Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 13:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವರು ಬೆಟ್ಟವನ್ನು ಹತ್ತಿ ಕಾನಾನ್ ದೇಶದ ದಕ್ಷಿಣ ಪ್ರಾಂತ್ಯವನ್ನು ದಾಟಿ ಹೆಬ್ರೋನಿಗೆ ಬಂದರು. ಅಲ್ಲಿ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಐಗುಪ್ತ ದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರ್ಷ ಮೊದಲು ನಿರ್ಮಿಸಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವರು ಬೆಟ್ಟವನ್ನು ಹತ್ತಿ ನೆಗೆಬನ್ನು ದಾಟಿ, ಹೆಬ್ರೋನಿಗೆ ಬಂದರು. ಅಲ್ಲಿ ‘ಅನಕಿಮ್’ ವಂಶಸ್ಥರಾದ ಅಹೀಮನ್, ಶೇಷೈ, ತಲ್ಮೈ ಎಂಬವರು ಇದ್ದರು. (ಹೆಬ್ರೋನ್ ಪಟ್ಟಣ ಈಜಿಪ್ಟ್ ದೇಶದಲ್ಲಿರುವ ಚೋಮ್ ಪಟ್ಟಣಕ್ಕಿಂತ ಏಳು ವರ್ಷ ಮೊದಲೆ ಕಟ್ಟಲ್ಪಟ್ಟಿತ್ತು)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವರು ಬೆಟ್ಟವನ್ನು ಹತ್ತಿ ಕಾನಾನ್‍ದೇಶದ ದಕ್ಷಿಣಪ್ರಾಂತ್ಯವನ್ನು ದಾಟಿ ಹೆಬ್ರೋನಿಗೆ ಬಂದರು. ಅಲ್ಲಿ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತರಾದ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಐಗುಪ್ತದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರುಷ ಮುಂಚೆ ಕಟ್ಟಲ್ಪಟ್ಟದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅವರು ನೆಗೆವ್ ಮೂಲಕ ದೇಶವನ್ನು ಪ್ರವೇಶಿಸಿ ಹೆಬ್ರೋನಿಗೆ ಹೋದರು. ಹೆಬ್ರೋನ್ ಪಟ್ಟಣವು ಈಜಿಪ್ಟ್ ದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರ್ಷಗಳ ಮುಂಚೆ ಕಟ್ಟಲ್ಪಟ್ಟಿತ್ತು. ಅಲ್ಲಿ ಅಹೀಮನ್, ಶೇಫೈ ಮತ್ತು ತಲ್ಮೈ ಎಂಬವರು ವಾಸಿಸುತ್ತಿದ್ದರು. ಇವರು ಅನಾಕನ ಸಂತತಿಯವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವರು ನೆಗೆವನ್ನು ದಾಟಿ ಹೆಬ್ರೋನಿನವರೆಗೆ ಬಂದರು. ಅಲ್ಲಿ ಅನಾಕನ ಮಕ್ಕಳಾದ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತರಾದ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಈಜಿಪ್ಟ್ ದೇಶದ ಚೋವನ್ ಪಟ್ಟಣಕ್ಕಿಂತ ಏಳು ವರ್ಷಗಳು ಮೊದಲು ನಿರ್ಮಿಸಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 13:22
21 ತಿಳಿವುಗಳ ಹೋಲಿಕೆ  

ಆತನು ಐಗುಪ್ತದಲ್ಲಿ ಮಾಡಿದ ಮಹತ್ಕಾರ್ಯಗಳನ್ನು, ಸೋನ್ ಸೀಮೆಯಲ್ಲಿ ನಡೆಸಿದ ಅದ್ಭುತಗಳನ್ನೂ ಮರೆತುಬಿಟ್ಟರು.


ಆತನು ಐಗುಪ್ತದೇಶದ ಸೋನ್ ಸೀಮೆಯಲ್ಲಿ, ಅವರ ಪೂರ್ವಿಕರ ಸಮಕ್ಷದಲ್ಲಿಯೇ ಆಶ್ಚರ್ಯ ಕ್ರಿಯೆಗಳನ್ನು ನಡೆಸಿದನು.


ಚೋಯನಿನ ಪ್ರಭುಗಳು ಕೇವಲ ಬುದ್ಧಿಹೀನರು. ಫರೋಹನ ಮಂತ್ರಿಗಳಲ್ಲಿ ಜ್ಞಾನವುಳ್ಳ ಸಲಹೆಗಾರರ ಆಲೋಚನೆಯೂ ಜ್ಞಾನರಹಿತವಾಗಿರುತ್ತದೆ. ನೀನು ಫರೋಹನಿಗೆ, “ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜನ ವಂಶದವನು? ಎಂದು ಹೇಗೆ ತಾನೆ ಹೇಳಿಕೊಳ್ಳುವಿರಿ.


ಆ ಫರೋಹನ ಪ್ರಧಾನರು ಚೋವನಿನಲ್ಲಿದ್ದರೂ, ಅವನ ದೂತರು ಹಾನೇಸಿಗೆ ಬಂದಿದ್ದಾರೆ.


ಅವರು ಮೊದಲು ಕಿರ್ಯತರ್ಬ ಎಂಬ ಹೆಸರಿದ್ದ ಹೆಬ್ರೋನಿಗೆ ಹೋಗಿ ಅಲ್ಲಿದ್ದ ಕಾನಾನ್ಯರ ಮೇಲೆ ಬಿದ್ದು, ಅವರಲ್ಲಿ ಶೇಷೈ, ಅಹೀಮನ್, ತಲ್ಮೈ ಎಂಬುವರನ್ನು ಸೋಲಿಸಿದರು.


ಚೋಯನಿನ ಪ್ರಭುಗಳು ಮೂರ್ಖರಾಗಿದ್ದಾರೆ. ನೋಫಿನ ಪ್ರಧಾನರು ಮೋಸ ಹೋಗಿದ್ದಾರೆ. ಐಗುಪ್ತದ ಕುಲಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿದ್ದಾರೆ.


ದಾವೀದನು ಹೆಬ್ರೋನಿನಲ್ಲಿ ಯೆಹೂದ್ಯರ ಅರಸನಾಗಿದ್ದದ್ದು ಏಳು ವರ್ಷ ಆರು ತಿಂಗಳುಗಳು.


ಅನಂತರ ದಾವೀದನು ಯೆಹೋವನನ್ನು, “ನಾನು ಯೆಹೂದ ದೇಶದ ಯಾವುದಾದರು ಒಂದು ಪಟ್ಟಣಕ್ಕೆ ಹೋಗಬಹುದೋ?” ಎಂದು ಕೇಳಲು ಆತನು ಹೋಗಬಹುದು ಅಂದನು. ಅವನು ತಿರುಗಿ, “ಯಾವ ಊರಿಗೆ ಹೋಗಲಿ?” ಎಂದು ಕೇಳಿದ್ದಕ್ಕೆ ಹೆಬ್ರೋನಿಗೆ ಹೋಗು ಎಂದು ಉತ್ತರ ಸಿಕ್ಕಿತು.


ಮಹಾಯಾಜಕನಾದ ಆರೋನನ ವಂಶದವರಿಗೆ ಮೇಲೆ ಹೇಳಿದ ಎರಡು ಕುಲಗಳಿಂದ ಹೆಬ್ರೋನೆಂಬ ಆಶ್ರಯ ನಗರವಾದ ಲಿಬ್ನಾ,


ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ ವಂಶದವರಾದ ಉನ್ನತ ಪುರುಷರನ್ನು ನೋಡಿದೆವು. ನಾವು ಅವರ ಮುಂದೆ ಮಿಡತೆಗಳಂತೆ ಇದ್ದೇವೆ ಎಂದು ತಿಳಿದುಕೊಂಡೆವು. ಅವರಿಗೂ ನಾವು ಹಾಗೆಯೇ ಕಾಣಿಸಿದೆವು” ಎಂದು ಹೇಳಿದರು.


ಕಾನಾನ್ ದೇಶದಲ್ಲಿ ಸಂಚರಿಸಿ ನೋಡುವುದಕ್ಕೆ ಮೋಶೆ ಅವರನ್ನು ಕಳುಹಿಸುವಾಗ ಅವರಿಗೆ, “ನೀವು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದ ಮಾರ್ಗವಾಗಿ ಬೆಟ್ಟದ ಸೀಮೆಗೆ ಹತ್ತಿಹೋಗಿ ಆ ದೇಶದ ಸಂಗತಿಯನ್ನೆಲ್ಲಾ ನೋಡಿ ತಿಳಿದುಕೊಳ್ಳಬೇಕು.


ಸಾರಳು ಕಾನಾನ್ ದೇಶದಲ್ಲಿರುವ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಬಂದು ಆಕೆಗಾಗಿ ಗೋಳಾಡಿ ಕಣ್ಣೀರು ಸುರಿಸಿದನು.


ತರುವಾಯ ಅಬ್ರಾಮನು ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನಲ್ಲಿರುವ ಮಮ್ರೆ ಮೋರೆ ಎಂಬ ತೋಪಿಗೆ ಬಂದು ಅಲ್ಲೇ ವಾಸಮಾಡಿಕೊಂಡು, ಯೆಹೋವನಿಗೆ ಯಜ್ಞವೇದಿಯನ್ನು ಕಟ್ಟಿಸಿದನು.


ಆದರೆ ಆ ದೇಶದ ನಿವಾಸಿಗಳು ಬಲಿಷ್ಠರು: ಅವರಿರುವ ಪಟ್ಟಣಗಳು ದೊಡ್ಡದಾಗಿಯೂ, ಕೋಟೆ ಕೊತ್ತಲುಗಳುಳ್ಳದ್ದಾಗಿಯೂ ಇದೆ. ಅದಲ್ಲದೆ ಅಲ್ಲಿ ಉನ್ನತ ಪುರುಷರನ್ನು ನೋಡಿದೆವು.


ಆ ದೇಶದ ಅನಾಕ್ಯರು ಬಲಿಷ್ಠರು ಮತ್ತು ಎತ್ತರವಾದ ಪುರುಷರು ಆಗಿದ್ದಾರೆ. ಅವರ ವಿಷಯ ನಿಮಗೆ ತಿಳಿದೇ ಇದೆ, “ಅನಾಕ್ಯರ ಮುಂದೆ ನಿಲ್ಲಬಲ್ಲವರು ಯಾರಿದ್ದಾರೆ?” ಎಂಬ ಮಾತನ್ನು ಕೇಳಿದ್ದೀರಿ.


ಅನಂತರ ಯೆಹೋಶುವನೂ, ಇಸ್ರಾಯೇಲರೂ ಎಗ್ಲೋನನ್ನು ಬಿಟ್ಟು ಹೆಬ್ರೋನಿಗೆ ಹೋಗಿ ಅದಕ್ಕೆ ವಿರೋಧವಾಗಿ ಯುದ್ಧಮಾಡಿ


ಹೆಬ್ರೋನಿನವರು ಮತ್ತು ದಾವೀದನೂ ಅವನ ಜನರೂ ಸಂಚರಿಸುತ್ತಿದ್ದ ಇತರ ಎಲ್ಲಾ ಸ್ಥಳಗಳವರು ಇವರೇ.


ಆಗ ರೆಫಾಯರಲ್ಲೊಬ್ಬನಾದ ಇಷ್ಬಿಬೆನೋಬ್ ಎಂಬುವನು ದಾವೀದನನ್ನು ಕೊಲ್ಲುಬೇಕೆಂದಿದ್ದನು. ಅವನ ತಾಮ್ರದ ಬರ್ಜಿಯು ಮುನ್ನೂರು ಶೆಕಲ್ (ಬೆಳ್ಳಿನಾಣ್ಯ) ತೂಕದ್ದು. ಅವನು ಸೊಂಟಕ್ಕೆ ಹೊಸ ಕತ್ತಿಯನ್ನು ಕಟ್ಟಿಕೊಂಡಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು