ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿರಿ; ಅಲ್ಲಿ ಹೋಗಿದ್ದ ನಮ್ಮ ಸಹೋದರರು ನಮಗೆ, ‘ಆ ದೇಶದ ಜನರು ನಮಗಿಂತ ಬಲಿಷ್ಠರಾಗಿಯೂ ಮತ್ತು ಎತ್ತರವಾಗಿಯೂ ಇದ್ದಾರೆ. ಅವರಿರುವ ಪಟ್ಟಣಗಳು ದೊಡ್ಡದಾಗಿಯೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳಿಂದ ಇವೆ. ಅಲ್ಲಿ ನಾವು ಎತ್ತರವಾದ ಪುರುಷರನ್ನು ಅಂದರೆ ಅನಾಕೀಮ್ ವಂಶಸ್ಥರ ಮಕ್ಕಳನ್ನು ನೋಡಿದ್ದೇವೆ’ ಎಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ” ಅಂದುಕೊಳ್ಳುತ್ತಿದ್ದಿರಿ.
ಇಸ್ರಾಯೇಲರೇ ಕೇಳಿರಿ, ನಿಮಗಿಂತ ಮಹಾ ಬಲಿಷ್ಠ ಜನಾಂಗಗಳನ್ನೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸ್ವಾಧೀನ ಮಾಡಿಕೊಳ್ಳುವುದಕ್ಕೆ ನೀವು ಈ ಯೊರ್ದನ್ ನದಿಯನ್ನು ಇಂದು ದಾಟಲಿದ್ದೀರಿ.
ಇಸ್ರಾಯೇಲರು ಮೋಶೆಗೆ ವಿರುದ್ಧವಾಗಿ ಗುಣುಗುಟ್ಟಿದರು. ಕಾಲೇಬನು ಅವರನ್ನು ಸುಮ್ಮನಿರಿಸಿ, “ನಾವು ನಿರ್ಭಯವಾಗಿ ಆ ಬೆಟ್ಟದ ಸೀಮೆಗೆ ಹತ್ತಿಹೋಗಿ ಅದನ್ನು ಸ್ವಾಧೀನಪಡಿಸಿಕೊಳ್ಳೋಣ. ಅದನ್ನು ಜಯಿಸಲು ನಾವು ಶಕ್ತರಾಗಿದ್ದೇವೆ” ಎಂದು ಹೇಳಿದನು.