Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರ ಮಧ್ಯದಲ್ಲಿದ್ದ ಇತರ ಜನರು ಮಾಂಸವನ್ನು ಆಶಿಸಿದರು. ಇಸ್ರಾಯೇಲರು ಪುನಃ ಕಣ್ಣೀರಿಡುತ್ತಾ ಅಯ್ಯೋ, “ಮಾಂಸವು ನಮಗೆ ಹೇಗೆ ಸಿಕ್ಕೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇಸ್ರಯೇಲರೊಡನೆ ಪ್ರಯಾಣ ಮಾಡುತ್ತಿದ್ದ ಅನ್ಯಜನರು ಮಾಂಸಕ್ಕಾಗಿ ಹಂಬಲಿಸಿದರು. ಇಸ್ರಯೇಲರು ಕೂಡ, ಕಣ್ಣೀರಿಡುತ್ತಾ: “ಅಯ್ಯೋ, ನಮಗೆ ಮಾಂಸ ಕೊಡುವವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವರ ಮಧ್ಯದಲ್ಲಿದ್ದ ಇತರ ಜನರು ಮಾಂಸವನ್ನು ಆಶಿಸಿದರು. ಇಸ್ರಾಯೇಲ್ಯರು ಕೂಡ ತಿರಿಗಿ ಅತ್ತುಕೊಂಡು - ಮಾಂಸವು ನಮಗೆ ಹೇಗೆ ಲಭಿಸೀತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವರ ಮಧ್ಯದಲ್ಲಿದ್ದ ಕಿರುಕುಳಕೊಡುವ ಪರದೇಶಸ್ಥರು ಬೇರೆ ರೀತಿಯ ಆಹಾರಕ್ಕಾಗಿ ಬಹಳವಾಗಿ ಆಶಿಸಿದರು. ಇಸ್ರೇಲರು ಸಹ ಮತ್ತೆ ಅಳಲು ಆರಂಭಿಸಿ, “ನಮಗೆ ಯಾರು ಮಾಂಸವನ್ನು ಕೊಡುತ್ತಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರೊಳಗಿದ್ದ ಮಿಶ್ರ ಗುಂಪಿನ ಜನರು ಮಾಂಸಕ್ಕಾಗಿ ದುರಾಶೆಪಟ್ಟರು. ಇಸ್ರಾಯೇಲರು ಸಹ ತಿರುಗಿ ಅಳುತ್ತಾ, “ನಮಗೆ ಮಾಂಸವನ್ನು ತಿನ್ನುವುದಕ್ಕೆ ಕೊಡುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:4
16 ತಿಳಿವುಗಳ ಹೋಲಿಕೆ  

ಅವರು ಕೆಟ್ಟ ವಿಷಯಗಳನ್ನು ಮೋಹಿಸದಂತೆ ನಾವು ಮೋಹಿಸುವವರಾಗಬಾರದೆಂಬುದಕ್ಕಾಗಿ ಈ ಸಂಗತಿಗಳು ನಮಗೆ ನಿದರ್ಶನಗಳಾಗಿವೆ.


ಅವರೊಂದಿಗೆ ಬಹು ಮಂದಿ ಅನ್ಯರೂ ಹೊರಟುಬಂದಿದ್ದರು. ಕುರಿದನಗಳ ಹಿಂಡೂ ಪಶುಗಳೂ ಅವರ ಸಂಗಡ ಹೊರಟುಹೋದವು.


ಅರಣ್ಯದಲ್ಲಿ ಅತಿ ಆಶೆಗೊಂಡವರಾಗಿ, ಅಡವಿಯಲ್ಲಿ ದೇವರನ್ನು ಪರೀಕ್ಷಿಸಿದರು.


ಮೋಸಹೋಗಬೇಡಿರಿ; “ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತವೆ.”


ಇಸ್ರಾಯೇಲರು ಈ ಧರ್ಮವಿಧಿಯನ್ನು ಕೇಳಿದೊಡನೆ ಎಲ್ಲಾ ಮಿಶ್ರಜಾತಿಯವರನ್ನು ತಮ್ಮ ಮಧ್ಯದಿಂದ ಬೇರ್ಪಡಿಸಿದರು.


ದೇಹದ ಆಸೆಗಳನ್ನು ಪೂರೈಸುವುದಕ್ಕಾಗಿ ಚಿಂತಿಸದೇ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.


ಇಸ್ರಾಯೇಲರು ಮೋಶೆ ಮತ್ತು ಆರೋನರಿಗೆ, “ಈ ಸಮೂಹವನ್ನೆಲ್ಲಾ ಹಸಿವೆಯಿಂದ ಸಾಯಿಸಬೇಕೆಂದು ನೀವು ನಮ್ಮನ್ನು ಈ ಮರುಭೂಮಿಗೆ ಕರೆದುಕೊಂಡು ಬಂದಿದ್ದೀರಿ. ನಾವು ಐಗುಪ್ತ ದೇಶದಲ್ಲಿದ್ದಾಗ ಮಾಂಸದ ಪಾತ್ರೆಗಳ ಬಳಿಯಲ್ಲಿ ಕುಳಿತುಕೊಂಡು ಹೊಟ್ಟೆತುಂಬಾ ರೊಟ್ಟಿಯನ್ನು ತಿನ್ನುತ್ತಿದ್ದಾಗ ಯೆಹೋವನ ಕೈಯಿಂದ ಸತ್ತು ಹೋಗಿದ್ದರೆ ಎಷ್ಟೋ ಒಳ್ಳೆಯದಾಗಿತ್ತು” ಎಂದರು.


ಈ ಮನುಷ್ಯರೆಲ್ಲರು ಐಗುಪ್ತ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ, ನಾನು ನಡೆಸಿರುವ ಮಹತ್ಕಾರ್ಯಗಳನ್ನೂ, ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ, ಪದೇ ಪದೇ ನನ್ನನ್ನು ಪರೀಕ್ಷಿಸಿದ್ದರಿಂದ


ನೀನು ಹಾಲೂ ಮತ್ತು ಜೇನೂ ಹರಿಯುವ ದೇಶದಿಂದ ಕರೆದುಕೊಂಡು ಬಂದು ನಮ್ಮನ್ನು ಮರುಭೂಮಿಯಲ್ಲಿ ಸಾಯಿಸುವುದು ನಿನಗೆ ಸಾಕಾಗಲಿಲ್ಲವೋ? ನೀನು ನಮ್ಮ ಮೇಲೆ ದೊರೆತನ ಮಾಡಬೇಕು ಎಂದು ಕೋರುತ್ತಿಯೋ?


ಬೇಡವೇ ಬೇಡ; ನಾವು ಯುದ್ಧ ಕಾಣದೆ, ತುತ್ತೂರಿಯ ಶಬ್ದ ಕೇಳದೆ, ಅನ್ನದ ಕೊರತೆಯಿಂದ ಹಸಿವಾಗದೆ ಇರುವ ಐಗುಪ್ತ ದೇಶಕ್ಕೆ ಹೋಗಿ ಅಲ್ಲೇ ವಾಸಿಸುವೆವು’ ಎಂದುಕೊಂಡರೆ,


“ಇಸ್ರಾಯೇಲರ ಗುಣುಗುಟ್ಟುವಿಕೆಯು ನನಗೆ ಕೇಳಿಸಿತು. ನೀನು ಅವರಿಗೆ, ‘ನೀವು ಸಾಯಂಕಾಲದಲ್ಲಿ ಮಾಂಸವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ. ಇದರಿಂದ ನಾನು ನಿಮ್ಮ ದೇವರಾದ ಯೆಹೋವನು ಎಂಬುದು ನಿಮಗೆ ಗೊತ್ತಾಗುವುದೆಂದು ಹೇಳಬೇಕು’” ಎಂಬುದೇ.


ಇದಲ್ಲದೆ ಇಸ್ರಾಯೇಲರಿಗೆ ಹೀಗೆ ಹೇಳು, “ನಾಳೆಗೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಾಳೆ ನಿಮಗೆ ಮಾಂಸವು ದೊರೆಯುವುದು. ನೀವು ಯೆಹೋವನಿಗೆ ಕೇಳಿಸುವಂತೆ, ‘ನಮಗೆ ಮಾಂಸವನ್ನು ಕೊಡುವವರೇ ಇಲ್ಲ; ಐಗುಪ್ತ ದೇಶದಲ್ಲಿ ಎಷ್ಟೋ ಸುಖವಾಗಿದ್ದೇವಲ್ಲಾ’ ಎಂದು ಅಳುತ್ತಾ ಹೇಳಿದ್ದರಿಂದ ಯೆಹೋವನೇ ನಿಮಗೆ ಮಾಂಸವನ್ನು ತಿನ್ನಲಿಕ್ಕೆ ಕೊಡುವನು.


ಆಗ ಜನಸಮೂಹದವರೆಲ್ಲರೂ ತಮ್ಮ ಸ್ವರ ಎತ್ತಿ ಆ ರಾತ್ರಿಯೆಲ್ಲಾ ಗೋಳಾಡಿದರು.


ತಬೇರಾ, ಮಸ್ಸಾ, ಕಿಬ್ರೋತ್ ಹತಾವಾ ಎಂಬ ಸ್ಥಳಗಳಲ್ಲಿಯೂ ನೀವು ಯೆಹೋವನಿಗೆ ಕೋಪವನ್ನು ಹುಟ್ಟಿಸಿದ್ದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು