Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 10:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅದಕ್ಕೆ ಮೋಶೆಯು ಉತ್ತರವಾಗಿ, “ನಮ್ಮನ್ನು ಬಿಟ್ಟು ಹೋಗಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ಈ ಮರುಭೂಮಿಯಲ್ಲಿ ಡೇರೆಗಳನ್ನು ಹಾಕುವ ಸ್ಥಳಗಳು ನಿನಗೆ ಮಾತ್ರ ಗೊತ್ತಿದೆ. ಆದುದರಿಂದ ನೀನು ನಮಗೆ ಕಣ್ಣಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅದಕ್ಕೆ ಮೋಶೆ, “ನಮ್ಮನ್ನು ಬಿಟ್ಟುಹೋಗಬೇಡವೆಂದು ಬೇಡಿಕೊಳ್ಳುತ್ತೇನೆ. ಈ ಮರುಭೂಮಿಯಲ್ಲಿ ಡೇರೆಗಳನ್ನು ಹಾಕುವ ಸ್ಥಳಗಳು ನಿನಗೆ ಮಾತ್ರ ತಿಳಿದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆದರೆ ಮೋಶೆ ಅವನಿಗೆ - ನಮ್ಮನ್ನು ಬಿಟ್ಟು ಹೋಗಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ; ಈ ಅರಣ್ಯದಲ್ಲಿ ಡೇರೆಗಳನ್ನು ಹಾಕುವ ಸ್ಥಳಗಳು ನಿನಗೇ ಗೊತ್ತಿರುವದರಿಂದ ನೀನು ನಮಗೆ ಕಣ್ಣಿನಂತೆ ಇರಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆಗ ಮೋಶೆ, “ದಯಮಾಡಿ ನಮ್ಮನ್ನು ಬಿಟ್ಟು ಹೋಗಬೇಡ. ನಾವು ಮರುಭೂಮಿಯಲ್ಲಿ ಎಲ್ಲಿ ಪಾಳೆಯ ಮಾಡಿಕೊಳ್ಳಬಹುದೆಂಬುದು ನಿನಗೆ ಗೊತ್ತಿದೆ. ನೀನು ನಮ್ಮ ಮಾರ್ಗದರ್ಶಕನಾಗಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅದಕ್ಕೆ ಮೋಶೆ, “ನಮ್ಮನ್ನು ಬಿಡಬೇಡ. ಏಕೆಂದರೆ ನಾವು ಎಲ್ಲಿ ಇಳಿದುಕೊಳ್ಳಬೇಕೆಂಬುದು ನಿನಗೆ ಮಾತ್ರ ತಿಳಿದಿದೆ. ನೀನು ನಮಗೆ ಕಣ್ಣುಗಳಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 10:31
5 ತಿಳಿವುಗಳ ಹೋಲಿಕೆ  

ನಾನು ಕುರುಡನಿಗೆ ಕಣ್ಣಾಗಿಯೂ, ಕುಂಟನಿಗೆ ಕಾಲಾಗಿಯೂ ಇದ್ದೆನು.


ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ ನೀತಿನಿಯಮಗಳನ್ನು ನೆರವೇರಿಸಿರಿ.


ಯೆಹೋವನು, “ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು” ಎಂದು ಅನ್ನುತ್ತಾನಲ್ಲಾ.


ನೀನು ನಮ್ಮ ಸಂಗಡ ಬಂದರೆ ಯೆಹೋವನು ನಮಗೆ ಮಾಡುವ ಒಳ್ಳೆಯದನ್ನೆಲ್ಲಾ ನಾವು ನಿನಗೂ ಉಂಟಾಗುವಂತೆ ಮಾಡುವೆವು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು