Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನು ಅಲ್ಲಿಗೆ ಇಳಿದು ಬಂದು ನಿನ್ನ ಸಂಗಡ ಮಾತನಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿರುವ ಆತ್ಮದಲ್ಲಿ ಸ್ವಲ್ಪವನ್ನು ಅವರಿಗೂ ಪಾಲುಕೊಡುವೆನು. ಆಗ ನೀನೊಬ್ಬನೇ ಈ ಜನರ ಹೊಣೆಯನ್ನು ವಹಿಸಬೇಕಾಗಿರುವುದಿಲ್ಲ; ನಿನ್ನ ಜೊತೆಯಲ್ಲಿ ಇವರೂ ಜವಾಬ್ದಾರಿ ವಹಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಾನು ಅಲ್ಲಿಗೆ ಇಳಿದುಬಂದು ನಿನ್ನೊಡನೆ ಮಾತಾಡುವೆನು. ನಿನಗೆ ನಾನು ಅನುಗ್ರಹಿಸಿರುವ ಆತ್ಮಶಕ್ತಿಯಲ್ಲಿ ಕಿಂಚಿತ್ತನ್ನು ಅವರಿಗೂ ಹಂಚಿಕೊಡುವೆನು. ಆಗ ನೀನೊಬ್ಬನೇ ಈ ಜನರ ಜವಾಬ್ದಾರಿಯನ್ನು ವಹಿಸಬೇಕಾಗುವುದಿಲ್ಲ; ನಿನ್ನ ಸಂಗಡ ಇವರೂ ವಹಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾನು ಅಲ್ಲಿಗೆ ಇಳಿದುಬಂದು ನಿನ್ನ ಸಂಗಡ ಮಾತಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿರುವ ಆತ್ಮೀಯ ವರಗಳಲ್ಲಿ ಕೆಲವನ್ನು ಅವರಿಗೂ ಪಾಲುಕೊಡುವೆನು. ಆಗ ನೀನೊಬ್ಬನೇ ಈ ಜನರ ಭಾರವನ್ನು ವಹಿಸಬೇಕಾಗಿರುವದಿಲ್ಲ; ನಿನ್ನ ಜೊತೆಯಲ್ಲಿ ಇವರೂ ವಹಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಾನು ಅಲ್ಲಿಗೆ ಇಳಿದುಬಂದು ನಿನ್ನ ಸಂಗಡ ಮಾತಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿದ ಆತ್ಮವನ್ನೇ ಅವರ ಮೇಲೆ ಸುರಿಸುವೆನು. ಆಗ ಸ್ವತಃ ನೀನೇ ಈ ಜನರ ಭಾರವನ್ನು ವಹಿಸಬೇಕಾಗಿರುವುದಿಲ್ಲ. ಈ ಎಪ್ಪತ್ತು ಮಂದಿ ಹಿರಿಯರು ಆ ಭಾರವನ್ನು ಹೊರಲು ನಿನಗೆ ಸಹಾಯ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ನಾನು ಇಳಿದುಬಂದು, ಅಲ್ಲಿ ನಿನ್ನ ಸಂಗಡ ಮಾತನಾಡುವೆನು. ನಿನಗೆ ನಾನು ಅನುಗ್ರಹಿಸಿರುವ ಆತ್ಮಶಕ್ತಿಯಲ್ಲಿ ಸ್ವಲ್ಪವನ್ನು ಅವರಿಗೂ ಕೊಡುವೆನು. ಆಗ ನೀನು ಅದನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಜನರ ಭಾರವನ್ನು ಹೊರುವರು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:17
32 ತಿಳಿವುಗಳ ಹೋಲಿಕೆ  

ಆಗ ಯೆಹೋವನ ಆತ್ಮವು ನಿನ್ನ ಮೇಲೆಯೂ ಬರುವುದರಿಂದ ನೀನೂ ಅವರೊಂದಿಗೆ ಪ್ರವಾದಿಸುವಿ. ನೀನು ಮಾರ್ಪಟ್ಟ ಮನುಷ್ಯನಾಗುವಿ.


ಯೆಹೋವನು ಆ ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಮಾತನಾಡಿದನು. ಮೋಶೆಯ ಮೇಲಿರುವ ಆತ್ಮದಲ್ಲಿ ಸ್ವಲ್ಪವನ್ನು ಆ ಎಪ್ಪತ್ತು ಮಂದಿ ಹಿರಿಯರಿಗೂ ಪಾಲುಕೊಟ್ಟನು. ಆ ಆತ್ಮವು ಅವರಿಗೆ ದೊರಕಿದಾಗ ಅವರು ಪರವಶರಾಗಿ ಆ ಸಂದರ್ಭದಲ್ಲಿ ಮಾತ್ರ ಪ್ರವಾದಿಸಿದರು. ಆ ಮೇಲೆ ಅವರು ಎಂದಿಗೂ ಪ್ರವಾದಿಸಲೇ ಇಲ್ಲ.


ನಾವು ಇಹಲೋಕದ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವ ವರಗಳನ್ನು ತಿಳಿದುಕೊಳ್ಳುವುದಕ್ಕಾಗಿ ದೇವರಿಂದ ಬಂದ ಆತ್ಮವನ್ನೇ ಹೊಂದಿದವರಾಗಿದ್ದೇವೆ.


ಅವರು ಆಚೆ ದಡಕ್ಕೆ ಸೇರಿದ ಮೇಲೆ ಎಲೀಯನು ಎಲೀಷನನ್ನು, “ನಿನ್ನನ್ನು ಬಿಟ್ಟು ಹೋಗುವ ಮೊದಲು, ನಾನು ನಿನಗೋಸ್ಕರ ಏನು ಮಾಡಬೇಕೆನ್ನುತ್ತೀ ಹೇಳು” ಎಂದು ಕೇಳಿದನು. ಅದಕ್ಕೆ ಎಲೀಷನು, “ನಿನಗಿರುವ ಆತ್ಮದಲ್ಲಿ ನನಗೆ ಎರಡರಷ್ಟು ಪಾಲನ್ನು ಅನುಗ್ರಹಿಸು” ಎಂದು ಬೇಡಿಕೊಂಡನು.


ತರುವಾಯ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು. ನಿಮ್ಮ ಪುತ್ರಪುತ್ರಿಯರು ಪ್ರವಾದಿಸುವರು. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು. ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು.


ದೂರದಲ್ಲಿ ನಿಂತಿದ್ದ ಯೆರಿಕೋವಿನ ಪ್ರವಾದಿ ಮಂಡಳಿಯವರು ಇದನ್ನು ಕಂಡು, “ಎಲೀಯನಿಗಿದ್ದ ಆತ್ಮವು ಎಲೀಷನ ಮೇಲೆ ಬಂದಿದೆ” ಎಂದು ತಿಳಿದುಕೊಂಡು ಅವನನ್ನು ಎದುರುಗೊಂಡು, ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು.


ಆದಾಗ್ಯೂ, ನೀವೂ ದೇವರ ಆತ್ಮನ ಸ್ವಭಾವದ ಮೇಲೆ ಆತುಕೊಂಡು ಜೀವಿಸುವವರೇ ಹೊರತು ದೇಹಸ್ವಭಾವದವರಲ್ಲಾ. ನಿಮ್ಮಲ್ಲಿ ದೇವರ ಆತ್ಮನು ವಾಸವಾಗಿರುವುದಾದರೆ ನೀವು ಶರೀರ ಭಾವಾಧೀನರಲ್ಲ, ದೇವರಾತ್ಮನಿಗೆ ಅಧೀನರಾಗಿದ್ದೀರಿ. ಯಾರಲ್ಲಿ ಕ್ರಿಸ್ತನ ಆತ್ಮನು ಇಲ್ಲವೋ ಅವನು ಕ್ರಿಸ್ತನವನಲ್ಲ.


ಹೀಗಿರಲು ಈ ಮಾತನ್ನು ತಿರಸ್ಕರಿಸುವವನು ಮನುಷ್ಯರನ್ನು ಮಾತ್ರವಲ್ಲದೆ, ನಿಮಗೆ ಪವಿತ್ರಾತ್ಮವರವನ್ನು ದಯಪಾಲಿಸುವ ದೇವರನ್ನೂ ತಿರಸ್ಕರಿಸುವವನಾಗಿದ್ದಾನೆ.


ಅವರನ್ನು ಉಪದೇಶಿಸಲು ನೀನು ನಿನ್ನ ಒಳ್ಳೆಯ ಆತ್ಮನನ್ನು ಕೊಟ್ಟೆ. ಅವರ ಬಾಯಿಂದ ಮನ್ನವನ್ನು ಹಿಂದೆಗೆಯಲಿಲ್ಲ. ಬಾಯಾರಿದಾಗ ಅವರಿಗೆ ನೀರನ್ನು ಕೊಟ್ಟೆ.


ಅವರೇ ಯಾವಾಗಲೂ ಜನರಿಗೆ ನ್ಯಾಯವನ್ನು ತೀರಿಸಲಿ. ಅವರು ದೊಡ್ಡ ವ್ಯಾಜ್ಯಗಳನ್ನು ನಿನ್ನ ಮುಂದೆ ತರಲಿ. ಸಣ್ಣ ವ್ಯಾಜ್ಯಗಳನ್ನೆಲ್ಲಾ ಅವರೇ ತೀರಿಸಲಿ. ಅವರು ನಿನ್ನೊಂದಿಗೆ ಈ ಭಾರವನ್ನು ಹೊರುವುದರಿಂದ ನಿನಗೆ ಸುಲಭವಾಗುವುದು.


ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ, ಪ್ರಾಕೃತ ಮನುಷ್ಯರೂ, ದೇವರಾತ್ಮ ಇಲ್ಲದವರೂ ಆಗಿದ್ದಾರೆ.


ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ.


ಯೆಹೋವನು ಮೇಘಸ್ತಂಭದೊಳಗೆ ಇಳಿದು ಬಂದು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ನಿಂತು ಆರೋನನ್ನು ಮತ್ತು ಮಿರ್ಯಾಮಳನ್ನು ಹತ್ತಿರಕ್ಕೆ ಕರೆದನು. ಅವರು ಮುಂದೆ ಬಂದರು.


ಯೆಹೋವನು ಸೀನಾಯಿ ಬೆಟ್ಟದ ಶಿಖರಕ್ಕೆ ಇಳಿದು ಬಂದನು. ಆತನು ಬೆಟ್ಟದ ತುದಿಗೆ ಬಾ ಎಂದು ಮೋಶೆಯನ್ನು ಕರೆಯಲು ಅವನು ಬೆಟ್ಟವನ್ನೇರಿದನು.


ಮನುಷ್ಯರು ಕಟ್ಟುತ್ತಿದ್ದ ಆ ಪಟ್ಟಣವನ್ನೂ, ಗೋಪುರವನ್ನೂ ನೋಡುವುದಕ್ಕೆ ಯೆಹೋವನು ಇಳಿದು ಬಂದನು.


ಆದರೆ ಯೇಸು ತನ್ನನ್ನು ನಂಬುವವರು ಹೊಂದಲಿರುವ ಪವಿತ್ರಾತ್ಮವರವನ್ನು ಕುರಿತು ಹೀಗೆ ಹೇಳಿದನು. ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ ಕಾರಣ ಪವಿತ್ರಾತ್ಮವರವು ಇನ್ನೂ ಕೊಡಲ್ಪಟ್ಟಿರಲಿಲ್ಲ.


ಪರಲೋಕದಿಂದ ಇಳಿದು ಬಂದವನೇ, ಅಂದರೆ, ಮನುಷ್ಯಕುಮಾರನೇ ಹೊರತು ಮತ್ತಾರು ಪರಲೋಕಕ್ಕೆ ಏರಿ ಹೋದವರಿಲ್ಲ.


ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು, ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು.


ಅದಕ್ಕೆ ಯೆಹೋವನು ಮೋಶೆಗೆ, “ನೂನನ ಮಗನಾದ ಯೆಹೋಶುವನಲ್ಲಿ ನನ್ನ ಆತ್ಮವು ವಾಸಿಸುತ್ತಿದೆ,


ನಾನು ಅವನ ಸಂಗಡ ಗುಪ್ತವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ಅವನ ಸಂಗಡ ಮಾತನಾಡುತ್ತೇನೆ. ಅವನು ಯೆಹೋವನ ಸ್ವರೂಪವನ್ನೇ ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರುದ್ಧವಾಗಿ ಮಾತನಾಡುವುದಕ್ಕೆ ಏಕೆ ಭಯಪಡಲಿಲ್ಲ?” ಎಂದನು.


ಆಗ ಯೆಹೋವನು ಮೇಘದಲ್ಲಿ ಇಳಿದು ಬಂದು ಅಲ್ಲಿ ಅವನ ಹತ್ತಿರ ನಿಂತು ಯೆಹೋವನೆಂಬ ತನ್ನ ನಾಮವನ್ನು ಪ್ರಕಟಿಸಿದನು.


ಮೂರನೆಯ ದಿನದಲ್ಲಿ ಅವರು ಸಿದ್ಧರಾಗಿರಬೇಕು. ಮೂರನೆಯ ದಿನದಲ್ಲಿ ಯೆಹೋವನು ಸಮಸ್ತ ಜನರಿಗೂ ಪ್ರತ್ಯಕ್ಷನಾಗಿ ಸೀನಾಯಿ ಬೆಟ್ಟದ ಮೇಲೆ ಇಳಿದು ಬರುವನು.


ಯೆಹೋವನು ಅಬ್ರಹಾಮನ ಸಂಗಡ ಮಾತನಾಡುವುದನ್ನು ನಿಲ್ಲಿಸಿ ಅಲ್ಲಿಂದ ಹೊರಟು ಹೋದನು; ಅಬ್ರಹಾಮನು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.


ಆ ನಂತರ ದೇವರು ಅಬ್ರಹಾಮನ ಸಂಗಡ ಮಾತನಾಡುವುದನ್ನು ಮುಗಿಸಿ ಅವನ ಬಳಿಯಿಂದ ಮೇಲಕ್ಕೆ ಏರಿ ಹೋದನು.


ಅಬ್ರಾಮನು ಅಡ್ಡಬೀಳಲು ದೇವರು ಅವನ ಸಂಗಡ ಮಾತನಾಡಿ,


ಈ ಕೆಲಸ ಬಹಳ ಕಷ್ಟವಾದದ್ದು. ನಿನ್ನೊಬ್ಬನಿಂದಲೇ ಅದನ್ನು ನಡೆಸಲಾಗದು. ನೀನು ನಿನ್ನ ಸಂಗಡ ಇರುವ ಈ ಜನರೂ ನಿಶ್ಚಯವಾಗಿ ಬಳಲಿಹೋಗುವಿರಿ.


ಆಗ ಆತನ ಜನರು ಪುರಾತನವಾದ ಮೋಶೆಯ ಕಾಲವನ್ನು ಜ್ಞಾಪಕಮಾಡಿಕೊಂಡು ಹೀಗೆಂದರು, “ತನ್ನ ಜನವೆಂಬ ಮಂದೆಯನ್ನು ಕುರುಬರ ಸಹಿತ ಸಮುದ್ರದೊಳಗಿಂದ ಮೇಲಕ್ಕೆ ಬರಮಾಡಿದಾತನು ಎಲ್ಲಿ?


ಮೋಶೆ ಯೆಹೋವನ ಸಂಗಡ ಮಾತನಾಡಬೇಕೆಂದು ದೇವದರ್ಶನದ ಗುಡಾರದೊಳಗೆ ಹೋದಾಗ ಆಜ್ಞಾಶಾಸನಗಳ ಮಂಜೂಷದ ಮೇಲಣ ಕೃಪಾಸನದ ಮೇಲಿನಿಂದ ಆ ಎರಡು ಕೆರೂಬಿಗಳ ನಡುವೆಯಿಂದ ತನ್ನ ಸಂಗಡ ಮಾತನಾಡುವ ಯೆಹೋವನ ಸ್ವರವು ಅವನಿಗೆ ಕೇಳಿಸಿತು. ಹೀಗೆ ಯೆಹೋವನು ಮೋಶೆಯ ಸಂಗಡ ಮಾತನಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು