Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾವು ಐಗುಪ್ತ ದೇಶದಿಂದ ಬಂದ ದಿನದಿಂದ ಮೊದಲುಗೊಂಡು ಇದುವರೆಗೆ ನೀನು ಈ ಜನರ ಪಾಪಗಳನ್ನು ಕ್ಷಮಿಸಿದ ಪ್ರಕಾರವೇ ಈಗಲೂ ಮಹಾಕೃಪೆಯಿಂದ ಇವರ ಪಾಪವನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಾವು ಈಜಿಪ್ಟ್ ದೇಶವನ್ನು ಬಿಟ್ಟು ಬಂದ ದಿನದಿಂದ ಇಂದಿನವರೆಗೆ ಈ ಜನರ ಪಾಪಗಳನ್ನು ಕ್ಷಮಿಸಿದ್ದೀರಿ. ಅದೇ ಪ್ರಕಾರ ಈಗಲೂ ಮಹಾಕೃಪೆಯಿಂದ ಇವರ ಪಾಪವನ್ನು ಕ್ಷಮಿಸಬೇಕೆಂದು ಬೇಡಿಕೊಳ್ಳುತ್ತೇನೆ,” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾವು ಐಗುಪ್ತದೇಶದಿಂದ ಬಂದದ್ದು ಮೊದಲುಗೊಂಡು ಇದುವರೆಗೆ ನೀನು ಈ ಜನರ ಪಾಪಗಳನ್ನು ಕ್ಷವಿುಸಿದ ಪ್ರಕಾರವೇ ಈಗಲೂ ಮಹಾಕೃಪೆಯಿಂದ ಇವರ ಪಾಪವನ್ನು ಕ್ಷವಿುಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಾವು ಈಜಿಪ್ಟಿನಿಂದ ಬಂದದ್ದು ಮೊದಲುಗೊಂಡು ಇದುವರೆಗೆ ನೀನು ಈ ಜನರ ಪಾಪಗಳನ್ನು ಕ್ಷಮಿಸಿದ ಪ್ರಕಾರವೇ ಈಗಲೂ ಮಹಾಕೃಪೆಯಿಂದ ಇವರ ಪಾಪವನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಿಮ್ಮ ಪ್ರೀತಿಯು ದೊಡ್ಡದಾಗಿರುವ ಪ್ರಕಾರವೂ ನೀವು ಈಜಿಪ್ಟಿನಿಂದ ಇಲ್ಲಿಯವರೆಗೆ ಈ ಜನರ ಪಾಪಗಳನ್ನು ಮನ್ನಿಸಿದ ಪ್ರಕಾರ ಈಗಲೂ ಈ ಜನರ ಪಾಪವನ್ನು ಮನ್ನಿಸಿರಿ,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:19
23 ತಿಳಿವುಗಳ ಹೋಲಿಕೆ  

“ಕರ್ತನೇ, ನಿನ್ನ ದೃಷ್ಟಿಯಲ್ಲಿ ದಯೆಯು ನನಗೆ ದೊರಕಿರುವುದಾದರೆ ನೀನೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಮೊಂಡುಬುದ್ಧಿಯವರೇ; ಆದಾಗ್ಯೂ ನೀನು ನಮ್ಮ ಪಾಪಗಳನ್ನೂ, ಅಧರ್ಮಗಳನ್ನು ಕ್ಷಮಿಸಿ ನಿನ್ನ ಸ್ವತ್ತಾಗಿ ನಮ್ಮನ್ನು ಸ್ವೀಕರಿಸಬೇಕು” ಎಂದನು.


ಆದರೂ ಆತನು ಕರುಣಾಳುವೂ, ಅಪರಾಧಿಗಳನ್ನು ಸಂಹರಿಸದೆ ಕ್ಷಮಿಸುವವನೂ ಆಗಿ, ತನ್ನ ಸಿಟ್ಟನ್ನೆಲ್ಲಾ ಏರಗೊಡಿಸದೆ, ಅದನ್ನು ಹಲವು ಸಾರಿ ತಡೆಯುತ್ತಾ ಬಂದನು.


ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು, ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.


ಆದರೂ ನೀನು ಕರುಣೆಯಿಟ್ಟು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲವಾದರೆ ನೀನು ಬರೆದಿರುವ ಜೀವಿತರ ಪುಸ್ತಕದಿಂದ ನನ್ನ ಹೆಸರನ್ನೂ ಅಳಿಸಿಬಿಡಬೇಕೆಂದು ಕೇಳಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು.


ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುವುದು ಮತ್ತು ಕರ್ತನು ಅವನನ್ನು ಎಬ್ಬಿಸುವನು; ಅವನು ಪಾಪ ಮಾಡಿದವನಾಗಿದ್ದರೆ, ದೇವರು ಆ ಪಾಪಗಳನ್ನು ಕ್ಷಮಿಸುವನು.


ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ.


ಆಗ ಅವನು ಯೆಹೋವನಿಗೆ ಮೊರೆಯಿಟ್ಟನು, “ಯೆಹೋವನೇ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವುದೆಂದು ಹೇಳಿದೆನಷ್ಟೆ; ನೀನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ ಮನಮರುಗುವವನು ಎಂದು ನಾನು ತಿಳಿದೇ, ತಾರ್ಷೀಷಿಗೆ ಓಡಿಹೋಗಲು ಪ್ರಯತ್ನಿಸಿದ್ದು.


ದೇವರು ನಿನೆವೆಯವರ ಕೃತ್ಯಗಳನ್ನು ನೋಡಿ, ಅವರು ತಮ್ಮ ದುರ್ಮಾರ್ಗತನದಿಂದ ತಿರುಗಿಕೊಂಡರೆಂದು ತಿಳಿದು ತನ್ನ ಮನಸ್ಸನ್ನು ಬದಲಾಯಿಸಿ, ತಾನು ಅವರಿಗೆ ಮಾಡುವೆನೆಂದು ಪ್ರಕಟಿಸಿದ್ದ ಕೇಡನ್ನು ಮಾಡದೆ ಬಿಟ್ಟನು.


ಸ್ವಾಮೀ, ಕೇಳು! ಸ್ವಾಮೀ, ಕ್ಷಮಿಸು! ಸ್ವಾಮೀ, ಲಾಲಿಸು, ಕಾರ್ಯವನ್ನು ಸಾಧಿಸು! ತಡಮಾಡಬೇಡ! ನನ್ನ ದೇವರೇ, ನಿನ್ನ ಜನವೂ, ಪಟ್ಟಣವೂ ನಿನ್ನ ಹೆಸರಿನವುಗಳಾದ ಕಾರಣ ನಿನ್ನ ಹೆಸರನ್ನು ಕಾಪಾಡಿಕೋ!”


ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು.


ಪರಲೋಕದಲ್ಲಿರುವ ನೀನು ಅದನ್ನು ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ಪೂರ್ವಿಕರಿಗೆ ನೀನು ಕೊಟ್ಟ ದೇಶಕ್ಕೆ ಅವರನ್ನು ಮರಳಿ ಬರುವಂತೆಮಾಡು.


ಯೆಹೋವನು ಮೋಶೆಗೆ, “ನಿನಗೆ ನನ್ನ ದಯೆಯು ದೊರಕಿರುವುದರಿಂದಲೂ, ನಾನು ನಿನ್ನ ಹೆಸರನ್ನು ಬಲ್ಲವನಾಗಿರುವುದರಿಂದಲೂ ನಿನಗೋಸ್ಕರ ಈ ಕಾರ್ಯವನ್ನು ಮಾಡುವೆನು” ಎಂದು ಹೇಳಿದನು.


ಈ ಯಾಕೋಬನಲ್ಲಿ ಯಾವ ಆಪತ್ತಿನ ಸೂಚನೆಯೂ ಕಾಣುವುದಿಲ್ಲ ಅಥವಾ ಇಸ್ರಾಯೇಲರಿಗೆ ಯಾವ ವಿಪತ್ತಿನ ಸೂಚನೆಯೂ ತೋರುವುದಿಲ್ಲ. ಅವರಿಗೆ ದೇವರಾಗಿರುವ ಯೆಹೋವನು ಅವರ ಸಂಗಡ ಇದ್ದಾನೆ, ಅವರು ತಮ್ಮ ಅರಸನಿಗಾಗಿ ಮಾಡುವ ಜಯ ಘೋಷವು ಕೇಳಿಸುತ್ತ ಇದೆ.


ನಿನ್ನ ಪ್ರಜೆಯ ದ್ರೋಹವನ್ನು ಕ್ಷಮಿಸಿದ್ದಿ; ಅವರ ಎಲ್ಲಾ ಪಾಪಗಳನ್ನು ಅಳಿಸಿಬಿಟ್ಟಿದ್ದಿ. ಸೆಲಾ


ಯೆಹೋವನೇ, ನಾನು ನಿನ್ನ ಸುದ್ದಿಯನ್ನು ಕೇಳಿ ಹೆದರಿದ್ದೇನೆ; ಯೆಹೋವನೇ, ಯುಗದ ಮಧ್ಯದಲ್ಲಿ ನಿನ್ನ ರಕ್ಷಣಾಕಾರ್ಯವನ್ನು ಪುನಃ ಮಾಡು, ಯುಗದ ಮಧ್ಯದಲ್ಲಿ ಅದನ್ನು ಪ್ರಸಿದ್ಧಿಪಡಿಸು; ನೀನು ರೋಷಗೊಂಡಿದ್ದರೂ ಕರುಣೆಯನ್ನು ಚಿತ್ತಕ್ಕೆ ತಂದುಕೋ.


ಅವು ದೇಶದ ಹುಲ್ಲನ್ನೆಲ್ಲಾ ತಿಂದುಬಿಟ್ಟ ಮೇಲೆ ನಾನು, “ಕರ್ತನಾದ ಯೆಹೋವನೇ, ಲಾಲಿಸು, ನನ್ನನ್ನು ಕ್ಷಮಿಸು. ಯಾಕೋಬ ಜನಾಂಗವು ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗ” ಎಂದು ವಿಜ್ಞಾಪಿಸಿಕೊಂಡೆನು.


ಆಗ ನಾನು, “ಕರ್ತನಾದ ಯೆಹೋವನೇ, ಲಾಲಿಸು. ಇದನ್ನು ನಿಲ್ಲಿಸಿಬಿಡು. ಯಾಕೋಬ ಜನಾಂಗ ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗವಾಗಿದೆ” ಎಂದು ಆಜ್ಞಾಪಿಸಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು