Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲ ಜನರು ತಮಗೆ ದುರಾವಸ್ಥೆ ಉಂಟಾಯಿತೆಂದು ಯೆಹೋವನಿಗೆ ಕೇಳಿಸುವಂತೆ ಗುಣುಗುಟ್ಟುವವರಾದರು. ಅದಕ್ಕೆ ಆತನು ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿಯನ್ನು ಉಂಟುಮಾಡಿದ್ದರಿಂದ ಪಾಳೆಯದ ಕಡೇ ಭಾಗದಲ್ಲಿದ್ದವರು ಸುಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲರು ತಮಗೆ ದುರವಸ್ಥೆ ಪ್ರಾಪ್ತವಾಯಿತೆಂದು ಸರ್ವೇಶ್ವರ ಸ್ವಾಮಿಗೆ ವಿರುದ್ಧ ಗುಣಗುಟ್ಟಿದರು. ಅದಕ್ಕೆ ಕೋಪಗೊಂಡ ಸರ್ವೇಶ್ವರ ಅವರ ಮಧ್ಯೆ ಬೆಂಕಿ ಬೀಳುವಂತೆ ಮಾಡಿದರು. ಇದರ ಪರಿಣಾಮವಾಗಿ ಪಾಳೆಯದ ಕಡೇಭಾಗದಲ್ಲಿದ್ದವರು ಸುಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲ್ಯರು ತಮಗೆ ದುರವಸ್ಥೆ ಪ್ರಾಪ್ತವಾಯಿತೆಂದು ಯೆಹೋವನಿಗೆ ಕೇಳಿಸುವಂತೆ ಗುಣುಗುಟ್ಟುವವರಾದರು. ಅದಕ್ಕೆ ಆತನು ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿಯನ್ನುಂಟುಮಾಡಿದ್ದರಿಂದ ಪಾಳೆಯದ ಕಡೇ ಭಾಗದಲ್ಲಿದ್ದವರು ಸುಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಜನರು ತಮಗೆ ತೊಂದರೆ ಉಂಟಾಯಿತೆಂದು ಗಟ್ಟಿಯಾಗಿ ಗುಣುಗುಟ್ಟಿದರು. ಅದನ್ನು ಯೆಹೋವನು ಕೇಳಿ ಕೋಪಗೊಂಡನು. ಯೆಹೋವನಿಂದ ಬಂದ ಬೆಂಕಿ ಅವರ ವಿರುದ್ಧವಾಗಿ ಹೊತ್ತಿಕೊಂಡದ್ದರಿಂದ ಪಾಳೆಯದ ಹೊರಭಾಗದಲ್ಲಿದ್ದವರು ಸುಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲ್ ಜನರು ತಮಗೆ ಕಷ್ಟವಾಯಿತೆಂದು ಗೊಣಗುಟ್ಟಿದಾಗ, ಯೆಹೋವ ದೇವರು ಅದನ್ನು ಕೇಳಿ ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿ ಬೀಳುವಂತೆ ಮಾಡಿದ್ದರಿಂದ ಅವರ ಪಾಳೆಯದ ಕಟ್ಟಕಡೆಯ ಭಾಗದಲ್ಲಿದ್ದವರು ಸುಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:1
40 ತಿಳಿವುಗಳ ಹೋಲಿಕೆ  

ಆಗ ಅವರು ದೇವರಿಗೂ ಮತ್ತು ಮೋಶೆಗೂ ವಿರುದ್ಧವಾಗಿ ಮಾತನಾಡಿ, “ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ಈ ರುಚಿ ಇಲ್ಲದ ಆಹಾರವನ್ನು ತಿಂದು ನಮಗೆ ಬೇಸರವಾಯಿತು” ಎಂದು ಹೇಳಿದರು.


ಆಗ ಎಲೀಯನು, “ನಾನು ದೇವರ ಮನುಷ್ಯನಾಗಿರುವುದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ, ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ” ಎಂದನು. ಕೂಡಲೆ ಆಕಾಶದಿಂದ ಬೆಂಕಿ ಬಿದ್ದು ಅವನನ್ನೂ, ಅವನ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.


ನಂತರ ಯೆಹೋವನ ಬಳಿಯಿಂದ ಬೆಂಕಿಹೊರಟು, ಧೂಪವನ್ನು ಅರ್ಪಿಸುತ್ತಿದ್ದ ಆ ಇನ್ನೂರೈವತ್ತು ಮಂದಿಯನ್ನು ದಹಿಸಬಿಟ್ಟಿತು.


ತಬೇರಾ, ಮಸ್ಸಾ, ಕಿಬ್ರೋತ್ ಹತಾವಾ ಎಂಬ ಸ್ಥಳಗಳಲ್ಲಿಯೂ ನೀವು ಯೆಹೋವನಿಗೆ ಕೋಪವನ್ನು ಹುಟ್ಟಿಸಿದ್ದಿರಿ.


ಆಗ ಯೆಹೋವನ ಸನ್ನಿಧಿಯಿಂದ ಬೆಂಕಿ ಹೊರಟು ಅವರನ್ನು ದಹಿಸಿಬಿಟ್ಟಿತು; ಅವರು ಯೆಹೋವನ ಸನ್ನಿಧಿಯಲ್ಲಿಯೇ ಸತ್ತರು.


ಮೋಶೆಯು ಆರೋನನಿಗೆ, “ನೀನು ಇಸ್ರಾಯೇಲರ ಸಮೂಹದ ಬಳಿಗೆ ಹೋಗಿ ಅವರಿಗೆ, ‘ಯೆಹೋವನು ನಿಮ್ಮ ಗುಣುಗುಟ್ಟುವಿಕೆಯನ್ನು ಕೇಳಿದ್ದಾನೆ. ಆದುದರಿಂದ ನೀವೆಲ್ಲರೂ ಆತನ ಸನ್ನಿಧಿಗೆ ಒಟ್ಟಾಗಿ ಸೇರಿ ಬರಬೇಕೆಂದು ಆಜ್ಞಾಪಿಸು’” ಎಂದು ಹೇಳಿದನು.


ಇವರು ಗೊಣಗುಟ್ಟುವವರೂ, ದೂರು ಹೇಳುವವರೂ, ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ, ಬಂಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಹೊಗಳಿಕೆಯ ಮಾತುಗಳನ್ನಾಡುವವರು ಆಗಿದ್ದಾರೆ.


ಇದಲ್ಲದೆ ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕ ದೂತನ ಕೈಯಿಂದ ನಾಶವಾದರು. ನೀವು ಗುಣಗುಟ್ಟಬೇಡಿರಿ.


ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ. ಹೌದು, ರಾಜನಿಗೆ ಅದು ಸಿದ್ಧವಾಗಿದೆ. ಅದನ್ನು ಆಳವಾಗಿಯೂ, ಅಗಲವಾಗಿಯೂ ಮಾಡಿದ್ದಾನೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಮರದಕೊರಡುಗಳೂ ಇವೆ; ಯೆಹೋವನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.


ಅವರ ಮಧ್ಯದಲ್ಲಿ ಬೆಂಕಿಯುಂಟಾಯಿತು; ಅಗ್ನಿಜ್ವಾಲೆಯು ದುಷ್ಟರನ್ನು ದಹಿಸಿಬಿಟ್ಟಿತು.


ಯೆಹೋವನು ಇದನ್ನು ಕೇಳಿ ರೋಷಗೊಂಡನು. ಅವರು ದೇವರಲ್ಲಿ ಭರವಸವಿಡದೆಯೂ, ಆತನ ರಕ್ಷಣೆಯನ್ನು ನಂಬದೆ ಹೋದುದರಿಂದಲೂ,


ಅವನು ಮಾತನಾಡುತ್ತಿರುವಾಗಲೇ ಮತ್ತೊಬ್ಬನು ಬಂದು, “ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿಗಳನ್ನೂ, ಆಳುಗಳನ್ನೂ ದಹಿಸಿ ನುಂಗಿಬಿಟ್ಟಿದೆ. ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದನು.


ದುಃಖಕಾಲವು ತೀರಿದ ನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರತರಿಸಿ, ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು. ಆಕೆಯು ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನು ಮಾಡಿದ ಈ ಕೃತ್ಯಗಳು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದೂ, ಅನೀತಿಯೂ ಆಗಿತ್ತು.


ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದ ವರೆಗೂ ವ್ಯಾಪಿಸಿ ಬೆಳೆಯ ಸಹಿತವಾಗಿ ಭೂಮಿಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವುದು.


ಮುಂಜಾನೆಯಲ್ಲಿ ಯೆಹೋವನ ಮಹಿಮೆಯು ನಿಮಗೆ ಕಾಣಿಸುವುದು, ಏಕೆಂದರೆ ನೀವು ಯೆಹೋವನಿಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ಆತನು ಕೇಳಿದ್ದಾನೆ. ನಮ್ಮ ಮೇಲೆ ನೀವು ಗುಣುಗುಟ್ಟುವುದೇನು? ನಾವು ಎಷ್ಟು ಮಾತ್ರದವರು?” ಎಂದು ಹೇಳಿದರು.


“ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಆ ಭ್ರಷ್ಟರು ನಡುಕಕ್ಕೆ ಒಳಗಾಗಿ, ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗುವರು” ಎಂದುಕೊಳ್ಳುತ್ತಾರೆ.


ಅವರು ಯೆಹೋವನ ಬೆಟ್ಟವನ್ನು ಬಿಟ್ಟು ಮೂರು ದಿನದ ಪ್ರಯಾಣದಷ್ಟು ದೂರ ಹೋದರು. ಇಳಿದುಕೊಳ್ಳಲು ಸೂಕ್ತವಾದ ಸ್ಥಳವನ್ನು ನೋಡುವುದಕ್ಕಾಗಿ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಮೂರು ದಿನಗಳು ಅವರ ಮುಂದಾಗಿ ಹೋಗುತ್ತಿತ್ತು.


ಈ ನಡತೆ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿದ್ದುದರಿಂದ ಆತನು ಅವನನ್ನೂ ಸಾಯಿಸಿದನು.


ಇಗೋ, ನಿಮ್ಮ ಹೊಲದಲ್ಲಿನ ಪೈರುಗಳನ್ನು ಕೊಯ್ದದವರ ಕೂಲಿಯನ್ನು ಕೊಡದೆ ವಂಚಿಸಿದಿರಿ. ಆ ಕೂಲಿಯ ಕೂಗು ಹಾಗು ಪೈರು ಕೊಯ್ದದವರ ಕೂಗು ಸೇನಾಧೀಶ್ವರನಾದ ಕರ್ತನ ಕಿವಿಗಳನ್ನು ಮುಟ್ಟಿವೆ.


ಏಕೆಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.


ಆತನ ಮುಂದೆ ಬೆಟ್ಟಗಳು ಅದರುತ್ತವೆ, ಗುಡ್ಡಗಳು ಕರಗುತ್ತವೆ; ಆತನ ದರ್ಶನಕ್ಕೆ ಭೂಮಿಯು ಕಂಪಿಸುತ್ತದೆ, ಹೌದು, ಲೋಕವೂ ಲೋಕನಿವಾಸಿಗಳೆಲ್ಲರೂ ತಲ್ಲಣಿಸುತ್ತವೆ.


ಮನುಷ್ಯನಿಗೆ ಜೀವ ವರವಿರಲು ತನ್ನ ಪಾಪದ ಶಿಕ್ಷೆಗಾಗಿ ಗುಣುಗುಟ್ಟುವುದೇಕೆ?


ಅವರು ದೇವರಲ್ಲಿ ಸ್ವಲ್ಪವೂ ಭಯಭಕ್ತಿಯಿಲ್ಲದವರಾಗಿ, ನೀವು ದಣಿದು ಮತ್ತು ಬಳಲಿದಾಗ ನಿಮ್ಮವರಲ್ಲಿ ಹಿಂದೆಬಿದ್ದ ಬಲಹೀನರನ್ನು ಸಂಹಾರ ಮಾಡಿದರು.


ಇದಲ್ಲದೆ ಇಸ್ರಾಯೇಲರಿಗೆ ಹೀಗೆ ಹೇಳು, “ನಾಳೆಗೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಾಳೆ ನಿಮಗೆ ಮಾಂಸವು ದೊರೆಯುವುದು. ನೀವು ಯೆಹೋವನಿಗೆ ಕೇಳಿಸುವಂತೆ, ‘ನಮಗೆ ಮಾಂಸವನ್ನು ಕೊಡುವವರೇ ಇಲ್ಲ; ಐಗುಪ್ತ ದೇಶದಲ್ಲಿ ಎಷ್ಟೋ ಸುಖವಾಗಿದ್ದೇವಲ್ಲಾ’ ಎಂದು ಅಳುತ್ತಾ ಹೇಳಿದ್ದರಿಂದ ಯೆಹೋವನೇ ನಿಮಗೆ ಮಾಂಸವನ್ನು ತಿನ್ನಲಿಕ್ಕೆ ಕೊಡುವನು.


ಇಸ್ರಾಯೇಲರೆಲ್ಲರೂ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಗುಣುಗುಟ್ಟಿ, “ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ ದೇಶದಲ್ಲಿಯೇ ಸತ್ತಿದ್ದರೆ ಎಷ್ಟೋ ಒಳ್ಳೆಯದಾಗಿತ್ತು


ಈ ಮನುಷ್ಯರೆಲ್ಲರು ಐಗುಪ್ತ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ, ನಾನು ನಡೆಸಿರುವ ಮಹತ್ಕಾರ್ಯಗಳನ್ನೂ, ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ, ಪದೇ ಪದೇ ನನ್ನನ್ನು ಪರೀಕ್ಷಿಸಿದ್ದರಿಂದ


“ನನಗೆ ವಿರುದ್ಧವಾಗಿ ಗುಣುಗುಟ್ಟುವ ಈ ದುಷ್ಟ ಸಮೂಹದವರನ್ನು ನಾನು ಎಷ್ಟು ದಿನ ಸಹಿಸಿಕೊಳ್ಳಲಿ? ಇಸ್ರಾಯೇಲರು ನನಗೆ ವಿರುದ್ಧವಾಗಿ ಗುಣುಗುಟ್ಟುವ ಮಾತುಗಳು ನನಗೆ ಕೇಳಿಸಿದವು.


ನೀನು ಅವರಿಗೆ ಹೀಗೆ ಹೇಳಬೇಕು, ‘ಯೆಹೋವನು ಹೇಳುವುದೇನೆಂದರೆ, ನನ್ನ ಜೀವದಾಣೆ, ನೀವು ನನಗೆ ಕೇಳಿಸುವಂತೆ ಅಂದುಕೊಂಡ ಪ್ರಕಾರವೇ ನಾನು ಮಾಡುತ್ತೇನೆ; ನಿಮ್ಮ ಶವಗಳು ಈ ಅರಣ್ಯದಲ್ಲಿಯೇ ಬೀಳುವವು.


ನೀನು ಮತ್ತು ನಿನ್ನ ಸಮೂಹದವರೆಲ್ಲರು ಯೆಹೋವನಿಗೆ ವಿರುದ್ಧವಾಗಿ ಕೂಡಿಕೊಂಡಿರಿ, ನನಗೆ ವಿಧೇಯನಾಗಿ ನಡೆಯುವ ಆರೋನನ ವಿರುದ್ಧವಾಗಿ ನೀವು ಗುಣಗುಟ್ಟುವುದೇಕೆ?” ಎಂದು ಕೇಳಿದನು.


ನಾನು ಯಾರನ್ನು ಆಯ್ದುಕೊಳ್ಳುತ್ತೇನೋ ಅವನ ಕೋಲು ಚಿಗುರುವುದು. ಇಸ್ರಾಯೇಲರು ನಿಮ್ಮಿಬ್ಬರ ವಿರುದ್ಧವಾಗಿ ಗುಣುಗುಟ್ಟುವುದನ್ನು ನಾನು ನಿಲ್ಲಿಸಿ ಬಿಡುವೆನು’” ಎಂದನು.


ಅವರ ಯೌವನಸ್ಥರು ಅಗ್ನಿಗೆ ಆಹುತಿಯಾದರು; ಅವರ ಕನ್ಯೆಯರು ವಿವಾಹವಾಗಲಿಲ್ಲ.


ಇಸ್ರಾಯೇಲರ ಪರಂಜ್ಯೋತಿಯು ದಹಿಸುವ ಅಗ್ನಿಯಾಗುವುದು. ಅವರ ಪರಿಶುದ್ಧನು ಜ್ವಾಲೆಯಂತಿರುವನು. ಅದು ಒಂದೇ ದಿನದಲ್ಲಿ ಅಶ್ಶೂರದ ಮುಳ್ಳುಗಿಳ್ಳನ್ನು ಸುಟ್ಟು ನುಂಗಿಬಿಡುವುದು.


ನಾನು ಐಗುಪ್ತದ ಅರಣ್ಯದಲ್ಲಿ ನಿಮ್ಮ ಪೂರ್ವಿಕರ ಸಂಗಡ ವಾದಿಸಿದಂತೆ, ನಿಮ್ಮ ಸಂಗಡಲೂ ವಾದಿಸುವೆನು” ಇದು ಕರ್ತನಾದ ಯೆಹೋವನ ನುಡಿ.


ರೋಗಗಳು ಆತನಿಂದ ದೂರ ಓಡಿ ಹೋಗಿವೆ, ವ್ಯಾಧಿಯು ಆತನ ಹಿಂದೆ ಅಡಗಿಕೊಂಡಿದೆ.


ಅವರು, “ಯೆಹೋವನು ಮೋಶೆಯ ಮೂಲಕವಾಗಿ ಮಾತ್ರವೇ ಮಾತನಾಡುತ್ತಾನೋ? ನಮ್ಮ ಮೂಲಕ ಆತನು ಮಾತನಾಡುವುದಿಲ್ಲವೇ?” ಎಂದು ಹೇಳಿಕೊಂಡರು. ಅವರು ಆಡಿದ ಮಾತು ಯೆಹೋವನಿಗೆ ಕೇಳಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು