Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದಕ್ಕೆ ಮೋಶೆಯು ಯೆಹೋವನಿಗೆ, “ನೀನು ಹೀಗೆ ಮಾಡುವುದಾದರೆ ಐಗುಪ್ತ್ಯರು ಈ ಸುದ್ದಿಯನ್ನು ಕೇಳುವರು. ಅವರ ಕೈಯಿಂದ ನೀನು ಈ ಜನರನ್ನು ಭುಜಪರಾಕ್ರಮದಿಂದ ಬಿಡಿಸಿದ ಈ ಸಂಗತಿಯನ್ನು ಈ ಕಾನಾನ್ ದೇಶದ ನಿವಾಸಿಗಳಿಗೆ ತಿಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದಕ್ಕೆ ಮೋಶೆ: “ನೀವು ಹಾಗೆ ಮಾಡುವುದಾದರೆ ಈಜಿಪ್ಟಿನವರು ಈ ಸಮಾಚಾರವನ್ನು ಕೇಳುವರು. ಅವರ ಕೈಯಿಂದ ನೀವು ಈ ಜನರನ್ನು ಭುಜಪರಾಕ್ರಮದಿಂದ ಬಿಡಿಸಿದ ಸಂಗತಿಯನ್ನು ಈ ಕಾನಾನ್ ನಾಡಿನ ನಿವಾಸಿಗಳಿಗೆ ತಿಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದಕ್ಕೆ ಮೋಶೆ - ನೀನು ಹೀಗೆ ಮಾಡುವದಾದರೆ ಐಗುಪ್ತ್ಯರು ಈ ಸಮಾಚಾರವನ್ನು ಕೇಳುವರು. ನೀನು ತಮ್ಮ ಕೈಯೊಳಗಿಂದ ಈ ಜನವನ್ನು ಭುಜಪರಾಕ್ರಮದಿಂದ ತಪ್ಪಿಸಿದ ಸಂಗತಿಯನ್ನು ಈ [ಕಾನಾನ್] ದೇಶದ ನಿವಾಸಿಗಳಿಗೆ ತಿಳಿಸಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅದಕ್ಕೆ ಮೋಶೆ ಯೆಹೋವನಿಗೆ, “ನೀನು ನಿನ್ನ ಜನರಾದ ಇಸ್ರೇಲರನ್ನು ನಿನ್ನ ಶಕ್ತಿಯ ಮೂಲಕ ಈಜಿಪ್ಟಿನಿಂದ ಕರೆದುಕೊಂಡು ಬಂದೆ. ನೀನು ನಿನ್ನ ಜನರನ್ನು ನಾಶಮಾಡಿದರೆ, ಈಜಿಪ್ಟಿನವರು ಈ ಸುದ್ದಿಯನ್ನು ಕೇಳಿ ಕಾನಾನಿನ ನಿವಾಸಿಗಳಿಗೆ ಅದರ ಬಗ್ಗೆ ತಿಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಮೋಶೆ ಯೆಹೋವ ದೇವರಿಗೆ, “ಹಾಗಾದರೆ ಈ ಸುದ್ದಿಯನ್ನು ಈಜಿಪ್ಟಿನವರು ಕೇಳುವರು. ನೀವು ಅವರಿಂದ ಈ ಜನರನ್ನು ನಿಮ್ಮ ಶಕ್ತಿಯಿಂದ ಬರಮಾಡಿದೆಯಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:13
9 ತಿಳಿವುಗಳ ಹೋಲಿಕೆ  

ಆದುದರಿಂದ ಆತನು ಅವರನ್ನು ಸಂಹರಿಸುವೆನು ಎನ್ನಲು, ಆತನು ಆರಿಸಿಕೊಂಡ ಮೋಶೆಯು ಮಧ್ಯಸ್ಥನಾಗಿ, ಅವರನ್ನು ಸಂಹರಿಸದಂತೆ ಆತನ ಕೋಪವನ್ನು ಶಾಂತಪಡಿಸಿದನು.


‘ಆದರೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಪಾರುಮಾಡುವೆನು ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ, ಅವರ ಸುತ್ತಣ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.


ಆದರೆ ಅವರ ವಿರೋಧಿಗಳ ಹಮ್ಮಿನಿಂದ ತಪ್ಪಾದ ಭಾವನೆ ಮಾಡಿಕೊಂಡು, ‘ಇದು ನಮ್ಮ ಭುಜಬಲದಿಂದಲೇ ಹೊರತು ಯೆಹೋವನಿಂದ ಆಗಲಿಲ್ಲ ಅಂದುಕೊಳ್ಳುವರು’ ಎಂದು ನಾನು ಹಿಂದೆಗೆದೆನು” ಎಂಬುದೇ.


‘ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ, ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.


ಯೆಹೋವನು ದಯದಿಂದ ನಿಮ್ಮನ್ನು ಸ್ವಕೀಯಜನವನ್ನಾಗಿ ಆರಿಸಿಕೊಂಡ ಮೇಲೆ ಆತನು ತನ್ನ ಮಹೋನ್ನತ ನಾಮದ ನಿಮಿತ್ತ ನಿಮ್ಮನ್ನು ಕೈಬಿಡುವುದೇ ಇಲ್ಲ.


ಯೆಹೋವನು ನನಗೆ ಹೀಗೆ ಹೇಳಿದನು, “ಮೋಶೆಯು ಮತ್ತು ಸಮುವೇಲನು ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗುವುದಿಲ್ಲ. ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿ ಹೋಗಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು