ಅರಣ್ಯಕಾಂಡ 12:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆ ಮೇಘವು ದೇವದರ್ಶನದ ಗುಡಾರದ ಮೇಲಿನಿಂದ ಬಿಟ್ಟುಹೋಯಿತು. ಪಕ್ಕನೆ ಮಿರ್ಯಾಮಳಿಗೆ ತೊನ್ನು ಹತ್ತಿದ್ದರಿಂದ ಆಕೆಯ ಚರ್ಮ ಹಿಮದಂತೆ ಬೆಳ್ಳಗಾಗಿ ಹೋಯಿತು. ಆರೋನನು ಮಿರ್ಯಾಮಳನ್ನು ನೋಡಿದಾಗ ಆಕೆಗೆ ತೊನ್ನು ಹಿಡಿದಿದೆ ಎಂದು ತಿಳಿದುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಮೇಘವು ಗುಡಾರದಿಂದ ಮೇಲಕ್ಕೆ ಎದ್ದಿತು. ಆರೋನನು ಹಿಂತಿರುಗಿ ಮಿರ್ಯಾಮಳನ್ನು ನೋಡಿದನು. ಆಕೆಯ ಚರ್ಮವು ಹಿಮದಂತೆ ಬೆಳ್ಳಗಾಗಿತ್ತು. ಆಕೆಗೆ ಭಯಂಕರವಾದ ಚರ್ಮರೋಗ ಹಿಡಿದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆ ಮೇಘವು ಗುಡಾರದ ಮೇಲಿನಿಂದ ತೊಲಗಿ ಹೋಯಿತು. ಮಿರ್ಯಾಮಳು ಹಿಮದ ಹಾಗೆ ಕುಷ್ಠವುಳ್ಳವಳಾದಳು. ಆರೋನನು ಮಿರ್ಯಾಮಳ ಕಡೆಗೆ ನೋಡಿದಾಗ, ಇಗೋ, ಅವಳು ಕುಷ್ಠರೋಗಿಯಾಗಿದ್ದಳು. ಅಧ್ಯಾಯವನ್ನು ನೋಡಿ |