ಅರಣ್ಯಕಾಂಡ 12:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವರು, “ಯೆಹೋವನು ಮೋಶೆಯ ಮೂಲಕವಾಗಿ ಮಾತ್ರವೇ ಮಾತನಾಡುತ್ತಾನೋ? ನಮ್ಮ ಮೂಲಕ ಆತನು ಮಾತನಾಡುವುದಿಲ್ಲವೇ?” ಎಂದು ಹೇಳಿಕೊಂಡರು. ಅವರು ಆಡಿದ ಮಾತು ಯೆಹೋವನಿಗೆ ಕೇಳಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ಸರ್ವೇಶ್ವರ ಸ್ವಾಮಿ ಮೋಶೆಯ ಮುಖಾಂತರ ಮಾತ್ರ ಮಾತಾಡಿದ್ದಾರೋ? ನಮ್ಮ ಮುಖಾಂತರ ಮಾತಾಡಲಿಲ್ಲವೋ?’ ಎಂದು ಹೇಳತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆಹೋವನು ಮೋಶೆಯ ಮೂಲಕವಾಗಿ ಮಾತ್ರವೇ ಮಾತಾಡಿದ್ದಾನೋ; ನಮ್ಮ ಮೂಲಕವೂ ಆತನು ಮಾತಾಡಲಿಲ್ಲವೇ ಎಂದು ಹೇಳಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅವರು, “ಯೆಹೋವನು ಮೋಶೆಯೊಡನೆ ಮಾತ್ರ ಮಾತಾಡಿದ್ದಾನೋ? ಆತನು ನಮ್ಮೊಡನೆಯೂ ಮಾತಾಡಿದನಲ್ಲವೇ?” ಅಂದರು. ಯೆಹೋವನು ಅವರ ಮಾತುಗಳನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವರು, “ಯೆಹೋವ ದೇವರು ಮೋಶೆಯ ಮುಖಾಂತರ ಮಾತ್ರವೇ ಮಾತನಾಡಿದ್ದಾರೋ? ನಮ್ಮ ಮುಖಾಂತರ ಮಾತಾಡಲಿಲ್ಲವೋ?” ಎಂದರು. ಅವರು ಆಡಿದ ಮಾತು ಯೆಹೋವ ದೇವರಿಗೆ ಕೇಳಿಸಿತು. ಅಧ್ಯಾಯವನ್ನು ನೋಡಿ |
ಜೀವಸ್ವರೂಪನಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದನೆಯ ಮಾತುಗಳನ್ನು, ನಿನ್ನ ದೇವರಾದ ಯೆಹೋವನು ಕೇಳಿರುವನು. ನಿನ್ನ ದೇವರಾದ ಯೆಹೋವನು ತಾನು ಹೇಳಿದ ಮಾತುಗಳ ನಿಮಿತ್ತ ಮುಯ್ಯಿತೀರಿಸುವನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗಾಗಿಯಾದರೂ ಆತನನ್ನು ಪ್ರಾರ್ಥಿಸು ಎಂಬುದಾಗಿ ಹಿಜ್ಕೀಯನು ಹೇಳುತ್ತಾನೆ” ಎಂದು ಹೇಳಿರಿ ಅಂದನು.