ಅರಣ್ಯಕಾಂಡ 12:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಗ ಮೋಶೆ ಯೆಹೋವನಿಗೆ, “ದೇವಾ, ಆಕೆಯನ್ನು ವಾಸಿಮಾಡಬೇಕೆಂದು ಬೇಡುತ್ತೇನೆ” ಎಂದು ಮೊರೆಯಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆಗ ಮೋಶೆ ಸರ್ವೇಶ್ವರನಿಗೆ, “ಹೇ ದೇವಾ, ಆಕೆಯನ್ನು ಗುಣಪಡಿಸಬೇಕೆಂದು ಬೇಡಿಕೊಳ್ಳುತ್ತೇನೆ,” ಎಂದು ಮೊರೆಯಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಗ ಮೋಶೆ ಯೆಹೋವನಿಗೆ - ದೇವಾ, ಆಕೆಯನ್ನು ವಾಸಿಮಾಡಬೇಕೆಂದು ಬೇಡುತ್ತೇನೆ ಎಂದು ಮೊರೆಯಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದ್ದರಿಂದ ಮೋಶೆ ಯೆಹೋವನಿಗೆ ಪ್ರಾರ್ಥಿಸಿ, “ದೇವರೇ, ದಯಮಾಡಿ ಈಕೆಯನ್ನು ವಾಸಿಮಾಡು” ಎಂದು ಮೊರೆಯಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಮೋಶೆಯು ಯೆಹೋವ ದೇವರಿಗೆ, “ದೇವರೇ, ಅವಳನ್ನು ಈಗ ಗುಣಪಡಿಸು, ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿ |
ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು.