Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 10:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮನ್ನು ಉಪದ್ರವಪಡಿಸುವ ಶತ್ರುಗಳನ್ನು ಎದುರಿಸುವುದಕ್ಕಾಗಿ ಯುದ್ಧಕ್ಕೆ ಹೊರಡುವಾಗ ಆ ತುತ್ತೂರಿಗಳನ್ನು ಆರ್ಭಟವಾಗಿ ಊದಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಜ್ಞಾಪಕಕ್ಕೆ ತಂದುಕೊಂಡು ಶತ್ರುಗಳ ಕೈಯಿಂದ ರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮನ್ನು ಪೀಡಿಸುವ ಶತ್ರುಗಳ ಮೇಲೆ ಯುದ್ಧಕ್ಕೆ ಹೊರಡುವಾಗ ಆ ಕಹಳೆಗಳನ್ನು ಆರ್ಭಟವಾಗಿ ಮೊಳಗಿಸಬೇಕು. ಆಗ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ನೆನಪಿಗೆ ತಂದುಕೊಂಡು ಶತ್ರುಗಳ ಕೈಯಿಂದ ನಿಮ್ಮನ್ನು ಬಿಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮನ್ನು ಉಪದ್ರವಪಡಿಸುವ ಶತ್ರುಗಳನ್ನು ಎದುರಿಸುವದಕ್ಕಾಗಿ ಯುದ್ಧಕ್ಕೆ ಹೊರಡುವಾಗ ಆ ತುತೂರಿಗಳನ್ನು ಆರ್ಭಟವಾಗಿ ಊದಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಜ್ಞಾಪಕಕ್ಕೆ ತಂದುಕೊಂಡು ಶತ್ರುಗಳ ಕೈಯಿಂದ ಬಿಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮ ಶತ್ರುಗಳನ್ನು ಎದುರಿಸುವುದಕ್ಕಾಗಿ ಯುದ್ಧಕ್ಕೆ ಹೊರಡುವಾಗ ತುತ್ತೂರಿಗಳನ್ನು ಆರ್ಭಟ ಸ್ವರದಲ್ಲಿ ಊದಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಜ್ಞಾಪಕಮಾಡಿಕೊಂಡು ಶತ್ರುಗಳಿಂದ ನಿಮ್ಮನ್ನು ರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಿಮ್ಮ ದೇಶದಲ್ಲಿ ನಿಮ್ಮನ್ನು ಉಪದ್ರವಪಡಿಸುವ ವೈರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡುವಾಗ ಜನರನ್ನು ಎಚ್ಚರಿಸುವಂತೆ ತುತೂರಿಗಳನ್ನು ಆರ್ಭಟವಾಗಿ ಊದಬೇಕು. ಆಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ನೆನಪು ಮಾಡಿಕೊಂಡು ಶತ್ರುಗಳಿಂದ ನಿಮ್ಮನ್ನು ಬಿಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 10:9
34 ತಿಳಿವುಗಳ ಹೋಲಿಕೆ  

ಆತನು ಅವರಿಗೆ, ಇಸ್ರಾಯೇಲ್‌ ದೇವರಾದ ಯೆಹೋವನು ಹೇಳುವುದನ್ನು ಕೇಳಿರಿ, “ನೀವು ಐಗುಪ್ತರ ಕೈಗೆ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಅವರ ದೇಶದಿಂದ ಬಿಡಿಸಿದವನೂ, ಬಾಧಿಸುತ್ತಿದ್ದ ಬೇರೆ ಎಲ್ಲಾ ಜನಾಂಗಗಳಿಂದ ನಿಮ್ಮನ್ನು ರಕ್ಷಿಸಿದವನೂ ನಾನೇ.


ವೈರಿಗಳ ಹಿಂಸೆಯನ್ನು ತಾಳಲಾರದ ಇಸ್ರಾಯೇಲ್ಯರ ಗೋಳಾಟವನ್ನು ಯೆಹೋವನು ಕೇಳಿ, ಕನಿಕರಪಟ್ಟು, ನ್ಯಾಯಸ್ಥಾಪಕರನ್ನು ಎಬ್ಬಿಸಿ ಜೀವಮಾನವೆಲ್ಲಾ ಅವರ ಸಂಗಡ ಇದ್ದನು. ಅವರ ಮೂಲಕವಾಗಿ ಇಸ್ರಾಯೇಲರನ್ನು ಶತ್ರುಗಳಿಂದ ಬಿಡಿಸಿದನು.


ತರುವಾಯ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಮೃಗಪಶುಗಳನ್ನೂ ನೆನಪಿಗೆ ತಂದುಕೊಂಡು ಭೂಲೋಕದ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.


ಶತ್ರುಗಳು ಅವರನ್ನು ಕುಗ್ಗಿಸಿದರು; ಅವರ ಕೈಕೆಳಗೆ ತಗ್ಗಿಹೋದರು.


ಯೆಹೋವನೇ, ನನ್ನನ್ನು ನೆನಪುಮಾಡಿಕೊಂಡು, ನಿನ್ನ ಪ್ರಜೆಗೆ ತೋರಿಸುವ ದಯೆಯನ್ನು ನನಗೂ ತೋರಿಸು. ನನ್ನನ್ನು ರಕ್ಷಿಸಲಿಕ್ಕೆ ಬಾ,


ಯೆಹೂದ್ಯರು ತಿರುಗಿಕೊಂಡು ತಮ್ಮ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾಗಿರುವುದನ್ನು ಕಂಡು ಯೆಹೋವನಿಗೆ ಮೊರೆಯಿಟ್ಟರು, ಯಾಜಕರು ತುತ್ತೂರಿಗಳನ್ನು ಊದಿದರು.


ಮೊದಲಾದ ಜನಾಂಗಗಳು ನಿಮ್ಮನ್ನು ಪೀಡಿಸಿದಾಗ ನೀವು ನನಗೆ ಮೊರೆಯಿಟ್ಟಿರಿ; ನಾನು ಅವರಿಂದ ನಿಮ್ಮನ್ನು ಬಿಡಿಸಿದರೂ


ಇವರು ಅಂದಿನಿಂದ ಹದಿನೆಂಟು ವರ್ಷಗಳ ವರೆಗೆ ಯೊರ್ದನಿನ ಆಚೆ ಗಿಲ್ಯಾದಿನಲ್ಲಿದ್ದ ಇಸ್ರಾಯೇಲರನ್ನು ಬಹಳವಾಗಿ ಪೀಡಿಸುತ್ತಾ, ಕುಗ್ಗಿಸುತ್ತಾ ಇದ್ದರು. ಈ ದೇಶವು ಮೊದಲು ಅಮೋರಿಯರದಾಗಿತ್ತು.


ಅವರು ದೀರ್ಘವಾಗಿ ಊದುವ ಕೊಂಬಿನ ಧ್ವನಿಯು ಕೇಳಿಸುತ್ತಲೇ ನೀವೆಲ್ಲರೂ ಗಟ್ಟಿಯಾಗಿ ಆರ್ಭಟಿಸಿರಿ. ಆಗ ಪಟ್ಟಣದ ಗೋಡೆಯು ತಾನೇ ಬಿದ್ದುಹೋಗುವುದು; ಪ್ರತಿಯೊಬ್ಬನೂ ನೆಟ್ಟಗೆ ಒಳಗೆ ನುಗ್ಗಬಹುದು” ಎಂದು ಹೇಳಿದನು.


ಮೋಶೆಯು ಇವರನ್ನು ಯುದ್ಧಕ್ಕೆ ಕಳುಹಿಸುವಾಗ ಕುಲವೊಂದಕ್ಕೆ ಸಾವಿರ ಭಟರನ್ನು, ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನೆಹಾಸನನ್ನು, ದೇವರ ಸಾಮಾನುಗಳನ್ನೂ, ಆಜ್ಞಾತುತೂರಿಗಳನ್ನೂ ತೆಗೆದುಕೊಂಡು ಅವರೊಡನೆ ಹೋಗಬೇಕೆಂದು ಆಜ್ಞಾಪಿಸಿದನು.


ತುತ್ತೂರಿಯು ಅಸ್ಪಷ್ಟ ಶಬ್ದವನ್ನು ಮೊಳಗಿಸಿದರೆ ಯಾರು ಯುದ್ಧಕ್ಕೆ ಸಿದ್ಧಮಾಡಿಕೊಳ್ಳುವರು?


ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವುದಿಲ್ಲವೋ? ಯೆಹೋವನಿಂದಲ್ಲದೆ ಪಟ್ಟಣಕ್ಕೆ ವಿಪತ್ತು ಸಂಭವಿಸುವುದೋ?


‘ತುತ್ತೂರಿಯ ಶಬ್ದವನ್ನು ಕೇಳಿರಿ’ ಎಂದು ನಾನು ಅವರ ಮೇಲೆ ಕಾವಲುಗಾರರನ್ನು ನೇಮಿಸಲು, ‘ನಾವು ಕೇಳುವುದಿಲ್ಲ’ ಎಂದು ಹೇಳಿದರು.


ನಾನು ಎಷ್ಟರವರೆಗೆ ಯುದ್ಧದ ಪತಾಕೆಗಳನ್ನು ನೋಡಲಿ, ಎಂದಿನ ತನಕ ತುತ್ತೂರಿಯ ಶಬ್ದವನ್ನು ಕೇಳಲಿ!


ಹಾ, ನನ್ನ ಕರುಳು! ಕರುಳು! ಯಾತನೆಪಡುತ್ತದೆ; ಆಹಾ, ನನ್ನ ಗುಂಡಿಗೆಯ ಪಕ್ಕಗಳು! ನನ್ನ ಹೃದಯವು ನನ್ನೊಳಗೆ ತಳಮಳಗೊಂಡಿದೆ! ನಾನು ಬಾಯಿಮುಚ್ಚಿಕೊಂಡಿರಲಾರೆ; ನನ್ನ ಆತ್ಮವೇ, ನೀನು ತುತ್ತೂರಿಯ ಶಬ್ದವನ್ನೂ, ಯುದ್ಧದ ಘೋಷವನ್ನೂ ಕೇಳುತ್ತಿಯಲ್ಲಾ.


ಯೆಹೂದದಲ್ಲಿ ಸಾರಿರಿ, ಯೆರೂಸಲೇಮಿನೊಳಗೆ ಪ್ರಕಟಿಸುತ್ತಾ, “ದೇಶದಲ್ಲೆಲ್ಲಾ ಕೊಂಬೂದಿರಿ, ಕೂಡಿಬನ್ನಿರಿ ಕೋಟೆಕೊತ್ತಲಗಳ ಊರುಗಳನ್ನು ಸೇರೋಣ ಎಂದು ಕೂಗಿರಿ.


ಸ್ವರವೆತ್ತಿ ಕೂಗು, ಸಂಕೋಚಪಡಬೇಡ, ಕೊಂಬಿನಂತೆ ಧ್ವನಿಗೈದು ನನ್ನ ಜನರಿಗೆ ಅವರ ದ್ರೋಹಗಳನ್ನು ತಿಳಿಯಪಡಿಸು. ಯಾಕೋಬ ವಂಶದವರಿಗೆ ಅವರ ಪಾಪಗಳನ್ನು ತಿಳಿಸು.


ಸಮಸ್ತ ಭೂನಿವಾಸಿಗಳೇ, ಲೋಕದ ಸಕಲ ಜನರೇ, ಬೆಟ್ಟಗಳಲ್ಲಿ ಧ್ವಜವನ್ನು ಹಾರಿಸುವಾಗ ನೋಡಿರಿ, ತುತ್ತೂರಿಯನ್ನೂದುವಾಗ ಕೇಳಿರಿ!


ನಾವು ದೀನಾವಸ್ಥೆಯಲ್ಲಿ ಇದ್ದಾಗ ನಮ್ಮನ್ನು ನೆನಪುಮಾಡಿಕೊಂಡನು, ಆತನ ಪ್ರೀತಿಯು ಶಾಶ್ವತವಾದದ್ದು.


ಆಗ ಗಿದ್ಯೋನನ ಮೇಲೆ ಯೆಹೋವನ ಆತ್ಮವು ಬಂದಿತ್ತು. ಅವನು ಕೊಂಬನ್ನು ಊದಲು ಅಬೀಯೆಜೆರನ ಗೋತ್ರದವರು ಬಂದು ಅವನನ್ನು ಹಿಂಬಾಲಿಸಿದರು.


ಐಗುಪ್ತ್ಯರಿಂದ ನಿಮ್ಮನ್ನು ಬಿಡಿಸಿದ್ದಲ್ಲದೆ ಬೇರೆ ಎಲ್ಲಾ ಬಾಧಕರಿಂದಲೂ ನಿಮ್ಮನ್ನು ಬಿಡಿಸಿ, ಅವರನ್ನು ನಿಮ್ಮೆದುರಿನಿಂದ ಓಡಿಸಿಬಿಟ್ಟು, ಅವರ ದೇಶವನ್ನು ನಿಮಗೆ ಕೊಟ್ಟೆನು.


ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಕೊಂಬನ್ನು ಊದಿದನು. ಆಗ ಇಸ್ರಾಯೇಲರು ಅವನ ಬಳಿಗೆ ಬಂದು, ಗಟ್ಟಾ ಇಳಿದು ಅವನ ಸಂಗಡ ಹೊರಟರು.


ಕೋಟೆಗಳನ್ನೂ, ದೊಡ್ಡ ಕೊತ್ತಲುಗಳನ್ನೂ ಹಿಡಿಯಲು, ಆರ್ಭಟಿಸಿ ಕೊಂಬೂದುವ ದಿನ.


ಗಿಬ್ಯದಲ್ಲಿ ತುತ್ತೂರಿಯನ್ನು ಊದಿರಿ, ರಾಮದಲ್ಲಿ ಕೊಂಬು ಕೂಗಲಿ, ಬೇತ್ ಅವೆನಿನಲ್ಲಿ ಆರ್ಭಟಿಸಿರಿ, ಬೆನ್ಯಾಮೀನೇ, ಹಿಂದೆ ನೋಡು!


ಅವರು ಕೊಂಬನ್ನೂದಿ ಎಲ್ಲವನ್ನೂ ಸಿದ್ಧ ಮಾಡಿದರೂ ಯಾರೂ ಯುದ್ಧಕ್ಕೆ ಹೊರಡುವುದಿಲ್ಲ; ನನ್ನ ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.


“ಬೆನ್ಯಾಮೀನ್ ಕುಲದವರೇ, ಯೆರೂಸಲೇಮಿನೊಳಗಿಂದ ವಲಸೆ ಹೋಗಿರಿ, ತೆಕೋವದಲ್ಲಿ ಕೊಂಬನ್ನೂದಿರಿ, ಬೇತ್ ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ, ಏಕೆಂದರೆ ಉತ್ತರ ದಿಕ್ಕಿನಿಂದ ಅತಿನಾಶಕರವಾದ ವಿಪತ್ತು ತಲೆದೋರುತ್ತಿದೆ.


“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನಿಮಗೆ ಸಂಪೂರ್ಣ ವಿರಾಮವಿರಬೇಕು. ಅದನ್ನು ತುತ್ತೂರಿಗಳ ಧ್ವನಿಯಿಂದ ಪ್ರಕಟಪಡಿಸಬೇಕು. ದೇವಾರಾಧನೆಗಾಗಿ ಸಭೆಸೇರಬೇಕು.


ಇಗೋ, ದೇವರು ನಾಯಕನಾಗಿ ನಮ್ಮೊಂದಿಗಿದ್ದಾನೆ; ನಿಮಗೆ ವಿರುದ್ಧವಾಗಿ ಅರ್ಭಟದಿಂದ ಊದತಕ್ಕ ತುತ್ತೂರಿಗಳನ್ನು ಹಿಡಿದಿರುವ ಯಾಜಕರೂ ನಮ್ಮೊಂದಿಗಿದ್ದಾರೆ. ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನೊಡನೆ ಯುದ್ಧ ಮಾಡಬೇಡಿರಿ, ನೀವು ಜಯಿಸಲಾರಿರಿ” ಎಂದು ಕೂಗಿ ಹೇಳಿದನು.


ಆದುದರಿಂದ ಇಗೋ, ಶತ್ರುಗಳು ನನ್ನ ಅಪ್ಪಣೆಯ ಮೇರೆಗೆ ರಬ್ಬಾ ಎಂಬ ಅಮ್ಮೋನ್ಯರ ಪಟ್ಟಣದ ಮೇಲೆ ಬಿದ್ದು, ಯುದ್ಧ ಘೋಷಿಸುವ ದಿನಗಳು ಬರುವವು; ಆ ಪಟ್ಟಣವು ಹಾಳುದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವವು; ಆಗ ಇಸ್ರಾಯೇಲು ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಯೆಹೋವನ ನುಡಿ.”


ನೀವು ನಿಮ್ಮ ಶತ್ರುಗಳಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟಾಗ ಅವರ ಹತ್ತಿರ ಕುದುರೆಗಳೂ, ರಥಗಳೂ ಮತ್ತು ನಿಮಗಿಂತ ಹೆಚ್ಚಾದ ಕಾಲ್ಬಲವೂ ಇರುವುದನ್ನು ಕಂಡರೆ ಹೆದರಬಾರದು. ಏಕೆಂದರೆ ಐಗುಪ್ತದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಯೆಹೋವನು ನಿಮ್ಮ ಕಡೆ ಇದ್ದಾನಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು