Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಮೋಶೆ ಹೊರಟುಹೋಗಿ ಯೆಹೋವನ ಮಾತುಗಳನ್ನು ಜನರಿಗೆ ತಿಳಿಸಿದನು ಮತ್ತು ಅವನು ಜನರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಕೂಡಿಸಿ ದೇವದರ್ಶನದ ಗುಡಾರದ ಸುತ್ತಲೂ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಮೋಶೆ ಹೊರಟುಹೋಗಿ ಸರ್ವೇಶ್ವರನ ಮಾತುಗಳನ್ನು ಜನರಿಗೆ ತಿಳಿಸಿದನು. ಜನರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಕೂಡಿಸಿ ದೇವದರ್ಶನದ ಗುಡಾರದ ಸುತ್ತಲೂ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಮೋಶೆ ಹೊರಟು ಹೋಗಿ ಯೆಹೋವನ ಮಾತುಗಳನ್ನು ಜನರಿಗೆ ತಿಳಿಸಿದನು. ಮತ್ತು ಅವನು ಜನರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಕೂಡಿಸಿ ದೇವದರ್ಶನದ ಗುಡಾರದ ಸುತ್ತಲೂ ನಿಲ್ಲಿಸಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಮೋಶೆಯು ಹೊರಟುಹೋಗಿ, ಯೆಹೋವನು ಹೇಳಿದ್ದನ್ನು ಜನರಿಗೆ ತಿಳಿಸಿ, ಇಸ್ರೇಲರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಒಟ್ಟಾಗಿ ಸೇರಿಸಿದನು. ಅವರು ದೇವದರ್ಶನಗುಡಾರದ ಸುತ್ತಲೂ ನಿಲ್ಲುವಂತೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಗ ಮೋಶೆ ಹೋಗಿ ಯೆಹೋವ ದೇವರ ಮಾತುಗಳನ್ನು ಜನರಿಗೆ ಹೇಳಿ, ಜನರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಕೂಡಿಸಿ, ಗುಡಾರದ ಸುತ್ತಲೂ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:24
3 ತಿಳಿವುಗಳ ಹೋಲಿಕೆ  

ಆಗ ಯೆಹೋವನು ಮೋಶೆಗೆ ಹೇಳಿದ್ದೇನೇಂದರೆ, “ಇಸ್ರಾಯೇಲರಲ್ಲಿ ಹಿರಿಯರೆಂದೂ ಮತ್ತು ಅಧಿಪತಿಗಳೆಂದೂ ನೀನು ತಿಳಿದುಕೊಂಡಿರುವ ಎಪ್ಪತ್ತು ಮಂದಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಕರೆದು ಅಲ್ಲಿ ನಿನ್ನೊಡನೆ ನಿಲ್ಲಿಸಿಕೋ.


ಆದರೆ ಎಲ್ದಾದ್, ಮೇದಾದ್ ಎಂಬ ಇಬ್ಬರು ಪಾಳೆಯದೊಳಗೆ ನಿಂತಿದ್ದರು. ಅವರ ಹೆಸರುಗಳು ಬರೆಯಲ್ಪಟ್ಟಿದ್ದಾಗ್ಯೂ ಅವರು ದೇವದರ್ಶನದ ಗುಡಾರಕ್ಕೆ ಹೋಗಲಿಲ್ಲ. ಆ ಆತ್ಮವು ಅವರ ಮೇಲೆ ಇಳಿದುಬಂದುದರಿಂದ ಅವರು ಪಾಳೆಯದೊಳಗೆ ಪರವಶರಾಗಿ ಪ್ರವಾದಿಸಿದರು.


ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ, ಏದೆನ್ ವನದ ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು