ಅರಣ್ಯಕಾಂಡ 13:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
33 ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ ವಂಶದವರಾದ ಉನ್ನತ ಪುರುಷರನ್ನು ನೋಡಿದೆವು. ನಾವು ಅವರ ಮುಂದೆ ಮಿಡತೆಗಳಂತೆ ಇದ್ದೇವೆ ಎಂದು ತಿಳಿದುಕೊಂಡೆವು. ಅವರಿಗೂ ನಾವು ಹಾಗೆಯೇ ಕಾಣಿಸಿದೆವು” ಎಂದು ಹೇಳಿದರು.
33 ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ ವಂಶದವರಾದ ಉನ್ನತಪುರುಷರನ್ನು ನೋಡಿದೆವು. ನಾವು ಅವರ ಮುಂದೆ ವಿುಡತೆಗಳಂತೆ ಇದ್ದೇವೆಂದು ತಿಳಿದುಕೊಂಡೆವು; ಅವರಿಗೂ ನಾವು ಹಾಗೆಯೇ ತೋರಿದೆವು ಅಂದರು.
33 ಪ್ರಚಂಡರಾದ ನೆಫೀಲಿಯರು ಅಲ್ಲಿ ವಾಸವಾಗಿರುವುದನ್ನು ನಾವು ನೋಡಿದೆವು. (ಅನಾಕ್ಯರು ನೆಫೀಲಿಯ ಜನರ ಸಂತತಿಯವರಾಗಿದ್ದಾರೆ.) ಅವರ ಮುಂದೆ ನಾವು ಮಿಡತೆಗಳೊ ಎಂದೆನಿಸಿತು. ಅವರಿಗೂ ಸಹ ನಾವು ಮಿಡತೆಗಳಂತೆ ಕಂಡುಬಂದೆವು” ಎಂದರು.
33 ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ ವಂಶದವರಾದ ಮಹಾಶರೀರವುಳ್ಳ ಪುರುಷರನ್ನು ನೋಡಿದೆವು. ನಾವು ಅವರ ಮುಂದೆ ಮಿಡತೆಗಳ ಹಾಗೆ ಇದ್ದೆವು. ಅವರ ದೃಷ್ಟಿಗೂ ನಾವು ಹಾಗೆಯೇ ಕಾಣಿಸಿದೆವು,” ಎಂದರು.
ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿರಿ; ಅಲ್ಲಿ ಹೋಗಿದ್ದ ನಮ್ಮ ಸಹೋದರರು ನಮಗೆ, ‘ಆ ದೇಶದ ಜನರು ನಮಗಿಂತ ಬಲಿಷ್ಠರಾಗಿಯೂ ಮತ್ತು ಎತ್ತರವಾಗಿಯೂ ಇದ್ದಾರೆ. ಅವರಿರುವ ಪಟ್ಟಣಗಳು ದೊಡ್ಡದಾಗಿಯೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳಿಂದ ಇವೆ. ಅಲ್ಲಿ ನಾವು ಎತ್ತರವಾದ ಪುರುಷರನ್ನು ಅಂದರೆ ಅನಾಕೀಮ್ ವಂಶಸ್ಥರ ಮಕ್ಕಳನ್ನು ನೋಡಿದ್ದೇವೆ’ ಎಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ” ಅಂದುಕೊಳ್ಳುತ್ತಿದ್ದಿರಿ.
ಅನಂತರ ದೇವಪುತ್ರರು ಮನುಷ್ಯ ಪುತ್ರಿಯರೊಂದಿಗೆ ಸಂಗಮಿಸಿದಾಗ ಮಕ್ಕಳು ಹುಟ್ಟಿದರು. ಆ ಕಾಲದಿಂದಲೂ ಅದಾದ ನಂತರವೂ ಜಗದಲ್ಲಿ ನೆಫೀಲಿಯರು ಇದ್ದರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾಗಿದ್ದ ಪರಾಕ್ರಮಶಾಲಿಗಳು ಎಂದು ಹೆಸರಾದವರು.
(ರೆಫಾಯರೊಳಗೆ ಬಾಷಾನಿನ ಅರಸನಾದ ಓಗನೊಬ್ಬನೇ ಉಳಿದಿದ್ದನು. ಅವನ ಮಂಚ ಕಬ್ಬಿಣದ್ದು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈ ಅಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ, ಅಗಲ ನಾಲ್ಕು ಮೊಳ.)
ಮತ್ತೊಮ್ಮೆ ಏಳುವರೆ ಅಡಿ ಎತ್ತರದ ಅತಿ ಬಲವಾದ ಈಟಿಯನ್ನು ಹೊಂದಿದ್ದ ಒಬ್ಬ ಐಗುಪ್ತ್ಯನನ್ನು ಕೊಂದನು. ಆ ಐಗುಪ್ತ್ಯನ ಕೈಯಲ್ಲಿದ್ದ ಈಟಿಯು ನೇಕಾರರ ಕುಂಟೆಯಂತಿತ್ತು. ಆದರೆ ಇವನ ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಈಟಿಯನ್ನು ಕಿತ್ತುಕೊಂಡು ಅದರಿಂದ ಅವನನ್ನು ಕೊಂದನು.
ಅವರು ಬೆಟ್ಟವನ್ನು ಹತ್ತಿ ಕಾನಾನ್ ದೇಶದ ದಕ್ಷಿಣ ಪ್ರಾಂತ್ಯವನ್ನು ದಾಟಿ ಹೆಬ್ರೋನಿಗೆ ಬಂದರು. ಅಲ್ಲಿ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಐಗುಪ್ತ ದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರ್ಷ ಮೊದಲು ನಿರ್ಮಿಸಲಾಗಿತ್ತು.
ಅದೇ ಕಾಲದಲ್ಲಿ ಯೆಹೋಶುವನು ಮಲೆನಾಡುಗಳಾದ ಹೆಬ್ರೋನ್, ದೆಬೀರ್, ಅನಾಬ್ ಎಂಬ ಊರುಗಳಲ್ಲಿಯೂ ಯೆಹೂದ ಹಾಗೂ ಇಸ್ರಾಯೇಲ್ ಪ್ರಾಂತ್ಯದ ಬೆಟ್ಟಗಳಲ್ಲಿಯೂ ವಾಸವಾಗಿದ್ದ ಅನಾಕ್ಯರನ್ನು (ಉನ್ನತ ಪುರುಷರು) ನಾಶಮಾಡಿ ಅವರ ಪಟ್ಟಣಗಳನ್ನು ಹಾಳುಮಾಡಿದನು.
ಹೀಗಿರಲು ಯೆಹೋವನು ಆ ದಿನದಂದು ಸೂಚಿಸಿದಂತೆ ಈ ಪರ್ವತ ಪ್ರದೇಶವನ್ನು ನನಗೆ ಕೊಡು ಇದರಲ್ಲಿ ಉನ್ನತ ಪುರುಷರು (ಅನಾಕ್ಯರು) ಇರುತ್ತಾರೆ ಎಂದು ಈ ಪಟ್ಟಣಗಳು ದೊಡ್ಡದೂ, ಕೋಟೆಕೊತ್ತಲುಳ್ಳವುಗಳೂ ಆಗಿವೆ ಎಂದೂ ಆ ಕಾಲದಲ್ಲಿ ನೀನೇ ಕೇಳಿದ್ದೀಯಲ್ಲಾ. ಅವರೆಲ್ಲರನ್ನು ಓಡಿಸಿಬಿಡುವುದಕ್ಕೋಸ್ಕರ ಯೆಹೋವನು ತನ್ನ ಮಾತಿಗನುಸಾರವಾಗಿ ನನಗೆ ಸಹಾಯ ಮಾಡುವನೆಂದು ನಂಬಿಕೊಂಡಿದ್ದೇನೆ” ಅಂದನು.