Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೆಹೋವನು ಮೋಶೆಗೆ, “ನನ್ನ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ, ಇಲ್ಲವೋ ಈಗ ನೀನು ನೋಡುವಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸರ್ವೇಶ್ವರ ಅವನಿಗೆ, “ಸರ್ವೇಶ್ವರನ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ ಇಲ್ಲವೋ ನೀನೇ ನೋಡುವೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೆಹೋವನು ಅವನಿಗೆ - ಯೆಹೋವನ ಕೈ ಮೋಟುಗೈಯೋ; ನನ್ನ ಮಾತು ನೆರವೇರುತ್ತದೋ ಇಲ್ಲವೋ ಈಗ ನೀನು ನೋಡುವಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದರೆ ಯೆಹೋವನು ಮೋಶೆಗೆ, “ಯೆಹೋವನ ಶಕ್ತಿಗೆ ಮಿತಿಯಿಲ್ಲ. ನಾನು ಹೇಳುತ್ತಿರುವ ಸಂಗತಿಗಳು ನಡೆಯುವುದನ್ನು ನೀನು ನೋಡುವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯೆಹೋವ ದೇವರು ಮೋಶೆಗೆ, “ಯೆಹೋವ ದೇವರ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ, ಇಲ್ಲವೋ ಎಂದು ನೀನು ನೋಡುವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:23
21 ತಿಳಿವುಗಳ ಹೋಲಿಕೆ  

ಇಗೋ, ಯೆಹೋವನ ಹಸ್ತವು ರಕ್ಷಿಸಲಾರದಂತಹ ಮೋಟುಗೈಯಲ್ಲ; ಆತನ ಕಿವಿಯು ಕೇಳಲಾರದ ಹಾಗೆ ಕಿವುಡಲ್ಲ.


ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ? ಇಗೋ, ನನ್ನ ಗದರಿಕೆಯಿಂದಲೇ ನಾನು ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಕಾಡನ್ನಾಗಿ ಮಾಡುತ್ತೇನೆ. ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವವು.


ನಾನೇ ಯೆಹೋವನು; ನಾನು ನುಡಿದೇ ನುಡಿಯುವೆನು; ನಾನು ನುಡಿದ ಮಾತು ನೆರವೇರುವುದು, ಇನ್ನು ನಿಧಾನವಾಗದು; ದ್ರೋಹಿ ವಂಶದವರೇ, ನಾನು ನಿಮ್ಮ ಕಾಲದಲ್ಲಿ ನುಡಿಯುವುದು ಮಾತ್ರವಲ್ಲದೆ ನುಡಿದದ್ದನ್ನು ನೆರವೇರಿಸುವೆನು’” ಇದು ಕರ್ತನಾದ ಯೆಹೋವನ ವಾಕ್ಯ.


ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?


ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು” ಎಂದು ಹೇಳಿದನು.


ದೇವರಿಗೆ ಅಸಾಧ್ಯವಾದದ್ದು ಯಾವುದೂ ಇಲ್ಲ” ಅಂದನು.


ಯೇಸು ಅವರನ್ನು ದೃಷ್ಟಿಸಿ ನೋಡಿ “ಇದು ಮನುಷ್ಯರಿಂದ ಅಸಾಧ್ಯ. ಆದರೆ ದೇವರಿಗೆ ಎಲ್ಲವು ಸಾಧ್ಯವೇ” ಅಂದನು.


ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ, “ಇದು ನಡೆಯುವುದು ನಿಶ್ಚಯ, ನಾನು ನೆರವೇರಿಸುವೆನು; ಹಿಂದೆಗೆಯೆನು, ಕ್ಷಮಿಸೆನು, ಕರುಣಿಸೆನು; ನಿನ್ನ ದುರ್ಮಾರ್ಗ, ದುಷ್ಕೃತ್ಯಗಳಿಗೆ ಸರಿಯಾಗಿ ನಿನಗೆ ನ್ಯಾಯತೀರ್ಪು ಆಗುವುದು” ಇದು ಕರ್ತನಾದ ಯೆಹೋವನ ನುಡಿ.


ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.


ಯಾಕೋಬ ವಂಶವೇ, “ಯೆಹೋವನ ಆತ್ಮವು ತಾಳ್ಮೆಯಿಲ್ಲದ್ದೋ? ಇಂಥ ಕೃತ್ಯಗಳು ಆತನವೋ” ಎಂದು ಏಕೆ ಹೇಳುತ್ತೀ? ನನ್ನ ನುಡಿಗಳು ಸನ್ಮಾರ್ಗಿಗಳಿಗೆ ಹಿತಕರವಷ್ಟೇ.


ಆತನನ್ನು ಪದೇಪದೇ ಪರೀಕ್ಷಿಸಿ, ಇಸ್ರಾಯೇಲರ ಸದಮಲಸ್ವಾಮಿಯನ್ನು ಕೋಪಕ್ಕೆ ಗುರಿಮಾಡಿದರು.


ಇದನ್ನು ಕೇಳಿ ಅರಸನ ಸಮೀಪವರ್ತಿಯಾದ ಸರದಾರನು ದೇವರ ಮನುಷ್ಯನಿಗೆ, “ಯೆಹೋವನು ಆಕಾಶದಲ್ಲಿ ಕಿಂಡಿಗಳನ್ನು ಕೊರೆದರೂ ಇದು ಸಂಭವಿಸಲಾರದು” ಎನ್ನಲು ಎಲೀಷನು ಅವನಿಗೆ, “ಅದು ಸಂಭವಿಸುವುದನ್ನು ನೀನು ಕಣ್ಣಾರೆ ಕಾಣುವಿ, ಆದರೆ ನೀನು ಅದನ್ನು ಅನುಭವಿಸುವುದಿಲ್ಲ” ಎಂದು ಹೇಳಿದನು.


ಅವರಿಗೆ ಬೇಕಾದಷ್ಟು ಸಿಕ್ಕುವಂತೆ ನಾವು ಹಿಂಡಿನಿಂದ ಆಡು, ಕುರಿ, ದನಗಳನ್ನೂ ಕೊಯ್ಯಬೇಕನ್ನುತ್ತಿಯೋ? ಇಲ್ಲವೆ ಸಮುದ್ರದಲ್ಲಿರುವ ಎಲ್ಲಾ ಮೀನುಗಳನ್ನೂ ಹಿಡಿದುಕೊಳ್ಳಬೇಕೋ?” ಎಂದು ಕೇಳಿದನು.


ಏಕೆ ಸ್ತಬ್ಧನಂತೆಯೂ, ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ? ಆದರೂ ಯೆಹೋವನೇ, ನೀನು ನಮ್ಮ ಮಧ್ಯದಲ್ಲಿರುತ್ತಿ. ನಾವು ನಿನ್ನ ಹೆಸರಿನವರು, ನಮ್ಮನ್ನು ಕೈಬಿಡಬೇಡ.


ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು, ಅವನು ದುಃಖ ಧ್ವನಿಯಿಂದ ದಾನಿಯೇಲನನ್ನು ಕೂಗಿ, “ದಾನಿಯೇಲನೇ, ಜೀವ ಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸಲು ಶಕ್ತನಾದನೋ?” ಎಂದು ಕೇಳಿದನು.


ಆನಂತರ ಯೆಹೋವನು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ನೀನು ಈಗ ನೋಡುವೆ. ಅವನು ನನ್ನ ಬಲವಾದ ಹಸ್ತವನ್ನು ನೋಡಿ ಅವರನ್ನು ಹೋಗಗೊಡಿಸುವನು. ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ದೇಶದಿಂದ ಹೊರಡಿಸುವನು” ಅಂದನು.


ಅದಕ್ಕೆ ಅವನು, “ಇಷ್ಟನ್ನು ನೂರು ಮಂದಿಗೆ ಹೇಗೆ ಬಡಿಸಲಿ” ಎಂದನು. ಎಲೀಷನು ಅವನಿಗೆ, “ಇರಲಿ, ಕೊಡು. ಅವರು ಊಟಮಾಡಲಿ. ಅವರು ಅದನ್ನು ಊಟಮಾಡಿ ತೃಪ್ತರಾಗಿ ಇನ್ನೂ ಉಳಿಸಿಕೊಳ್ಳುವರೆಂದು ಯೆಹೋವನು ಎನ್ನುತ್ತಾನೆ” ಎಂದು ಹೇಳಿದನು.


“ಆಹಾ! ಕರ್ತನಾದ ಯೆಹೋವನೇ! ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದಿ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ.


“ಇಗೋ, ನಾನು ಯೆಹೋವನು, ನರಪ್ರಾಣಿಗೆಲ್ಲಾ ದೇವರು; ನನಗೆ ಅಸಾಧ್ಯವಾದದ್ದುಂಟೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು