Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 13:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ದಕ್ಷಿಣ ಸೀಮೆಯಲ್ಲಿ ಅಮಾಲೇಕ್ಯರು, ಬೆಟ್ಟದ ಸೀಮೆಯಲ್ಲಿ ಹಿತ್ತಿಯರು, ಯೆಬೂಸಿಯರು, ಅಮೋರಿಯರು ಸಮುದ್ರತೀರದಲ್ಲಿ ಮತ್ತು ಯೊರ್ದನ್ ಹೊಳೆಯ ಬಳಿಯಲ್ಲಿ ಕಾನಾನ್ಯರೂ ವಾಸವಾಗಿದ್ದಾರೆ” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ದಕ್ಷಿಣ ಪ್ರಾಂತದಲ್ಲಿ ಅಮಾಲೇಕ್ಯರು, ಮಲೆನಾಡಿನಲ್ಲಿ ಹಿತ್ತಿಯರು ಯೆಬೂಸಿಯರು ಹಾಗು ಅಮೋರಿಯರು ಮತ್ತು ಸಮುದ್ರ ತೀರದಲ್ಲಿ ಹಾಗೂ ಜೋರ್ಡನ್ ನದಿಯ ಪರಿಸರದಲ್ಲಿ ಕಾನಾನ್ಯರು ವಾಸವಾಗಿದ್ದಾರೆ,” ಎಂದು ವರದಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ದಕ್ಷಿಣ ಸೀಮೆಯಲ್ಲಿ ಅಮಾಲೇಕ್ಯರೂ ಬೆಟ್ಟದ ಸೀಮೆಯಲ್ಲಿ ಹಿತ್ತಿಯರು, ಯೆಬೂಸಿಯರು, ಅಮೋರಿಯರು ಇವರೂ ಸಮುದ್ರತೀರದಲ್ಲಿ ಮತ್ತು ಯೊರ್ದನ್ ಹೊಳೆಯ ಬಳಿಯಲ್ಲಿ ಕಾನಾನ್ಯರೂ ವಾಸವಾಗಿದ್ದಾರೆ ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಅಮಾಲೇಕ್ಯರು ನೆಗೆವ್‌ನಲ್ಲಿ ವಾಸಿಸುತ್ತಾರೆ. ಹಿತ್ತಿಯರು, ಯೆಬೂಸಿಯರು ಮತ್ತು ಅಮೋರಿಯರು ಪರ್ವತ ಪ್ರದೇಶದಲ್ಲಿ ವಾಸಿಸುತ್ತಾರೆ. ಕಾನಾನ್ಯರು ಸಮುದ್ರ ತೀರದಲ್ಲಿಯೂ ಮತ್ತು ಯೋರ್ದನ್ ನದಿಯ ಉದ್ದಕ್ಕೂ ವಾಸಿಸುತ್ತಾರೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅಮಾಲೇಕ್ಯರು ದೇಶದ ನೆಗೆವನಲ್ಲಿ ವಾಸವಾಗಿದ್ದಾರೆ. ಹಿತ್ತಿಯರೂ ಯೆಬೂಸಿಯರೂ ಅಮೋರಿಯರೂ ಪರ್ವತಗಳಲ್ಲಿಯೂ; ಕಾನಾನ್ಯರು ಸಮುದ್ರದ ಬಳಿಯಲ್ಲಿಯೂ ಯೊರ್ದನಿನ ತೀರದಲ್ಲಿಯೂ ವಾಸವಾಗಿದ್ದಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 13:29
27 ತಿಳಿವುಗಳ ಹೋಲಿಕೆ  

ಅಲ್ಲಿ ಅಮಾಲೇಕ್ಯರೂ, ಕಾನಾನ್ಯರೂ ನಿಮ್ಮ ಎದುರಿನಲ್ಲಿ ಇರುವುದರಿಂದ ನೀವು ಅವರ ಕತ್ತಿಯಿಂದ ಸತ್ತುಹೋಗುವಿರಿ. ನೀವು ಯೆಹೋವನ ಮಾತನ್ನು ಅನುಸರಿಸದೆ ತಿರುಗಿಬಿದ್ದ ಕಾರಣ ಆತನು ನಿಮ್ಮೊಂದಿಗೆ ಇರುವುದಿಲ್ಲ” ಎಂದು ಹೇಳಿದನು.


ಇವರು ಬಿತ್ತನೆಮಾಡಿದಾಗಲೆಲ್ಲಾ ಮಿದ್ಯಾನ್ಯರೂ ಅಮಾಲೇಕ್ಯರೂ ಮೂಡಣ ದೇಶದವರೂ ಇವರಿಗೆ ವಿರೋಧವಾಗಿ ದಂಡೆತ್ತಿ ಬಂದು ಇಳಿದುಕೊಳ್ಳುತ್ತಿದ್ದರು.


ಇವರೆಲ್ಲಾ ಏಕಮನಸ್ಸಿನಿಂದ ಕೂಡಿ, ನಿನಗೆ ವಿರುದ್ಧವಾಗಿ ಒಳಸಂಚು ಮಾಡುತ್ತಾರಲ್ಲಾ;


ದಾವೀದನೂ ಅವನ ಜನರೂ ಮೂರನೆಯ ದಿನ ಚಿಕ್ಲಗ್ ಊರನ್ನು ಮುಟ್ಟಿದರು. ಅಷ್ಟರೊಳಗೆ ಅಮಾಲೇಕ್ಯರು ದಂಡೆತ್ತಿ ದಕ್ಷಿಣ ಪ್ರಾಂತ್ಯಕ್ಕೂ ಚಿಕ್ಲಗ್ ಊರಿಗೂ ಬಂದು ಚಿಕ್ಲಗ್ ಊರನ್ನು ಸುಟ್ಟು ಹಾಳುಮಾಡಿ,


ಇದಲ್ಲದೆ ಅವನು ಅಮಾಲೇಕ್ಯರಿಗೆ ವಿರೋಧವಾಗಿ ದಂಡೆತ್ತಿ ಹೋಗಿ ಪರಾಕ್ರಮದಿಂದ ಅವರನ್ನು ಸದೆಬಡಿದನು. ಇಸ್ರಾಯೇಲ್ಯರನ್ನು ಸುಲಿಗೆಮಾಡುವವರ ಕೈಗೆ ಸಿಕ್ಕದಂತೆ ತಪ್ಪಿಸಿದನು.


ತರುವಾಯ ಅಮಾಲೇಕ್ಯರನ್ನು ನೋಡಿ ಅವರ ವಿಷಯದಲ್ಲಿ ಪ್ರವಾದಿಸಿದ್ದೇನೆಂದರೆ, “ಅಮಾಲೇಕ್ಯರು ಜನಾಂಗಗಳಲ್ಲಿ ಪ್ರಮುಖರಲ್ಲವೇ, ಆದರೂ ನಾಶನವೇ ಅವರ ಗತಿ.”


ಆಗ ಆ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಮತ್ತು ಕಾನಾನ್ಯರೂ ಇಳಿದು ಬಂದು ಇಸ್ರಾಯೇಲರನ್ನು ಹೊಡೆದು ಹೊರ್ಮಾ ಪಟ್ಟಣದವರೆಗೂ ಬೆನ್ನಟ್ಟಿ ಸಂಹರಿಸಿದರು.


ಅಮಾಲೇಕ್ಯರೂ, ಕಾನಾನ್ಯರೂ ಆ ತಗ್ಗಿನಲ್ಲಿ ವಾಸವಾಗಿದ್ದಾರೆ. ನೀವು ನಾಳೆ ಹಿಂದಿರುಗಿ ಕೆಂಪು ಸಮುದ್ರಕ್ಕೆ ಹೋಗುವ ದಾರಿಯಲ್ಲಿ ಅರಣ್ಯಕ್ಕೆ ಪ್ರಯಾಣಮಾಡಬೇಕು” ಎಂದು ಹೇಳಿದನು.


ಐಗುಪ್ತ ದೇಶದಲ್ಲಿ ನಿಮಗುಂಟಾದ ದುರವಸ್ಥೆಯಿಂದ ನಿಮ್ಮನ್ನು ಬಿಡಿಸಿ, ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರೂ, ಹಿತ್ತಿಯರೂ, ಅಮೋರಿಯರೂ, ಪೆರಿಜೀಯರೂ, ಹಿವ್ವಿಯರೂ, ಯೆಬೂಸಿಯರೂ, ವಾಸವಾಗಿರುವ ದೇಶಕ್ಕೆ ಬರಮಾಡಬೇಕೆಂದು ನಿರ್ಣಯಿಸಿದ್ದೇನೆ” ಎಂಬುದಾಗಿ ಅವರಿಗೆ ಹೇಳು.


ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.


ಆ ಮೇಲೆ ಅವರು ಹಿಂದಿರುಗಿಕೊಂಡು ಕಾದೇಶ್ ಎನ್ನುವ ಎನ್ಮಿಷ್ಟಾಟಿಗೆ ಬಂದು ಅಮಾಲೇಕ್ಯರ ಸಮಸ್ತ ನಾಡನ್ನೂ ಹಚಚೋನ್ ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಗೆದ್ದರು.


ಕಾನಾನ್ ದೇಶದಲ್ಲಿ ಸಂಚರಿಸಿ ನೋಡುವುದಕ್ಕೆ ಮೋಶೆ ಅವರನ್ನು ಕಳುಹಿಸುವಾಗ ಅವರಿಗೆ, “ನೀವು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದ ಮಾರ್ಗವಾಗಿ ಬೆಟ್ಟದ ಸೀಮೆಗೆ ಹತ್ತಿಹೋಗಿ ಆ ದೇಶದ ಸಂಗತಿಯನ್ನೆಲ್ಲಾ ನೋಡಿ ತಿಳಿದುಕೊಳ್ಳಬೇಕು.


ಇಸ್ರಾಯೇಲರು ಮೋಶೆಗೆ ವಿರುದ್ಧವಾಗಿ ಗುಣುಗುಟ್ಟಿದರು. ಕಾಲೇಬನು ಅವರನ್ನು ಸುಮ್ಮನಿರಿಸಿ, “ನಾವು ನಿರ್ಭಯವಾಗಿ ಆ ಬೆಟ್ಟದ ಸೀಮೆಗೆ ಹತ್ತಿಹೋಗಿ ಅದನ್ನು ಸ್ವಾಧೀನಪಡಿಸಿಕೊಳ್ಳೋಣ. ಅದನ್ನು ಜಯಿಸಲು ನಾವು ಶಕ್ತರಾಗಿದ್ದೇವೆ” ಎಂದು ಹೇಳಿದನು.


ಯೊರ್ದನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲಾ ಅರಸರು ಮತ್ತು ಸಮುದ್ರದ ಬಳಿಯಲ್ಲಿದ್ದ ಎಲ್ಲಾ ಕಾನಾನ್ಯರ ರಾಜರು, ಯೆಹೋವನು ಇಸ್ರಾಯೇಲ್ಯರ ಮುಂದೆ ಯೊರ್ದನಿನ ಹೊಳೆಯನ್ನು ಬತ್ತಿಸಿ, ಅವರನ್ನು ದಾಟಿಸಿದನೆಂಬ ವಾರ್ತೆ ಕೇಳಲು ಅವರ ಎದೆಯೊಡೆದು ಹೋಯಿತು. ಇಸ್ರಾಯೇಲ್ಯರ ನಿಮಿತ್ತವಾಗಿ ಅವರು ಬಲಗುಂದಿ ಹೋದರು.


ಯೊರ್ದನ್ ನದಿಯ ಆಚೆಗಿರುವ ಬೆಟ್ಟದ ಮೇಲಿನ ಪ್ರದೇಶ, ಕಣಿವೆ ಪ್ರದೇಶ, ಲೆಬನೋನಿನ ಎದುರಿಗಿರುವ ಮಹಾಸಾಗರದ ತೀರಪ್ರದೇಶ ಇವುಗಳಲ್ಲಿ ವಾಸವಾಗಿದ್ದ ಅಮೋರಿಯ, ಹಿತ್ತಿಯ, ಕಾನಾನ್, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ರಾಜರು ನಡೆದ ಸಂಗತಿಯನ್ನು ಕೇಳಿದರು ಹಾಗೂ


ಆಗ ಯೆರೂಸಲೇಮ್, ಹೆಬ್ರೋನ್, ಯರ್ಮೂತ್, ಲಾಕೀಷ್, ಎಗ್ಲೋನ್ ಎಂಬ ಪಟ್ಟಣಗಳ ಐದು ಮಂದಿ ಅಮೋರಿಯ ರಾಜರು ಒಟ್ಟಾಗಿ ಸೇರಿ ದಂಡೆತ್ತಿ ಬಂದರು. ಅವರು ಗಿಬ್ಯೋನಿಗೆ ಮುತ್ತಿಗೆಹಾಕಿ ಯುದ್ಧಮಾಡಿದರು.


ಗಿಬ್ಯೋನ್ಯರು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ದೂತರನ್ನು ಕಳುಹಿಸಿದರು. “ನಿಮ್ಮ ಸೇವಕರಾದ ನಮ್ಮನ್ನು ಕೈಬಿಡದೆ, ಬೇಗನೆ ಬಂದು ಸಹಾಯಮಾಡಿ ನಮಗೆ ವಿರೋಧವಾಗಿ ಸೇರಿ ಬಂದಿರುವ ಈ ಬೆಟ್ಟದ ಸೀಮೆಯ ಎಲ್ಲಾ ಅಮೋರಿಯ ರಾಜರಿಂದ ನಮ್ಮನ್ನು ತಪ್ಪಿಸಿರಿ” ಎಂದು ಬೇಡಿಕೊಂಡರು.


ಅವರು ಎಕ್ರೋನ್ ಮೊದಲುಗೊಂಡು ಗತ್ ಊರಿನ ವರೆಗೆ ಇಸ್ರಾಯೇಲರಿಂದ ಕಿತ್ತುಕೊಂಡಿದ್ದ ಎಲ್ಲಾ ಪಟ್ಟಣಗಳು ಇಸ್ರಾಯೇಲರಿಗೇ ದೊರಕಿದವು. ಅವುಗಳಿಗೆ ಸೇರಿದ ಗ್ರಾಮಗಳನ್ನೂ ಇಸ್ರಾಯೇಲರು ಫಿಲಿಷ್ಟಿಯರಿಂದ ತೆಗೆದುಕೊಂಡರು. ಇಸ್ರಾಯೇಲರಿಗೂ ಅಮೋರಿಯರಿಗೂ ಸಮಾಧಾನವಿತ್ತು.


ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿ ಅಧಿಕ ಸಂಖ್ಯೆಯಲ್ಲಿಯೂ ಮತ್ತು ಅಧಿಕ ಬಲದಲ್ಲಿಯೂ ನಿಮಗೆ ಮೀರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವನು.


ನಿಮ್ಮ ದೇವರಾದ ಯೆಹೋವನು ನಿಮಗೆ ಅಪ್ಪಣೆಕೊಟ್ಟಂತೆ ಇವರನ್ನು ಅಂದರೆ ಹಿತ್ತಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು, ಇವರೆಲ್ಲರನ್ನೂ ನಾಶಮಾಡಿಬಿಡಬೇಕು.


“ಜೀವಸ್ವರೂಪನಾದ ದೇವರು ನಿಮ್ಮ ಮಧ್ಯದಲ್ಲಿ ಇದ್ದಾನೆಂದು ಆತನು ಕಾನಾನ್ಯರನ್ನು, ಹಿತ್ತಿಯರನ್ನು, ಹಿವ್ವಿಯರನ್ನು, ಪೆರಿಜೀಯರನ್ನು, ಗಿರ್ಗಾಷಿಯರನ್ನು, ಅಮೋರಿಯರನ್ನು, ಯೆಬೂಸಿಯರನ್ನು ನಿಮ್ಮ ಮುಂದೆ ಓಡಿಸಿಬಿಡುವನೆಂದು ನಿಮಗೆ ಗೊತ್ತಾಗುವುದು.


ಇಸ್ರಾಯೇಲರು ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು ಎಂಬೀ ಜನಾಂಗಗಳ ಮಧ್ಯದಲ್ಲಿ ವಾಸಮಾಡುತ್ತಾ,


ಆ ಕಾಲದಲ್ಲಿ ಅವನೂ, ಅವನ ಜನರೂ ತೇಲಾಮಿನಿಂದ ಶೂರಿನವರೆಗೂ, ಐಗುಪ್ತ ದೇಶದವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತ್ಯಗಳಲ್ಲಿ ವಾಸಿಸುತ್ತಿರುವ ಗೆಷೂರ್ಯರು, ಗಿಜ್ರೀಯರು, ಅಮಾಲೇಕ್ಯರು ಇವರ ಮೇಲೆ ಆಕ್ರಮಣ ಮಾಡಿ ಸುಲಿದುಕೊಳ್ಳುತ್ತಿದ್ದರು.


ಅವನು ಯಥಾರ್ಥಚಿತ್ತನೆಂದು ಕಂಡು ಅವನಿಗೆ, ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜ್ಜೀಯರು, ಯೆಬೂಸಿಯರು, ಗಿರ್ಗಾಷಿಯರು ಇವರ ದೇಶವನ್ನು ನಿನ್ನ ಸಂತಾನದವರಿಗೆ ಕೊಡುತ್ತೇನೆಂದು ವಾಗ್ದಾನಮಾಡಿ ಅದನ್ನು ನೆರವೇರಿಸಿದ್ದರಿಂದ ನೀನು ನೀತಿಸ್ವರೂಪನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು