Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅಲ್ಲದೆ ಯೆಹೋವನಾದ ನೀನು ಇಸ್ರಾಯೇಲರ ಮಧ್ಯದಲ್ಲಿ ಇರುವ ಸಂಗತಿಯನ್ನು, ನೀನು ಇಸ್ರಾಯೇಲರಿಗೆ ಪ್ರತ್ಯಕ್ಷವಾಗಿ ಕಾಣಿಸಿಕೊಳ್ಳುವುದನ್ನು, ಹಗಲಿನಲ್ಲಿ ಮೇಘಸ್ತಂಭದಲ್ಲಿಯೂ, ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಇದ್ದು ಇವರ ಮುಂದೆ ನಡೆದುಹೋಗುವುದಾಗಿ ಹಾಗೂ ನೀನಿರುವ ಮೇಘವು ಇಸ್ರಾಯೇಲರ ಮೇಲೆ ಇರುವುದಾಗಿಯೂ ಈ ದೇಶದವರು ಕೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅಲ್ಲದೆ ಸರ್ವೇಶ್ವರಾ, ನೀವು ಇಸ್ರಯೇಲರ ನಡುವೆ ಇರುವುದಾಗಿ, ನೀವು ಇಸ್ರಯೇಲರಿಗೆ ಪ್ರತ್ಯಕ್ಷ ಕಾಣಿಸಿಕೊಳ್ಳುವುದಾಗಿ, ಹಗಲಿನಲ್ಲಿ ಮೇಘಸ್ತಂಭದಲ್ಲೂ, ಇರುಳಲ್ಲಿ ಅಗ್ನಿಸ್ತಂಭದಲ್ಲೂ ಇದ್ದು ಇವರ ಮುಂದೆ ನಡೆದು ಹೋಗುವುದಾಗಿ ಹಾಗೂ ನೀವಿರುವ ಮೇಘ ಇಸ್ರಯೇಲರ ಮೇಲೆ ಇರುವುದಾಗಿ ಈ ನಾಡಿನವರು ಕೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅದಲ್ಲದೆ ಈ ದೇಶದವರು ನೀನು ಇಸ್ರಾಯೇಲ್ಯರ ಮಧ್ಯದಲ್ಲಿ ಇರುವ ಸಂಗತಿಯನ್ನು ಕೇಳಿದ್ದಾರೆ. ಹೇಗಂದರೆ ಯೆಹೋವನೇ, ನೀನು ಇಸ್ರಾಯೇಲ್ಯರಿಗೆ ಪ್ರತ್ಯಕ್ಷವಾಗಿ ಕಾಣಿಸಿಕೊಳ್ಳುವವನಾಗಿ ಹಗಲಿನಲ್ಲಿ ಮೇಘಸ್ತಂಭದಲ್ಲಿಯೂ ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಇದ್ದು ಇವರ ಮುಂದೆ ನಡೆದುಹೋಗುತ್ತೀಯಲ್ಲಾ ; ಅದಲ್ಲದೆ ನೀನಿರುವ ಮೇಘವು ಇಸ್ರಾಯೇಲ್ಯರ ಮೇಲೆ ಇದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅದಲ್ಲದೆ, ಈ ದೇಶದವರು ನೀನು ಇಸ್ರೇಲರ ಮಧ್ಯದಲ್ಲಿರುವ ಸಂಗತಿಯನ್ನು ಕೇಳಿದ್ದಾರೆ. ನೀನು ಇಸ್ರೇಲರಿಗೆ ಪ್ರತ್ಯಕ್ಷನಾಗಿ ಕಾಣಿಸಿಕೊಂಡದ್ದು ಅವರಿಗೆ ತಿಳಿದಿದೆ. ನಿನ್ನ ಮೇಘವು ಇಸ್ರೇಲರ ಮೇಲಿರುವುದು ಅವರಿಗೆ ಗೊತ್ತಿದೆ. ನೀನು ಇಸ್ರೇಲರನ್ನು ಹಗಲಲ್ಲಿ ಮೇಘಸ್ತಂಭದ ಮೂಲಕವಾಗಿಯೂ ರಾತ್ರಿಯಲ್ಲಿ ಅಗ್ನಿಸ್ತಂಭದ ಮೂಲಕವಾಗಿಯೂ ಮುನ್ನಡೆಸುತ್ತಿರುವುದು ಅವರಿಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವರು ಈ ದೇಶದ ನಿವಾಸಿಗಳಿಗೆ ಅದನ್ನು ಹೇಳುವರು. ನೀವು ಈ ಜನರ ಸಂಗಡ ಇದ್ದೀಯೆಂದೂ, ಯೆಹೋವ ದೇವರಾದ ನೀವೇ ಮುಖಾಮುಖಿಯಾಗಿ ಕಾಣಿಸಿಕೊಳ್ಳುತ್ತೀರಿ ಎಂದೂ ನೀವು ಹಗಲು ಹೊತ್ತಿನಲ್ಲಿ ಮೇಘಸ್ತಂಭದಲ್ಲಿಯೂ, ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ನಡೆಯುತ್ತೀರಿ ಎಂದೂ ನೀವಿರುವ ಮೇಘವು ಇಸ್ರಾಯೇಲರ ಮೇಲೆ ಇರುವುದಾಗಿಯೂ ಎಂದೂ ಅವರು ಈಗಾಗಲೇ ಕೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:14
23 ತಿಳಿವುಗಳ ಹೋಲಿಕೆ  

ಜನಾಂಗಗಳು ಇದನ್ನು ಕೇಳಿ ನಡುಗುವರು. ಫಿಲಿಷ್ಟಿಯದಲ್ಲಿ ವಾಸಿಸುವವರು ಭಯಭೀತರಾಗುವರು.


ಯೆಹೋವನು ಆ ಬೆಟ್ಟದ ಮೇಲೆ ಬೆಂಕಿಯ ಜ್ಞಾಲೆಯೊಳಗಿಂದ ಮುಖಾಮುಖಿಯಾಗಿ ನಿಮ್ಮ ಸಂಗಡ ಮಾತನಾಡಿದನು.


ಮನುಷ್ಯರೊಳಗೆ ಒಬ್ಬನೂ ತನ್ನ ಸ್ನೇಹಿತನೊಡನೆ ಹೇಗೆ ಮಾತನಾಡುವನೋ ಹಾಗೆಯೇ ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದನು. ಆನಂತರ ಮೋಶೆಯು ಪಾಳೆಯಕ್ಕೆ ಹಿಂತಿರುಗಿ ಬರುವನು. ಆದರೆ ನೂನನ ಮಗನಾದ ಯೆಹೋಶುವನೆಂಬ ಯೌವನಸ್ಥನಾದ ಅವನ ಶಿಷ್ಯನು ಆ ಗುಡಾರದಲ್ಲಿಯೇ ಇರುತ್ತಿದ್ದನು, ಅದರ ಬಳಿಯಿಂದ ದೂರ ಸರಿಯುತ್ತಿರಲಿಲ್ಲ.


ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ.


ಹಗಲಿನಲ್ಲಿ ಮೋಡದಿಂದಲೂ, ರಾತ್ರಿಯಲ್ಲಿ ಬೆಂಕಿಯ ಬೆಳಕಿನಿಂದಲೂ, ಆತನು ಅವರನ್ನು ಕರೆದೊಯ್ದನು.


ಕರುಣಾನಿಧಿಯಾದ ನೀನು ಅವರನ್ನು ಅರಣ್ಯದಲ್ಲಿ ಕೈಬಿಡಲಿಲ್ಲ, ಹಗಲಿನಲ್ಲಿ ಅವರಿಗೆ ದಾರಿ ತೋರಿಸುತ್ತಿದ್ದ ಮೇಘಸ್ತಂಭವೂ, ರಾತ್ರಿವೇಳೆಯಲ್ಲಿ ಅವರು ನಡೆಯತಕ್ಕ ದಾರಿಯಲ್ಲಿ ಬೆಳಕುಕೊಡುತ್ತಿದ್ದ ಅಗ್ನಿಸ್ತಂಭವೂ, ಅವರನ್ನು ಬಿಟ್ಟುಹೋಗದಂತೆ ಮಾಡಿದೆ.


ಹಗಲಿನಲ್ಲಿ ಮೇಘಸ್ತಂಭವಾಗಿಯೂ, ರಾತ್ರಿ ವೇಳೆಯಲ್ಲಿ ಅವರು ನಡೆಯತಕ್ಕ ದಾರಿಯಲ್ಲಿ ಬೆಳಕುಕೊಡುವುದಕ್ಕೆ ಅಗ್ನಿಸ್ತಂಭವಾಗಿಯೂ ಅವರ ಮುಂದೆ ನೀನು ನಡೆದೆ.


ಯೊರ್ದನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲಾ ಅರಸರು ಮತ್ತು ಸಮುದ್ರದ ಬಳಿಯಲ್ಲಿದ್ದ ಎಲ್ಲಾ ಕಾನಾನ್ಯರ ರಾಜರು, ಯೆಹೋವನು ಇಸ್ರಾಯೇಲ್ಯರ ಮುಂದೆ ಯೊರ್ದನಿನ ಹೊಳೆಯನ್ನು ಬತ್ತಿಸಿ, ಅವರನ್ನು ದಾಟಿಸಿದನೆಂಬ ವಾರ್ತೆ ಕೇಳಲು ಅವರ ಎದೆಯೊಡೆದು ಹೋಯಿತು. ಇಸ್ರಾಯೇಲ್ಯರ ನಿಮಿತ್ತವಾಗಿ ಅವರು ಬಲಗುಂದಿ ಹೋದರು.


ನಾನು ಅವನ ಸಂಗಡ ಗುಪ್ತವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ಅವನ ಸಂಗಡ ಮಾತನಾಡುತ್ತೇನೆ. ಅವನು ಯೆಹೋವನ ಸ್ವರೂಪವನ್ನೇ ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರುದ್ಧವಾಗಿ ಮಾತನಾಡುವುದಕ್ಕೆ ಏಕೆ ಭಯಪಡಲಿಲ್ಲ?” ಎಂದನು.


ಅವರು ಪಾಳೆಯದಿಂದ ಹೊರಡುವಾಗ ಹಗಲು ಹೊತ್ತಿನಲ್ಲಿ ಯೆಹೋವನ ಮೇಘವು ಅವರ ಮೇಲೆ ಇರುತ್ತಿತ್ತು.


ಇಸ್ರಾಯೇಲರ ಎಲ್ಲಾ ಪ್ರಯಾಣಗಳಲ್ಲಿಯೂ ಅವರ ಕಣ್ಣುಗಳ ಮುಂದೆ ಹಗಲು ಹೊತ್ತಿನಲ್ಲಿ ಯೆಹೋವನ ಮೇಘವು ಗುಡಾರದ ಮೇಲೆಯೂ ಇರುತ್ತಿತ್ತು; ರಾತ್ರಿ ವೇಳೆಯಲ್ಲಿ ಆ ಮೇಘದೊಳಗೆ ಅಗ್ನಿಯು ಇರುತ್ತಿತ್ತು.


ಆಗ ಯಾಕೋಬನು, “ನಾನು ದೇವರನ್ನು ಪ್ರತ್ಯಕ್ಷವಾಗಿ ನೋಡಿದೆನಲ್ಲಾ; ಆದರೂ ನನ್ನ ಪ್ರಾಣ ಉಳಿದಿದೆ” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು,


ಈಗ ಕನ್ನಡಿಯಲ್ಲಿ ಕಾಣಿಸುವಂತೆ ದೇವರ ಮುಖವು ನಮಗೆ ಮೊಬ್ಬಾಗಿ ಕಾಣಿಸುತ್ತದೆ, ಆದರೆ ಆಗ ನೇರವಾಗಿ ಮುಖಾಮುಖಿಯಾಗಿ ಆತನನ್ನು ನೋಡುವೆವು. ಈಗ ಅಪೂರ್ಣವಾಗಿ ನನಗೆ ತಿಳಿದಿದೆ. ಆದರೆ ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳಿದುಕೊಂಡಂತೆ ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.


ಯೇಸು ಅವನಿಗೆ, “ಫಿಲಿಪ್ಪನೇ, ನಾನು ಇಷ್ಟು ಕಾಲ ನಿಮ್ಮ ಜೊತೆಯಲ್ಲಿಯೇ ಇದ್ದರೂ ಇನ್ನೂ ನೀನು ನನ್ನನ್ನು ತಿಳಿಯಲಿಲ್ಲವೇ! ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ, ಮತ್ತು ನಮಗೆ ತಂದೆಯನ್ನು ತೋರಿಸು ಎಂದು ನೀನು ಹೇಳುವುದಾದರು ಹೇಗೆ?


ಅವರಿಗೆ ಹಗಲಲ್ಲಿ ನೆರಳಿಗೋಸ್ಕರ ಮೋಡವನ್ನು, ಇರುಳಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನು ಮೇಲೆ ಹರಡಿದನು.


ಮೋಶೆಗೆ ಸಮಾನನಾದ ಮತ್ತೊಬ್ಬ ಪ್ರವಾದಿ ಇಸ್ರಾಯೇಲರಲ್ಲಿ ಮತ್ತೆ ಹುಟ್ಟಲೇ ಇಲ್ಲ, ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದನು.


ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಎಂಥವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು.


ನನಗೂ ನಿನ್ನ ಪ್ರಜೆಗಳಾದ ಇವರಿಗೂ ನಿನ್ನ ದಯೆಯು ದೊರಕಿತೆಂಬುದು ನೀನು ನಮ್ಮ ಸಂಗಡ ಬರುವುದರಿಂದಲೇ ಹೊರತು ಬೇರೆ ಯಾವುದರಿಂದ ತಿಳಿದುಬರುವುದು? ಇದರಿಂದ ನಾನೂ ಮತ್ತು ನಿನ್ನ ಪ್ರಜೆಗಳಾದ ಇವರೂ ಭೂಮಿಯಲ್ಲಿರುವ ಬೇರೆ ಎಲ್ಲಾ ಜನಗಳಿಗಿಂತಲೂ ವಿಶೇಷತೆಯುಳ್ಳವರೆಂಬುದು ಗೊತ್ತಾಗುವುದು” ಅಂದನು.


ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಅಮೋರಿಯರ ಬೆಟ್ಟದ ಸೀಮೆಯ ಮಾರ್ಗವನ್ನು ಹಿಡಿದು ನೀವು ನೋಡಿದ ಆ ಘೋರವಾದ ಮಹಾ ಅರಣ್ಯದಲ್ಲಿ ನಡೆದು ಕಾದೇಶ್‌ಬರ್ನೇಯಕ್ಕೆ ಸೇರಿದೆವು.


“ನಮ್ಮ ದೇವರಾದ ಯೆಹೋವನು ತನ್ನ ಘನವನ್ನೂ ಮತ್ತು ಮಹಿಮೆಯನ್ನೂ ನಮಗೆ ತೋರಿಸಿ, ಅಗ್ನಿಜ್ವಾಲೆಯೊಳಗಿಂದ ತನ್ನ ಸ್ವರವನ್ನು ನಮಗೆ ಕೇಳುವಂತೆ ಮಾಡಿದನಲ್ಲಾ. ಮನುಷ್ಯನು ತನ್ನ ಸಂಗಡ ದೇವರು ಮಾತನಾಡಿದರೂ ಸಾಯದೆ ಬದುಕಿದ್ದುಂಟೆಂಬುದು ಈ ಹೊತ್ತು ನಮಗೆ ತಿಳಿಯಬಂತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು