯು ತನ್ನ ಮಾವನಾದ, ಮಿದ್ಯಾನ್ಯರ ಯಾಜಕನಾದ ಇತ್ರೋನನ ಮಂದೆಯನ್ನು ಮೇಯಿಸುತ್ತಿರಲಾಗಿ ಆ ಮಂದೆಯನ್ನು ಅಡವಿಯ ಮತ್ತೊಂದುಭಾಗಕ್ಕೆ ನಡಿಸಿಕೊಂಡು ಹೋಗುತ್ತಾ, “ಹೋರೇಬ್” ಎಂಬ ದೇವರ ಬೆಟ್ಟಕ್ಕೆ ಬಂದನು.


ಆ ನಂತರ ಆ ಹೆಣ್ಣುಮಕ್ಕಳು ತಮ್ಮ ತಂದೆಯಾದ ರೆಗೂವೇಲನ ಬಳಿಗೆ ಬಂದಾಗ ಅವನು ಅವರಿಗೆ, “ಏಕೆ ಈ ಹೊತ್ತು ಬೇಗ ಬಂದಿದ್ದಿರಲ್ಲ?” ಎಂದು ಕೇಳಿದನು.


‘ನಿನಗೆ ಖಂಡಿತವಾಗಿ ಒಳ್ಳೆಯದನ್ನು ಮಾಡಿ, ನಿನ್ನ ಸಂತತಿಯನ್ನು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿ ಅಭಿವೃದ್ಧಿ ಮಾಡುವೆನೆಂದು ನೀನು ನನಗೆ ಹೇಳಿದ್ದೀಯಲ್ಲಾ?’” ಎಂದನು.


ಆತ್ಮನು ಮತ್ತು ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ.


ದೇವರ ವಾಗ್ದಾನ ಮತ್ತು ಆಣೆ ಇವೆರಡೂ ನಿಶ್ಚಲವಾದ ಆಧಾರಗಳು ಏಕೆಂದರೆ ದೇವರು ಸುಳ್ಳಾಡುವವನಲ್ಲ. ಅದುದರಿಂದ ಆಶ್ರಯವನ್ನು ಹೊಂದಬೇಕೆಂದು ಓಡಿಬಂದು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಬಲವಾದ ಪ್ರೋತ್ಸಾಹ ಉಂಟಾಯಿತು.


ತಂದೆಯಾದ ದೇವರಿಂದ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದ ನಿನಗೆ ಕೃಪೆ, ಕರುಣೆ ಮತ್ತು ಶಾಂತಿ ದೊರಕಲಿ.


ಈ ದೇಶದಲ್ಲಿ ಅವನಿಗೆ ಕಾಲಿಡುವಷ್ಷ್ಟು ಭೂಮಿಯನ್ನು ಸ್ವತ್ತಾಗಿ ಕೊಡದೆ ಅವನಿಗೆ ಮಕ್ಕಳೇ ಇಲ್ಲದಿರುವಾಗ ನೀನಿರುವ ದೇಶವನ್ನು ನಿನಗೂ, ನಿನ್ನ ನಂತರ ಬರುವ ನಿನ್ನ ಸಂತತಿಗೂ ಸ್ವತ್ತಾಗಿ ಕೊಡುವೆನೆಂದು ಅವನಿಗೆ ವಾಗ್ದಾನಮಾಡಿದನು.


ಚೀಯೋನಿಗೆ ಅಭಿಮುಖರಾಗಿ ಮಾರ್ಗವನ್ನು ವಿಚಾರಿಸಿ, ಬನ್ನಿರಿ, ಯೆಹೋವನನ್ನು ಆಶ್ರಯಿಸಿ, ಎಂದಿಗೂ ಮರೆಯದ ಶಾಶ್ವತವಾದ ಒಡಂಬಡಿಕೆಯನ್ನು ಆತನೊಂದಿಗೆ ಮಾಡಿಕೊಳ್ಳೋಣ’ ಎಂದು ಹೇಳುವರು.


ಹೊರಟು ಬಂದ ಬಹು ಜನಾಂಗದವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು. ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವುದು.


ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ; ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು.


ಆದರೆ ಅವನು ಕೇನ್ಯರಿಗೆ, “ನೀವು ಅಮಾಲೇಕ್ಯರನ್ನು ಬಿಟ್ಟುಹೋಗಿರಿ; ಇಲ್ಲವಾದರೆ ನೀವೂ ಅವರೊಡನೆ ನಾಶವಾದೀರಿ. ಇಸ್ರಾಯೇಲರು ಐಗುಪ್ತದಿಂದ ಬರುತ್ತಿದ್ದಾಗ ನೀವು ಅವರಿಗೆ ದಯೆತೋರಿಸಿದಿರಲ್ಲಾ” ಎಂದು ಹೇಳಿಕಳುಹಿಸಿದನು. ಅದರಂತೆಯೇ ಅವರು ಅಮಾಲೇಕ್ಯರನ್ನು ಬಿಟ್ಟುಹೋದರು.


ಮೋಶೆಯ ಮಾವನಾದ ಕೇನ್ಯನ ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ್ಯರ ಜೊತೆಯಲ್ಲಿ ಅರಾದಿನ ದಕ್ಷಿಣದಲ್ಲಿರುವ ಯೆಹೂದ ಅಡವಿಗೆ ಬಂದು ಅಲ್ಲಿನ ಜನರ ಸಂಗಡ ವಾಸಮಾಡಿದರು.


ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?


ತರುವಾಯ ಮೋಶೆ ತನ್ನ ಮಾವನಿಗೆ ಅಪ್ಪಣೆ ಕೊಡಲಾಗಿ, ಅವನು ಸ್ವದೇಶಕ್ಕೆ ಹೊರಟುಹೋದನು.


ದೇವರು ಮೋಶೆಗೂ ತನ್ನ ಜನರಾದ ಇಸ್ರಾಯೇಲರಿಗೂ ಮಹೋಪಕಾರಗಳನ್ನು ಮಾಡಿದ್ದನ್ನೂ, ಯೆಹೋವನು ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಕರತಂದದ್ದನ್ನೂ, ಮಿದ್ಯಾನ್ಯರ ಆಚಾರ್ಯನೂ ಮೋಶೆಯ ಮಾವನೂ ಆಗಿದ್ದ ಇತ್ರೋವನು ಕೇಳಿದನು.


ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.


ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ.


ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.


ನಾನು ಅವರಿಗೆ ಕಾನಾನ್ ದೇಶವನ್ನು ಅಂದರೆ, ಅವರು ಪರದೇಶದವರಾಗಿ ವಾಸವಾಗಿದ್ದ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬಡಿಕೆಯನ್ನು ಮಾಡಿಕೊಂಡಿರುವೆನು.


ಇದಲ್ಲದೆ ಮೋಶೆಯ ಮಾವನಾದ ಇತ್ರೋವನು ದೇವರಿಗೆ ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸಿದನು. ಆರೋನನು, ಇಸ್ರಾಯೇಲರ ಹಿರಿಯರೆಲ್ಲರೂ ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನವನ್ನು ಮಾಡುವುದಕ್ಕೆ ಬಂದರು.


ಈ ರೀತಿಯಲ್ಲಿ ಇಸ್ರಾಯೇಲರು ಸೈನ್ಯಸೈನ್ಯವಾಗಿ ಹೊರಟು ಪ್ರಯಾಣಮಾಡಿದರು.


ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶುಭವುಂಟಾಗುವಂತೆಯೂ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸದಾಕಾಲ ಬಾಳುವಂತೆಯೂ, ನಾನು ನಿಮಗೆ ಈಗ ತಿಳಿಸಿದ ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು.


ನಿಮ್ಮ ಪೂರ್ವಿಕರಿಗೆ ಸ್ವತ್ತಾಗಿದ್ದ ದೇಶದಲ್ಲಿ ಸೇರಿಸಿ, ಅದು ನಿಮಗೂ ಸ್ವದೇಶವಾಗುವಂತೆ ಮಾಡಿ, ನಿಮಗೆ ಮೇಲನ್ನುಂಟುಮಾಡಿ ಪೂರ್ವಿಕರಿಗಿಂತಲೂ ಅಧಿಕವಾಗಿ ನಿಮ್ಮನ್ನು ಹೆಚ್ಚಿಸುವನು.


ಬನ್ನಿರಿ, ಯೆಹೋವನಿಗೆ ಉತ್ಸಾಹದಿಂದ ಹಾಡೋಣ; ನಮ್ಮ ರಕ್ಷಕನಾದ ಶರಣನಿಗೆ ಜಯಘೋಷ ಮಾಡೋಣ.


ಸಮಸ್ತಭೂನಿವಾಸಿಗಳೇ, ಯೆಹೋವನಿಗೆ ಉತ್ಸಾಹಧ್ವನಿಮಾಡಿರಿ.


ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವತ್ತಾಗಿ ಕೊಟ್ಟು ಎಂದೆಂದಿಗೂ ಅವರಿಗೆ ದೇವರಾಗಿರುವೆನು” ಎಂದನು.


ಮೋಶೆಯು ಆ ಮನುಷ್ಯನೊಂದಿಗೆ ವಾಸಮಾಡಲು ಬಯಸಿದನು. ಅವನು ತನ್ನ ಮಗಳಾದ ಚಿಪ್ಪೋರಳನ್ನು ಮೋಶೆಗೆ ಮದುವೆಮಾಡಿ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು