Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 13:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನಾನು ಇಸ್ರಾಯೇಲರಿಗೆ ಕೊಡುವ ಕಾನಾನ್ ದೇಶವನ್ನು ಸಂಚರಿಸಿ ನೋಡುವುದಕ್ಕೆ ನೀನು ಒಂದೊಂದು ಕುಲದಿಂದ ಒಬ್ಬೊಬ್ಬ ಮುಖ್ಯಸ್ಥನನ್ನು ಕಳುಹಿಸಬೇಕು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನಾನು ಇಸ್ರಯೇಲರಿಗೆ ಕೊಡಲಿರುವ ಕಾನಾನ್ ನಾಡನ್ನು ಸಂಚರಿಸಿ ನೋಡಿಬರಲು ಒಂದೊಂದು ಕುಲದಿಂದ ಒಬ್ಬೊಬ್ಬ ಮುಖ್ಯಸ್ಥನನ್ನು ಕಳಿಸು,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಕಾನಾನ್ ದೇಶದ ಬಗ್ಗೆ ವಿಷಯವನ್ನು ಸಂಗ್ರಹಿಸಿಕೊಂಡು ಬರಲು ಗೂಢಚಾರರನ್ನು ಕಳುಹಿಸು. ನಾನು ಇಸ್ರೇಲರಿಗೆ ಕೊಡುವ ದೇಶ ಇದಾಗಿದೆ. ಹನ್ನೆರಡು ಕುಲಗಳಿಂದ ಒಬ್ಬೊಬ್ಬ ನಾಯಕನನ್ನು ಕಳುಹಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನಾನು ಇಸ್ರಾಯೇಲರಿಗೆ ಕೊಡುವ ಕಾನಾನ್ ದೇಶವನ್ನು ಪರೀಕ್ಷಿಸುವ ಹಾಗೆ ನೀನು ಜನರನ್ನು ಕಳುಹಿಸು. ಅವರವರ ಪಿತೃಗಳ ಗೋತ್ರದ ಪ್ರಕಾರ ಅವರೊಳಗೆ ಅಧಿಕಾರಿಯಾಗಿರುವ ಪ್ರತಿಯೊಬ್ಬನನ್ನು ಕಳುಹಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 13:2
12 ತಿಳಿವುಗಳ ಹೋಲಿಕೆ  

ಆ ದೇಶವನ್ನು ನೋಡಿಕೊಂಡು ಬರುವುದಕ್ಕೆ ನಾನು ಕಾದೇಶ್ ಬರ್ನೇಯದಿಂದ ನಿಮ್ಮ ತಂದೆಯರನ್ನು ಕಳುಹಿಸಿದಾಗ ಅವರೂ ಹಾಗೆಯೇ ಮಾಡಿದರು.


ಒಂದೊಂದು ಕುಲದಿಂದ ನೇಮಿಸಲ್ಪಟ್ಟ ಒಬ್ಬ ಕುಲಾಧಿಪತಿಯೂ ಇವರೇ. ಇವರು ಕಾನಾನ್ ದೇಶದಲ್ಲಿ ತಮ್ಮ ತಮ್ಮ ಸ್ವತ್ತುಗಳನ್ನು ಹಂಚಿಕೊಡಬೇಕು.


ಆಗ ನಾನು ನಿಮ್ಮಲ್ಲಿ ಪ್ರಸಿದ್ಧರಾದ, ಬುದ್ಧಿವಂತರನ್ನು ಆರಿಸಿಕೊಂಡು ಒಂದೊಂದು ಕುಲದಲ್ಲಿ ಸಾವಿರ ಜನರಿಗೆ ಒಬ್ಬರಂತೆ, ನೂರು ಜನರಿಗೆ ಒಬ್ಬರಂತೆ, ಐವತ್ತು ಜನರಿಗೆ ಒಬ್ಬರಂತೆ ಮತ್ತು ಹತ್ತು ಜನರಿಗೆ ಒಬ್ಬರಂತೆ ಅಧಿಕಾರಿಗಳನ್ನಾಗಿಯೂ ಮತ್ತು ಉಪ ಅಧಿಕಾರಿಗಳನ್ನಾಗಿಯೂ ನೇಮಿಸಿದೆನು.


ಆಗ ಯೆಹೋವನು ಮೋಶೆಗೆ ಹೇಳಿದ್ದೇನೇಂದರೆ, “ಇಸ್ರಾಯೇಲರಲ್ಲಿ ಹಿರಿಯರೆಂದೂ ಮತ್ತು ಅಧಿಪತಿಗಳೆಂದೂ ನೀನು ತಿಳಿದುಕೊಂಡಿರುವ ಎಪ್ಪತ್ತು ಮಂದಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಕರೆದು ಅಲ್ಲಿ ನಿನ್ನೊಡನೆ ನಿಲ್ಲಿಸಿಕೋ.


ಈ ಕೆಲಸಕ್ಕಾಗಿ ಕುಲದಲ್ಲಿ ಆಯಾ ಕುಲದ ಒಂದೊಂದು ಮುಖ್ಯಸ್ಥನಾಗಿರುವ ಒಬ್ಬೊಬ್ಬ ಸಹಾಯಕನಿರಬೇಕು ಹಾಗೂ ತನ್ನ ಕುಲಕ್ಕಾಗಿ ಹೋರಾಡುವ ಜನರನ್ನು ಮುಖ್ಯಸ್ಥನು ಮುನ್ನಡೆಸಬೇಕು.


ಮೋಶೆಯು ಇಸ್ರಾಯೇಲರಲ್ಲಿ ಸಮರ್ಥರಾದವರನ್ನು ಆರಿಸಿಕೊಂಡು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು.


ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಪಾರಾನ್ ಅರಣ್ಯದಿಂದ ಇಸ್ರಾಯೇಲರ ಮುಖ್ಯಸ್ಥರನ್ನು ಕಳುಹಿಸಿದನು.


ಅದಲ್ಲದೆ ಕಾದೇಶ್ ಬರ್ನೇಯದಲ್ಲಿ ಯೆಹೋವನು ನಿಮಗೆ, “ಬೆಟ್ಟದ ಸೀಮೆಯನ್ನು ಹತ್ತಿ ನಾನು ನಿಮಗೆ ಕೊಟ್ಟಿರುವ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ” ಎಂದು ಅಪ್ಪಣೆಕೊಟ್ಟಾಗಲೂ ನೀವು ನಿಮ್ಮ ದೇವರಾದ ಯೆಹೋವನ ಆ ಆಜ್ಞೆಯನ್ನು ಧಿಕ್ಕರಿಸಿ, ಆತನನ್ನು ನಂಬದೆ, ಆತನ ಮಾತನ್ನು ಅಲಕ್ಷ್ಯ ಮಾಡಿದಿರಿ.


ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು.


ಆಗ ನೀನು ಇಸ್ರಾಯೇಲರ ಕುಲಕ್ಕೆ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸಿಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು