Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯೆಹೋವನು ಆ ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಮಾತನಾಡಿದನು. ಮೋಶೆಯ ಮೇಲಿರುವ ಆತ್ಮದಲ್ಲಿ ಸ್ವಲ್ಪವನ್ನು ಆ ಎಪ್ಪತ್ತು ಮಂದಿ ಹಿರಿಯರಿಗೂ ಪಾಲುಕೊಟ್ಟನು. ಆ ಆತ್ಮವು ಅವರಿಗೆ ದೊರಕಿದಾಗ ಅವರು ಪರವಶರಾಗಿ ಆ ಸಂದರ್ಭದಲ್ಲಿ ಮಾತ್ರ ಪ್ರವಾದಿಸಿದರು. ಆ ಮೇಲೆ ಅವರು ಎಂದಿಗೂ ಪ್ರವಾದಿಸಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆಗ ಸರ್ವೇಶ್ವರ ಮೇಘದಲ್ಲಿ ಇಳಿದುಬಂದು ಅವನೊಡನೆ ಮಾತಾಡಿ ಅವನಿಗೆ ಅನುಗ್ರಹಿಸಲಾಗಿದ್ದ ಆತ್ಮಶಕ್ತಿಯಲ್ಲಿ ಕಿಂಚಿತ್ತನ್ನು ಆ ಎಪ್ಪತ್ತು ಮಂದಿ ಹಿರಿಯರಿಗೂ ಹಂಚಿದರು. ಆ ಶಕ್ತಿ ಅವರ ಮೇಲೆ ಇಳಿದುಬಂದಾಗ ಅವರು ಪರವಶರಾಗಿ ಪ್ರವಾದಿಸಿದರು. ಅಂಥ ಅನುಭವ ಅವರಿಗೆ ಮತ್ತೆ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಯೆಹೋವನು ಆ ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಮಾತಾಡಿ ಅವನಲ್ಲಿದ್ದ ಆತ್ಮೀಯವರಗಳಲ್ಲಿ ಆ ಎಪ್ಪತ್ತು ಮಂದಿ ಹಿರಿಯರಿಗೂ ಪಾಲುಕೊಟ್ಟನು; ಆ ವರಗಳು ಅವರಿಗೆ ದೊರಕಿದಾಗ ಅವರು ಪರವಶರಾಗಿ ಪ್ರವಾದಿಸಿದರು; ಆಮೇಲೆ ಅವರು ತಿರಿಗಿ ಪ್ರವಾದಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆಗ ಯೆಹೋವನು ಮೇಘದಲ್ಲಿ ಇಳಿದುಬಂದು ಮೋಶೆಯೊಡನೆ ಮಾತಾಡಿ ಅವನಲ್ಲಿದ್ದ ಆತ್ಮವನ್ನೇ ಆ ಎಪ್ಪತ್ತು ಮಂದಿ ಹಿರಿಯರಿಗೆ ಕೊಟ್ಟನು. ಆತ್ಮಿಕ ವರಗಳು ಅವರಿಗೆ ಕೊಡಲ್ಪಟ್ಟಾಗ ಅವರು ಪ್ರವಾದಿಗಳಂತೆ ಪ್ರವಾದಿಸಿದರು. ಆದರೆ ಮತ್ತೆ ಅವರು ಹಾಗೆ ಪ್ರವಾದಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಯೆಹೋವ ದೇವರು ಮೇಘದೊಳಗಿಂದ ಇಳಿದು, ಅವನ ಸಂಗಡ ಮಾತನಾಡಿ, ಅವನ ಮೇಲಿರುವ ಆತ್ಮಶಕ್ತಿಯಲ್ಲಿ ಕಿಂಚಿತ್ತನ್ನು ತೆಗೆದು, ಹಿರಿಯರಾದ ಎಪ್ಪತ್ತು ಮಂದಿಯ ಮೇಲೆ ಇಟ್ಟರು. ಆದ್ದರಿಂದ ಆತ್ಮವು ಅವರ ಮೇಲೆ ನೆಲೆಯಾಗಿದ್ದಾಗ ಅವರು ಪ್ರವಾದಿಸಿದರು. ಆಮೇಲೆ ಅವರು ಪ್ರವಾದಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:25
28 ತಿಳಿವುಗಳ ಹೋಲಿಕೆ  

ನಾನು ಅಲ್ಲಿಗೆ ಇಳಿದು ಬಂದು ನಿನ್ನ ಸಂಗಡ ಮಾತನಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿರುವ ಆತ್ಮದಲ್ಲಿ ಸ್ವಲ್ಪವನ್ನು ಅವರಿಗೂ ಪಾಲುಕೊಡುವೆನು. ಆಗ ನೀನೊಬ್ಬನೇ ಈ ಜನರ ಹೊಣೆಯನ್ನು ವಹಿಸಬೇಕಾಗಿರುವುದಿಲ್ಲ; ನಿನ್ನ ಜೊತೆಯಲ್ಲಿ ಇವರೂ ಜವಾಬ್ದಾರಿ ವಹಿಸುವರು.”


ಅವನು ದೇವಗಿರಿಗೆ ಬಂದ ಕೂಡಲೆ ಪರವಶವಾದ ಪ್ರವಾದಿಸಮೂಹವು ತನ್ನೆದುರಿಗೆ ಬರುವುದನ್ನು ಕಂಡನು. ದೇವರ ಆತ್ಮವು ಸೌಲನ ಮೇಲೆ ಬಂದ್ದದರಿಂದ ಅವನೂ ಪರವಶನಾಗಿ ಅವರೊಂದಿಗೆ ಸೇರಿ ಪ್ರವಾದಿಸಿದನು.


ಯೆಹೋವನು ಮೇಘಸ್ತಂಭದೊಳಗೆ ಇಳಿದು ಬಂದು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ನಿಂತು ಆರೋನನ್ನು ಮತ್ತು ಮಿರ್ಯಾಮಳನ್ನು ಹತ್ತಿರಕ್ಕೆ ಕರೆದನು. ಅವರು ಮುಂದೆ ಬಂದರು.


ಏಕೆಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ. ಆದರೆ ಮನುಷ್ಯರು ಪವಿತ್ರಾತ್ಮಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತನಾಡಿರುವುದು.


ದೂರದಲ್ಲಿ ನಿಂತಿದ್ದ ಯೆರಿಕೋವಿನ ಪ್ರವಾದಿ ಮಂಡಳಿಯವರು ಇದನ್ನು ಕಂಡು, “ಎಲೀಯನಿಗಿದ್ದ ಆತ್ಮವು ಎಲೀಷನ ಮೇಲೆ ಬಂದಿದೆ” ಎಂದು ತಿಳಿದುಕೊಂಡು ಅವನನ್ನು ಎದುರುಗೊಂಡು, ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು.


ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.


ಪ್ರವಾದಿಗಳ ಆತ್ಮಗಳು ಪ್ರವಾದಿಗಳ ಸ್ವಾಧೀನದಲ್ಲಿರುತ್ತವೆ.


ಅವರಲ್ಲಿ ಅಗಬನೆಂಬ ಒಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವುದು ಎಂದು ಪವಿತ್ರಾತ್ಮನ ಪ್ರೇರಣೆಯಿಂದ ಸೂಚಿಸಿದನು. ಅದು ಕ್ಲೌದ್ಯ ಚಕ್ರವರ್ತಿಯ ಕಾಲದಲ್ಲಿ ಉಂಟಾಯಿತು.


ಆತನು ಮೇಘಸ್ತಂಭದಲ್ಲಿದ್ದು ಅವರೊಡನೆ ಮಾತನಾಡುತ್ತಿದ್ದನು; ಅವರು ಆತನ ವಿಧಿನಿಯಮಗಳನ್ನು ಕೈಕೊಂಡವರು.


ಇಸ್ರಾಯೇಲರ ಎಲ್ಲಾ ಪ್ರಯಾಣಗಳಲ್ಲಿಯೂ ಅವರ ಕಣ್ಣುಗಳ ಮುಂದೆ ಹಗಲು ಹೊತ್ತಿನಲ್ಲಿ ಯೆಹೋವನ ಮೇಘವು ಗುಡಾರದ ಮೇಲೆಯೂ ಇರುತ್ತಿತ್ತು; ರಾತ್ರಿ ವೇಳೆಯಲ್ಲಿ ಆ ಮೇಘದೊಳಗೆ ಅಗ್ನಿಯು ಇರುತ್ತಿತ್ತು.


ಆಗ ಯೆಹೋವನು ಮೇಘದಲ್ಲಿ ಇಳಿದು ಬಂದು ಅಲ್ಲಿ ಅವನ ಹತ್ತಿರ ನಿಂತು ಯೆಹೋವನೆಂಬ ತನ್ನ ನಾಮವನ್ನು ಪ್ರಕಟಿಸಿದನು.


ಅದಕ್ಕೆ ಯೆಹೋವನು ಮೋಶೆಗೆ, “ನೂನನ ಮಗನಾದ ಯೆಹೋಶುವನಲ್ಲಿ ನನ್ನ ಆತ್ಮವು ವಾಸಿಸುತ್ತಿದೆ,


ಯೆಹೋವನ ಆತ್ಮವು ಅವನ ಮೇಲೆ ಬಂದುದರಿಂದ ಅವನು ಇಸ್ರಾಯೇಲರ ನ್ಯಾಯಸ್ಥಾಪನೆಗೋಸ್ಕರ ಯುದ್ಧಕ್ಕೆ ಹೊರಟನು. ಯೆಹೋವನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಅವನ ಕೈಗೆ ಒಪ್ಪಿಸಿಕೊಟ್ಟದ್ದರಿಂದ ಅವನು ಅವನನ್ನು ಸಂಪೂರ್ಣವಾಗಿ ಸೋಲಿಸಿಬಿಟ್ಟನು.


ಆಗ ಆತನ ಜನರು ಪುರಾತನವಾದ ಮೋಶೆಯ ಕಾಲವನ್ನು ಜ್ಞಾಪಕಮಾಡಿಕೊಂಡು ಹೀಗೆಂದರು, “ತನ್ನ ಜನವೆಂಬ ಮಂದೆಯನ್ನು ಕುರುಬರ ಸಹಿತ ಸಮುದ್ರದೊಳಗಿಂದ ಮೇಲಕ್ಕೆ ಬರಮಾಡಿದಾತನು ಎಲ್ಲಿ?


ಇಸ್ರಾಯೇಲ್ ವಂಶದ ಎಪ್ಪತ್ತು ಮಂದಿ ಹಿರಿಯರೂ ಮತ್ತು ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು; ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು.


ಆದರೂ ನೀನು ಕರುಣೆಯಿಟ್ಟು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲವಾದರೆ ನೀನು ಬರೆದಿರುವ ಜೀವಿತರ ಪುಸ್ತಕದಿಂದ ನನ್ನ ಹೆಸರನ್ನೂ ಅಳಿಸಿಬಿಡಬೇಕೆಂದು ಕೇಳಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು.


ಆಗ ಮೋಶೆ ಎದ್ದು ದಾತಾನ್ ಮತ್ತು ಅಬೀರಾಮರ ಬಳಿಗೆ ಹೋದನು; ಇಸ್ರಾಯೇಲರ ಹಿರಿಯರು ಅವನ ಹಿಂದೆ ಹೋದರು.


ಬಿಳಾಮನು ಕಣ್ಣೆತ್ತಿ ನೋಡಲಾಗಿ ಕುಲಗಳ ಪ್ರಕಾರ ಡೇರೆಗಳನ್ನು ಹಾಕಿಕೊಂಡಿದ್ದ ಇಸ್ರಾಯೇಲರು ಅವನಿಗೆ ಕಾಣಿಸಿದರು. ಆಗ ಅವನು ದೇವರಾತ್ಮಪ್ರೇರಿತನಾಗಿ,


ಅವರನ್ನು ಉಪದೇಶಿಸಲು ನೀನು ನಿನ್ನ ಒಳ್ಳೆಯ ಆತ್ಮನನ್ನು ಕೊಟ್ಟೆ. ಅವರ ಬಾಯಿಂದ ಮನ್ನವನ್ನು ಹಿಂದೆಗೆಯಲಿಲ್ಲ. ಬಾಯಾರಿದಾಗ ಅವರಿಗೆ ನೀರನ್ನು ಕೊಟ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು