ಅರಣ್ಯಕಾಂಡ 11:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆಗ ಯೆಹೋವನ ಬಳಿಯಿಂದ ಗಾಳಿ ಹೊರಟು ಸಮುದ್ರದಿಂದ ಲಾವಕ್ಕಿಗಳನ್ನು ಹೊಡೆದುಕೊಂಡು ಪಾಳೆಯದ ಸುತ್ತಲೂ ಒಂದು ದಿನದ ಪ್ರಯಾಣದಷ್ಟು ದೂರದವರೆಗೆ ಭೂಮಿಗಿಂತ ಎರಡು ಮೊಳ ಎತ್ತರದಲ್ಲಿ ಹಾರುತ್ತಾ ಬರುವಂತೆಮಾಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಸರ್ವೇಶ್ವರನಿಂದ ಕಳಿಸಲಾದ ಗಾಳಿಯೊಂದು ಸಮುದ್ರದ ಕಡೆಯಿಂದ ಲಾವಕ್ಕಿಗಳನ್ನು ಹೊಡೆದುಕೊಂಡು ಬಂದಿತು. ಆ ಹಕ್ಕಿಗಳು ಪಾಳೆಯದ ಸುತ್ತಲೂ ಒಂದು ದಿನದ ಪ್ರಯಾಣದಷ್ಟು ದೂರದವರೆಗೆ ಭೂಮಿಗಿಂತ ಎರಡು ಮೊಳ ಎತ್ತರದಲ್ಲಿ ಹಾರುತ್ತಾ ಬಂದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಆಗ ಯೆಹೋವನ ಬಳಿಯಿಂದ ಗಾಳಿಹೊರಟು ಸಮುದ್ರದಿಂದ ಲಾವಕ್ಕಿಗಳನ್ನು ಹೊಡೆದುಕೊಂಡು ಪಾಳೆಯದ ಸುತ್ತಲೂ ಒಂದು ದಿನದ ಪ್ರಯಾಣದಷ್ಟು ದೂರದವರೆಗೆ ಭೂವಿುಗಿಂತ ಎರಡು ಮೊಳ ಎತ್ತರದಲ್ಲಿ ಹಾರುತ್ತಾ ಬರುವಂತೆ ಮಾಡಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಆಗ ಯೆಹೋವನು ಸಮುದ್ರದ ಕಡೆಯಿಂದ ಬಲವಾದ ಗಾಳಿಯು ಬೀಸುವಂತೆ ಮಾಡಿದನು. ಗಾಳಿಯು ಲಾವಕ್ಕಿಗಳನ್ನು ಹೊತ್ತುಕೊಂಡು ಬಂತು. ಲಾವಕ್ಕಿಗಳು ಪಾಳೆಯದ ಸುತ್ತಲೂ ಹಾರಿಬಂದವು. ಒಬ್ಬನು ಪ್ರತಿಯೊಂದು ದಿಕ್ಕಿನಲ್ಲಿ ಒಂದು ದಿನ ನಡೆಯಬಹುದಾದಷ್ಟು ದೂರದವರೆಗೂ ಲಾವಕ್ಕಿಗಳು ಭೂಮಿಯಿಂದ ಮೂರು ಅಡಿ ಎತ್ತರದಲ್ಲಿ ಹಾರಾಡುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಯೆಹೋವ ದೇವರ ಕಡೆಯಿಂದ ಒಂದು ಗಾಳಿಯು ಹೊರಟು ಸಮುದ್ರದ ಕಡೆಯಿಂದ ಲಾವಕ್ಕಿಗಳನ್ನು ತಂದು, ಪಾಳೆಯದ ಸುತ್ತಲೂ ಈ ಕಡೆ ಒಂದು ದಿನದ ದೂರದ ಪ್ರಯಾಣದಷ್ಟು, ಆ ಕಡೆ ಒಂದು ದಿನದ ದೂರದ ಪ್ರಯಾಣದಷ್ಟು ಪಾಳೆಯದ ಬಳಿಯಲ್ಲಿ ಭೂಮಿಯ ಮೇಲೆ ಎರಡು ಮೊಳ ಎತ್ತರದಲ್ಲಿ ಅವುಗಳನ್ನು ಬೀಳುವಂತೆ ಮಾಡಿತು. ಅಧ್ಯಾಯವನ್ನು ನೋಡಿ |