ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿರಿ; ಅಲ್ಲಿ ಹೋಗಿದ್ದ ನಮ್ಮ ಸಹೋದರರು ನಮಗೆ, ‘ಆ ದೇಶದ ಜನರು ನಮಗಿಂತ ಬಲಿಷ್ಠರಾಗಿಯೂ ಮತ್ತು ಎತ್ತರವಾಗಿಯೂ ಇದ್ದಾರೆ. ಅವರಿರುವ ಪಟ್ಟಣಗಳು ದೊಡ್ಡದಾಗಿಯೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳಿಂದ ಇವೆ. ಅಲ್ಲಿ ನಾವು ಎತ್ತರವಾದ ಪುರುಷರನ್ನು ಅಂದರೆ ಅನಾಕೀಮ್ ವಂಶಸ್ಥರ ಮಕ್ಕಳನ್ನು ನೋಡಿದ್ದೇವೆ’ ಎಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ” ಅಂದುಕೊಳ್ಳುತ್ತಿದ್ದಿರಿ.
ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ ವಂಶದವರಾದ ಉನ್ನತ ಪುರುಷರನ್ನು ನೋಡಿದೆವು. ನಾವು ಅವರ ಮುಂದೆ ಮಿಡತೆಗಳಂತೆ ಇದ್ದೇವೆ ಎಂದು ತಿಳಿದುಕೊಂಡೆವು. ಅವರಿಗೂ ನಾವು ಹಾಗೆಯೇ ಕಾಣಿಸಿದೆವು” ಎಂದು ಹೇಳಿದರು.
ಆಗ ರೆಫಾಯರಲ್ಲೊಬ್ಬನಾದ ಇಷ್ಬಿಬೆನೋಬ್ ಎಂಬುವನು ದಾವೀದನನ್ನು ಕೊಲ್ಲುಬೇಕೆಂದಿದ್ದನು. ಅವನ ತಾಮ್ರದ ಬರ್ಜಿಯು ಮುನ್ನೂರು ಶೆಕಲ್ (ಬೆಳ್ಳಿನಾಣ್ಯ) ತೂಕದ್ದು. ಅವನು ಸೊಂಟಕ್ಕೆ ಹೊಸ ಕತ್ತಿಯನ್ನು ಕಟ್ಟಿಕೊಂಡಿದ್ದನು.
ಹೀಗಿರಲು ಯೆಹೋವನು ಆ ದಿನದಂದು ಸೂಚಿಸಿದಂತೆ ಈ ಪರ್ವತ ಪ್ರದೇಶವನ್ನು ನನಗೆ ಕೊಡು ಇದರಲ್ಲಿ ಉನ್ನತ ಪುರುಷರು (ಅನಾಕ್ಯರು) ಇರುತ್ತಾರೆ ಎಂದು ಈ ಪಟ್ಟಣಗಳು ದೊಡ್ಡದೂ, ಕೋಟೆಕೊತ್ತಲುಳ್ಳವುಗಳೂ ಆಗಿವೆ ಎಂದೂ ಆ ಕಾಲದಲ್ಲಿ ನೀನೇ ಕೇಳಿದ್ದೀಯಲ್ಲಾ. ಅವರೆಲ್ಲರನ್ನು ಓಡಿಸಿಬಿಡುವುದಕ್ಕೋಸ್ಕರ ಯೆಹೋವನು ತನ್ನ ಮಾತಿಗನುಸಾರವಾಗಿ ನನಗೆ ಸಹಾಯ ಮಾಡುವನೆಂದು ನಂಬಿಕೊಂಡಿದ್ದೇನೆ” ಅಂದನು.