ಅರಣ್ಯಕಾಂಡ 13:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಅದಲ್ಲದೆ ಇವರು ತಾವು ಸಂಚರಿಸಿ ನೋಡಿದ ದೇಶದ ವಿಷಯವಾಗಿ ಇಸ್ರಾಯೇಲರಿಗೆ ಅಶುಭ ಸಮಾಚಾರವನ್ನು ಹೇಳುವವರಾಗಿ, “ನಾವು ಸಂಚರಿಸಿ ನೋಡಿದ ದೇಶವು ತನ್ನಲ್ಲಿ ವಾಸಿಸುವವರನ್ನು ನುಂಗಿಬಿಡುತ್ತದೆ. ಅದಲ್ಲದೆ ನಾವು ಅದರಲ್ಲಿ ನೋಡಿದ ಜನರೆಲ್ಲರೂ ಬಹಳ ಎತ್ತರವಾದವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಅದಲ್ಲದೆ ತಾವು ಸಂಚರಿಸಿ ನೋಡಿ ಬಂದ ನಾಡಿನ ವಿಷಯವಾಗಿ ಇಸ್ರಯೇಲರಿಗೆ ಅಶುಭ ಸಮಾಚಾರವನ್ನೇ ಹೇಳುವವರಾದರು. “ನಾವು ಸಂಚಾರಮಾಡಿ ನೋಡಿ ಬಂದ ನಾಡು ತನ್ನಲ್ಲಿ ವಾಸಿಸುವವರನ್ನೇ ಕಬಳಿಸುವಂತಿದೆ. ನಾವು ಅಲ್ಲಿ ನೋಡಿದ ಜನರೆಲ್ಲರು ಬಹು ಎತ್ತರವಾದ ವ್ಯಕ್ತಿಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಅದಲ್ಲದೆ ಇವರು ತಾವು ಸಂಚರಿಸಿ ನೋಡಿದ ದೇಶದ ವಿಷಯವಾಗಿ ಇಸ್ರಾಯೇಲ್ಯರಿಗೆ ಅಶುಭಸಮಾಚಾರವನ್ನು ಹೇಳುವವರಾಗಿ - ನಾವು ಸಂಚರಿಸಿ ನೋಡಿದ ದೇಶವು ತನ್ನಲ್ಲಿ ವಾಸಿಸುವವರನ್ನು ನುಂಗಿಬಿಡುತ್ತದೆ; ಅದಲ್ಲದೆ ನಾವು ಅದರಲ್ಲಿ ನೋಡಿದ ಜನರೆಲ್ಲರೂ ಬಹಳ ಎತ್ತರವಾದವರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 “ನಾವು ಸಂಚರಿಸಿ ವಿಷಯ ಸಂಗ್ರಹಿಸಿಕೊಂಡು ಬಂದ ದೇಶವು ಅಲ್ಲಿ ವಾಸಿಸುವವರನ್ನು ನಾಶಪಡಿಸುವ ದೇಶವಾಗಿದೆ. ನಾವು ಅಲ್ಲಿ ನೋಡಿದ ಎಲ್ಲಾ ಜನರು ರಾಕ್ಷಸರಂತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಅವರು ಸಂಚರಿಸಿ ನೋಡಿದಂಥ ದೇಶದ ವಿಷಯವಾಗಿ ಇಸ್ರಾಯೇಲರಿಗೆ ಅಶುಭ ಸಮಾಚಾರವನ್ನು ಹೇಳುವವರಾಗಿ, “ನಾವು ಸಂಚರಿಸಿ ನೋಡಿ ಬಂದ ದೇಶವು ತನ್ನಲ್ಲಿ ವಾಸವಾಗಿರುವವರನ್ನೇ ತಿಂದುಬಿಡುವ ದೇಶವಾಗಿದೆ. ನಾವು ಅದರಲ್ಲಿ ನೋಡಿದ ಜನರೆಲ್ಲಾ ಮಹಾ ಶರೀರದ ಮನುಷ್ಯರು. ಅಧ್ಯಾಯವನ್ನು ನೋಡಿ |
ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿರಿ; ಅಲ್ಲಿ ಹೋಗಿದ್ದ ನಮ್ಮ ಸಹೋದರರು ನಮಗೆ, ‘ಆ ದೇಶದ ಜನರು ನಮಗಿಂತ ಬಲಿಷ್ಠರಾಗಿಯೂ ಮತ್ತು ಎತ್ತರವಾಗಿಯೂ ಇದ್ದಾರೆ. ಅವರಿರುವ ಪಟ್ಟಣಗಳು ದೊಡ್ಡದಾಗಿಯೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳಿಂದ ಇವೆ. ಅಲ್ಲಿ ನಾವು ಎತ್ತರವಾದ ಪುರುಷರನ್ನು ಅಂದರೆ ಅನಾಕೀಮ್ ವಂಶಸ್ಥರ ಮಕ್ಕಳನ್ನು ನೋಡಿದ್ದೇವೆ’ ಎಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ” ಅಂದುಕೊಳ್ಳುತ್ತಿದ್ದಿರಿ.